ಆರೋಪಿ ರಾಘವೇಂದ್ರ ಬಂಧನ 
ರಾಜ್ಯ

ಶಿವಮೊಗ್ಗ: ನಡು ರಸ್ತೆಯಲ್ಲೇ ಕಬ್ಬಿಣದ ರಾಡ್ ನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, Video ವೈರಲ್ ಬಳಿಕ ಆರೋಪಿ ಬಂಧನ!

ಸ್ಥಳೀಯ ನಿವಾಸ ಮಂಜುನಾಥ್ ಎಂಬಾತನ ಮೇಲೆ ಕಬ್ಬಿಣದ ರಾಡ್‌ನಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಲ್ಲದೆ ಗಾಯಗೊಂಡು ನೆಲಕ್ಕೆ ಬಿದ್ದಿದ್ದ ಮಂಜುನಾಥ್‌ನ ತಲೆಯ ಮೇಲೆ ಆರೋಪಿ ಮನುಷ್ಯತ್ವ ಮರೆತು ಕಾಲಿಟ್ಟು ಅಟ್ಟಹಾಸ ಮೆರೆದಿದ್ದಾನೆ.

ಶಿವಮೊಗ್ಗ: ವ್ಯಕ್ತಿಯೊಬ್ಬನಿಗೆ ನಡುರಸ್ತೆಯಲ್ಲಿ ಕಬ್ಬಿಣದ ರಾಡ್ ನಿಂದ ಬರ್ಬರವಾಗಿ ಥಳಿಸಿದ ಆರೋಪದ ರಾಘವೇಂದ್ರ ಆಲಿಯಾಸ್ ಆಪಲ್ ರಘು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸನಗರ ತಾಲೂಕಿನ ಗರತಿಕೆರೆ ಸಮೀಪದ ಅವುಕ ಸರ್ಕಲ್ ನಲ್ಲಿ ಶನಿವಾರ ತಡರಾತ್ರಿ ಈ ಅಮಾನವೀಯ ಘಟನೆ ನಡೆದಿತ್ತು. ಈ ಮಾರಣಾಂತಿಕ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸ್ಥಳೀಯ ನಿವಾಸ ಮಂಜುನಾಥ್ ಎಂಬಾತನ ಮೇಲೆ ಕಬ್ಬಿಣದ ರಾಡ್‌ನಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಲ್ಲದೆ ಗಾಯಗೊಂಡು ನೆಲಕ್ಕೆ ಬಿದ್ದಿದ್ದ ಮಂಜುನಾಥ್‌ನ ತಲೆಯ ಮೇಲೆ ಆರೋಪಿ ಮನುಷ್ಯತ್ವ ಮರೆತು ಕಾಲಿಟ್ಟು ಅಟ್ಟಹಾಸ ಮೆರೆದಿದ್ದಾನೆ.

ಈ ಘಟನೆಯ 1 ನಿಮಿಷ 26 ಸೆಕೆಂಡ್ ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದಾರಿಹೋಕರು ಈ ವಿಡಿಯೋ ಮಾಡಿದ್ದು, ಮಂಜುನಾಥ್ ಮೇಲೆ ರಾಘವೇಂದ್ರ ಮನಬಂದಂತೆ ಹಲ್ಲೆ ನಡೆಸಿದ್ದು, ಬಳಿಕ ರಸ್ತೆಬದಿಗೆ ಎಳೆದುಕೊಂಡು ಹೋಗುವುದು ವಿಡಿಯೋದಲ್ಲಿದೆ.

ವಿಡಿಯೋ ಬಳಿಕ ರಘುವನ್ನು ಪೊಲೀಸರು ಬಂಧಿಸಿದ್ದು, ಕೇಸ್ ದಾಖಲಿಸಲಾಗಿದೆ. ಈ ಕೃತ್ಯದ ಹಿಂದಿನ ಕಾರಣವೇನು ಎಂಬುದನ್ನು ತಿಳಿಯಲು ಆರೋಪಿಯ ತನಿಖೆ ನಡೆಸಲಾಗುತ್ತಿದೆ ಎಂದು ಶಿವಮೊಗ್ಗ ಎಸ್ ಪಿ ಬಿ ನಿಖಿಲ್ ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಮಂಜುನಾಥ್ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತನಿಖೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!