ಹರಿಣಿ, ಅಭಿನಂದನ್ ಮತ್ತು ಯದುವೀರ್ 
ರಾಜ್ಯ

ಚಿಕ್ಕಬಾಣಾವರ ಡಬಲ್ ಮರ್ಡರ್ ಗೆ ಮೇಜರ್ ಟ್ವಿಸ್ಟ್: ಅಪ್ಪನ ಕೊಲೆ ನೋಡಿದನೆಂದು 4 ವರ್ಷದ ಮಗನನ್ನೇ ಕೊಂದ ಪಾತಕಿ!

ಮನೆಯಲ್ಲಿದ್ದ ಸೌಟ್‌ನಿಂದ ಅಭಿನಂದನ್ ತಲೆಗೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಈ ವೇಳೆ ಪುತ್ರ ಯದುವೀರ್ ಘಟನೆಯನ್ನು ನೋಡಿದ್ದು, ಮುಂದೆ ತಮಗೆ ತೊಂದರೆಯಾಗಬಹುದು ಎಂದು ಭಾವಿಸಿದ ಹರಿಣಿ ಹಾಗೂ ವಿನಯ್, ಮಗುವನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.

ಬೆಂಗಳೂರು: ಚಿಕ್ಕಬಾಣಾವರದಲ್ಲಿ ಗಂಡ ಹಾಗೂ 5 ವರ್ಷದ ಮಗ ಸತ್ತಿದ್ದರೂ ತನಗೆ ಗೊತ್ತೇ ಇಲ್ಲವೆಂದು ಕಥೆ ಕಟ್ಟಿದ್ದ ಹೆಂಡತಿ ಪ್ರಿಯಕರನೊಂದಿಗೆ ಸೇರಿಕೊಂಡು ಗಂಡ ಹಾಗೂ ಮಗುವನ್ನು ಕೊಲೆ ಮಾಡಿದ ಸತ್ಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ.

ಪ್ರಿಯಕರ ವಿನಯ್ ಜೊತೆ ಸೇರಿ ಗಂಡ ಅಭಿನಂದನ್ ಹಾಗೂ ಮಗನನ್ನು ತಾನೇ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಹರಿಣಿ ತಿಳಿಸಿದ್ದಾಳೆ. ಘಟನೆ ನಡೆದ ರಾತ್ರಿ ಸುಮಾರು 11 ಗಂಟೆ ವೇಳೆಗೆ ಹರಿಣಿ ತನ್ನ ಪ್ರಿಯಕರ ವಿನಯ್‌ನನ್ನು ಮನೆಗೆ ಕರೆಸಿಕೊಂಡಿದ್ದಳು. ಇದೇ ವೇಳೆ ಹರಿಣಿ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿದ್ದಾಳೆ. ಬಳಿಕ ಇಬ್ಬರೂ ಸೇರಿ ಅಭಿನಂದನ್‌ನನ್ನು ಕೊಲೆ ಮಾಡಲು ಮುಂದಾಗಿದ್ದಾರೆ.

ಮನೆಯಲ್ಲಿದ್ದ ಸೌಟ್‌ನಿಂದ ಅಭಿನಂದನ್ ತಲೆಗೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಈ ವೇಳೆ ಪುತ್ರ ಯದುವೀರ್ ಘಟನೆಯನ್ನು ನೋಡಿದ್ದು, ಮುಂದೆ ತಮಗೆ ತೊಂದರೆಯಾಗಬಹುದು ಎಂದು ಭಾವಿಸಿದ ಹರಿಣಿ ಹಾಗೂ ವಿನಯ್, ಮಗುವನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.

ಕೊಲೆ ಬಳಿಕ ಸಾಕ್ಷ್ಯ ನಾಶಪಡಿಸಲು ಹರಿಣಿ ಮನೆಯಲ್ಲಿದ್ದ ರಕ್ತದ ಕಲೆಗಳನ್ನು ತೊಳೆದಿದ್ದಾಳೆ. ಅಭಿನಂದನ್ ಅವರ ರಕ್ತದ ಕಲೆಗಳು ಬಿದ್ದಿದ್ದ ಬಟ್ಟೆಗಳನ್ನು ಬದಲಾಯಿಸಿ, ಅವುಗಳನ್ನು ರಾತ್ರೋರಾತ್ರಿ ತೊಳೆದು ಹಾಕಿದ್ದಳು. ನಂತರ ಮಗುವನ್ನು ಮೇಲೆ ಮಲಗಿಸಿ ಉಸಿರುಗಟ್ಟಿಸಿ ಸಾಯಿಸಿದ್ದಾನೆ ಎಂಬಂತೆ ಬಿಂಬಿಸಲು ಯತ್ನಿಸಿರುವುದಾಗಿ ಹರಿಣಿ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ

ವಿನಯ್ ಪರಾರಿಯಾಗಿದ್ದು, ಕನಕಪುರ ಬಳಿಯ ಹೇರೋಹಳ್ಳಿ ಮತ್ತು ಸುತ್ತಮುತ್ತ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಿನಯ್ ಮನೆಗೆ ಭೇಟಿ ನೀಡಿದಾಗ ಸಿಸಿಟಿವಿ ಕ್ಯಾಮೆರಾಗಳು ಆಫ್ ಆಗಿದ್ದವು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ನಂತರ ಕುಟುಂಬದ ಸ್ಥಳೀಯ ಗ್ರಾಮಕ್ಕೆ ಕರೆದೊಯ್ಯಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

11/9 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!

"ನಾಯಕತ್ವ ಮುಗಿದಿದೆ, ಜರ್ನಿ ಮುಂದುವರಿಯುತ್ತೆ": ಭಾವನಾತ್ಮಕ ಸಂದೇಶದೊಂದಿಗೆ captaincyಗೆ ಗುಡ್‌ಬೈ ಹೇಳಿದ Harmanpreet Kaur..!

FlyDubai ವಿಮಾನ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ: ಇದು ನನ್ನ ವೈಯಕ್ತಿಕ ನಂಬಿಕೆ; ಡೊನಾಲ್ಡ್ ಟ್ರಂಪ್

ಕಾಕ್‌ಪಿಟ್ ದಾಳಿ ಬಳಿಕ 150ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಫ್ಲೈದುಬೈ ವಿಮಾನವನ್ನು ಹೊಡೆದುರುಳಿಸಲು ಇಸ್ರೇಲ್ ಸಿದ್ಧವಾಗಿತ್ತು: ವರದಿ