ದರ್ಶನ್  
ರಾಜ್ಯ

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾದೇಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಆದೇಶ ಪ್ರಕಟಿಸಿದ್ದು, ದರ್ಶನ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಕೋರ್ಟ್ ನಲ್ಲಿ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದ್ದು, ಖುದ್ದು ಹಾಜರಿ ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಪ್ರಕರಣದ ವಿಚಾರಣೆಯಲ್ಲಿ ತಮಗೆ ವಿಡಿಯೋ ಕಾನ್ಫರೆನ್ಸ್ ಬದಲು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು ಕೋರಿ ನಟ ದರ್ಶನ್ ಅವರು ಮನವಿ ಸಲ್ಲಿಸಿದ್ದರು. ಆದರೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಇಂದು ವಜಾಗೊಳಿಸಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಆರೋಪಿಗಳ ಸೂಚನೆ ನೀಡಿದೆ.

ನಟ ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ವಾದ ಮಂಡಿಸಿದ್ದರು. ಖುದ್ದು ಹಾಜರುಪಡಿಸಿದರೆ ಸಾಕ್ಷ್ಯ ವಿಚಾರಣೆ ವೇಳೆ ಸೂಚನೆ ಪಡೆಯಲು ಅನುಕೂಲ ಆಗುತ್ತದೆ. ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಲು ಹೆಡ್ ಫೋನ್ ವ್ಯವಸ್ಥೆ ಇಲ್ಲ. ಹೀಗಾಗಿ ಖುದ್ದು ಹಾಜರಿಗೆ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ ಇದಕ್ಕೆ ಎಸ್​ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ತೀವ್ರ ವ್ಯಕ್ತಪಡಿಸಿದ್ದರು.

‘ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಕಾನೂನಿನಲ್ಲೇ ಅವಕಾಶವಿದೆ. ದರ್ಶನ್ ಅವರನ್ನು ಖುದ್ದು ಹಾಜರುಪಡಿಸಿದರೆ ಕೋರ್ಟ್ ಕಲಾಪಕ್ಕೆ ಅಡ್ಡಿಯಾಗಬಹುದು. ಆದ್ದರಿಂದ ಖುದ್ದು ಹಾಜರಿ ಅಗತ್ಯವಿಲ್ಲ’ ಎಂದು ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.

ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾದೇಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಆದೇಶ ಪ್ರಕಟಿಸಿದ್ದು, ದರ್ಶನ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಭೂಕಬಳಿಕೆ ಆರೋಪದ ನಡುವೆ ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?