ಸಂಗ್ರಹ ಚಿತ್ರ 
ರಾಜ್ಯ

ಬಿಸಿಯೂಟ ಯೋಜನೆ: ಶಾಲಾ ಮಕ್ಕಳ ಪೌಷ್ಟಿಕ ಆಹಾರಕ್ಕೆ ಸರ್ಕಾರ ಒತ್ತು; ಮೊಟ್ಟೆ ಖರೀದಿ ಸಬ್ಸಿಡಿ ಹೆಚ್ಚಳಕ್ಕೆ ಚಿಂತನೆ!

ಶಾಲಾ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಪ್ರಸ್ತುತ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮೊಟ್ಟೆಗಳ ವೆಚ್ಚವನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ನೀಡಲಾಗುತ್ತಿರುವ ಮೊಟ್ಟೆಗಳ ಸಬ್ಸಿಡಿ ಮೊತ್ತವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ ಎಂಎಲ್‌ಸಿ ರಾಮೋಜಿಗೌಡ ಅವರು ಕೇಳಿದ ಪ್ರಶ್ನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಉತ್ತರಿಸಿದರು.

ಈ ಕುರಿತು ಶೀಘ್ರದಲ್ಲೇ ಹಣಕಾಸು ಇಲಾಖೆಯೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ, ಸಬ್ಸಿಡಿ ಹೆಚ್ಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಶಾಲಾ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಪ್ರಸ್ತುತ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮೊಟ್ಟೆಗಳ ವೆಚ್ಚವನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಮೊಟ್ಟೆಗಳ ಮಾರುಕಟ್ಟೆ ದರ ಮತ್ತು ಸರ್ಕಾರ ನೀಡುತ್ತಿರುವ ಹಣದ ನಡುವೆ ಭಾರಿ ವ್ಯತ್ಯಾಸವಿದೆ ಎಂದು ರಾಮೋಜಿಗೌಡ ಅವರು ಸದನದ ಗಮನ ಸೆಳೆದರು.

“ಪ್ರಸ್ತುತ ಪ್ರತಿ ವಿದ್ಯಾರ್ಥಿಗೆ ಒಂದು ಮೊಟ್ಟೆಗೆ ಸರ್ಕಾರ ರೂ.6 ಮಾತ್ರ ನೀಡುತ್ತಿದೆ. ಆದರೆ, ಕಳೆದ ಒಂದು ವರ್ಷದಿಂದ ಮಾರುಕಟ್ಟೆಯಲ್ಲಿ ಮೊಟ್ಟೆಯ ಬೆಲೆ ರೂ.8ಕ್ಕಿಂತ ಹೆಚ್ಚಾಗಿದೆ. ಸರ್ಕಾರ ಬಿಡುಗಡೆ ಮಾಡುವ ರೂ.6ರಲ್ಲಿ ಶಾಲಾ ಮಟ್ಟಕ್ಕೆ ಕೇವಲ ರೂ,5 ಮಾತ್ರ ತಲುಪುತ್ತಿದೆ. ಹೀಗಾಗಿ ಮೊಟ್ಟೆ ಖರೀದಿಸಲು ಶಿಕ್ಷಕರು ಮತ್ತು ಶಾಲಾ ಮೇಲ್ವಿಚಾರಣಾ ಸಮಿತಿಗಳು ತಮ್ಮ ಸ್ವಂತ ಹಣ ಖರ್ಚು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದರು.

ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮೊಟ್ಟೆ ಸಬ್ಸಿಡಿಯನ್ನು ಕೂಡಲೇ ಹೆಚ್ಚಿಸಬೇಕು. ಇಲ್ಲವೇ ಮೊಟ್ಟೆ ಖರೀದಿಸುವ ಜವಾಬ್ದಾರಿಯಿಂದ ಶಿಕ್ಷಕರನ್ನು ಮುಕ್ತಗೊಳಿಸಿ, ಏಜೆನ್ಸಿಗಳ ಮೂಲಕ ಪೂರೈಕೆ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಕರನ್ನು ಎಸ್‌ಐಆರ್‌, ಚುನಾವಣೆ, ಜನಗಣತಿ ಸೇರಿದಂತೆ ಹಲವು ಬೋಧಕೇತರ ಕೆಲಸಗಳಿಗೆ ನಿರಂತರವಾಗಿ ಬಳಸಲಾಗುತ್ತಿದೆ. ಇದರಿಂದ ಶಾಲೆಗಳಲ್ಲಿ ಬೋಧನಾ ಕಾರ್ಯಕ್ಕೆ ದೊಡ್ಡ ಹಿನ್ನಡೆಯಾಗುತ್ತಿದೆ. ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರಿಗೆ ಬೋಧನೆಗೆ ಮಾತ್ರ ಆದ್ಯತೆ ನೀಡಬೇಕು ಎಂದು ರಾಮೋಜಿಗೌಡ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ದರ ನಿಗದಿಪಡಿಸುವಾಗ ರಾಷ್ಟ್ರೀಯ ಮಟ್ಟದ ದರ ಮಾನದಂಡಗಳನ್ನು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇರುವ ಶಾಲೆಗಳಲ್ಲಿ ಮೊಟ್ಟೆಗಳ ಬಜೆಟ್ ನಿರ್ವಹಿಸುವುದು ಸುಲಭ. ಆದರೆ, ಶೇ.100ರಷ್ಟು ಹಾಜರಾತಿ ಇರುವ ಶಾಲೆಗಳು ಪ್ರಸ್ತುತ ಸಮಸ್ಯೆ ಎದುರಿಸುತ್ತಿರುವುದು ನಿಜ. ದೇಶಾದ್ಯಂತ ಒಂದು ಮೊಟ್ಟೆಯ ಸರಾಸರಿ ಬೆಲೆ ಪ್ರಸ್ತುತ ರೂ.7ರಷ್ಟಿದೆ. ಹೀಗಾಗಿ ರಾಜ್ಯದಲ್ಲಿಯೂ ಸಬ್ಸಿಡಿ ಹೆಚ್ಚಿಸಲು ಹಣಕಾಸು ಇಲಾಖೆಯ ಒಪ್ಪಿಗೆ ಅಗತ್ಯ” ಎಂದು ಹೇಳಿದರು.

ಶೀಘ್ರದಲ್ಲೇ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಿ, ಶಾಲಾ ಆಡಳಿತ ಮಂಡಳಿಗಳಿಗೆ ಸೂಕ್ತ ಪರಿಹಾರ ಒದಗಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!