ಡಿ.ಕೆ ಶಿವಕುಮಾರ್ 
ರಾಜ್ಯ

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನಮಾನ ನೀಡುವುದು ಹಾಗೂ ಅವರ ಕ್ಷೇತ್ರಗಳಿಗೆ ಸಮರ್ಪಕ ಅನುದಾನ ಒದಗಿಸುವ ಭರವಸೆಯನ್ನೂ ಮುಖ್ಯಮಂತ್ರಿ ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರ ಮನವೊಲಿಕೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮುಂದಾಗಿದ್ದಾರೆ.

ಪಕ್ಷದೊಳಗಿನ ಅಸಮಾಧಾನ ಹಾಗೂ ಭಿನ್ನಮತಕ್ಕೆ ಅವಕಾಶ ನೀಡದಂತೆ ಪ್ರತಿ ಜಿಲ್ಲೆಯ ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತವಾಗಿ ಉಪಾಹಾರ ಸಭೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸುವ ಯೋಜನೆಯನ್ನು ಸಿಎಂ ರೂಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನಮಾನ ನೀಡುವುದು ಹಾಗೂ ಅವರ ಕ್ಷೇತ್ರಗಳಿಗೆ ಸಮರ್ಪಕ ಅನುದಾನ ಒದಗಿಸುವ ಭರವಸೆಯನ್ನೂ ಮುಖ್ಯಮಂತ್ರಿ ನೀಡಿದ್ದಾರೆ ಎನ್ನಲಾಗಿದೆ.

ಸೋಮವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಅಸಮಾಧಾನಗೊಂಡ ಕಾಂಗ್ರೆಸ್ ಶಾಸಕರ ನಿಯೋಗದೊಂದಿಗೆ ನಡೆದ ಸಭೆಯಲ್ಲಿ ಡಿ.ಕೆ. ಶಿವಕುಮಾರ್‌ ಈ ಭರವಸೆಗಳನ್ನು ನೀಡಿದ್ದಾರೆಂದು ತಿಳಿದುಬಂದಿದೆ.

ಸಭೆಯಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರೂ ಆಗಿರುವ ಕೆ.ವೈ. ನಂಜೇಗೌಡ ಅವರು, ಈ ಹಿಂದೆ ನೀಡಿದ್ದ ಭರವಸೆಯಂತೆ ತಮಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

ಈ ಹುದ್ದೆಯ ಮೇಲೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಕಿರಿಯ ಸಹೋದರ ಹಾಗೂ ಮಾಜಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್‌ ಮತ್ತು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ ಅವರೂ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಸಭೆಯಲ್ಲಿ ಎತ್ತಿನಹೊಳೆ ಯೋಜನೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್‌, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಕೋಲಾರ ಶಾಸಕ ಕೊತ್ತನೂರು ಮಂಜುನಾಥ್‌, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌, ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ಗೌರಿಬಿದನೂರು ಶಾಸಕ ಪುಟ್ಟಸ್ವಾಮಿ ಗೌಡ, ಕೋಲಾರ ವಿಧಾನ ಪರಿಷತ್‌ ಸದಸ್ಯ ಅನಿಲ್‌ ಕುಮಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video