ಮಂಕಾಳ ವೈದ್ಯ ಮತ್ತು ಉಮಾಶ್ರೀ 
ರಾಜ್ಯ

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ!

ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೋಬ್ಬರು ನಾಮಪತ್ರ ಸಲ್ಲಿಸದ ಕಾರಣ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿನ್ನೆ ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೋಬ್ಬರು ನಾಮಪತ್ರ ಸಲ್ಲಿಸದ ಕಾರಣ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಬೆಳಗ್ಗೆ ವಿಧಾನಸಭೆಯಲ್ಲಿ ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಮಂಕಾಳು ವೈದ್ಯ ಅವರ ಹೆಸರನ್ನು ಅನುಮೋದಿಸಿದರು.

ಬಳಿಕ ಸದನ ಎಲ್ಲಾ ಸದಸ್ಯರ ಸರ್ವಾನುಮತದಿಂದ ಮಂಕಾಳ ವೈದ್ಯ ಅವರು ಉಪಸಭಾದ್ಯಕ್ಷರಾಗಿ ಆಯ್ಕೆಯಾದರು. ಸ್ಪೀಕರ್ ಜಿ.ಎಸ್. ಪಾಟೀಲ್ ಅವರು ಧ್ವನಿ ಮತದ ನಂತರ ವೈದ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಘೋಷಿಸಿದರು.

ಕೆಲವು ದಿನಗಳ ಹಿಂದೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಲ್ಲಿ ರುದ್ರಪ್ಪ ಲಮಾಣಿ ಅವರು ಸೇರ್ಪಡೆಗೊಂಡ ನಂತರ ರಾಜೀನಾಮೆ ನೀಡಿದ ನಂತರ ಉಪಸಭಾಪತಿ ಸ್ಥಾನ ಖಾಲಿಯಾಗಿತ್ತು. ಈ ಹಿಂದೆ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಉಪಸಭಾಪತಿ ಹುದ್ದೆಗೆ ಪಕ್ಷದ ನಾಮನಿರ್ದೇಶಿತರನ್ನಾಗಿ ಹೆಸರಿಸಿತ್ತು.

ಆದರೆ ನಂತರ ಅವರನ್ನು ಕ್ಯಾಬಿನೆಟ್ ಸಚಿವರ ಸ್ಥಾನಮಾನದೊಂದಿಗೆ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಲಾಯಿತು.. ನಂತರ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪ ಸಭಾಧ್ಯಕ್ಷರ ಪೀಠದಲ್ಲಿ ಕೂರಿಸಿದರು.

ಕರ್ನಾಟಕ ವಿಧಾನ ಪರಿಷತ್ತಿನ ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ ಎಂಎಲ್‌ಸಿ ಉಮಾಶ್ರೀ ಮಂಗಳವಾರ ಸರ್ವಾನುಮತದಿಂದ ಆಯ್ಕೆಯಾದರು. ಉಮಾಶ್ರೀ ಸೋಮವಾರ ನಾಮಪತ್ರ ಸಲ್ಲಿಸಿದ್ದರು.

ಉಮಾಶ್ರೀ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ನವನಕರ್ ಗ್ರಾಮದವರಾಗಿದ್ದಾರೆ. 1957 ರಲ್ಲಿ ಜನಿಸಿದ ಉಮಾಶ್ರೀ ತೀವ್ರ ಬಡತನದ ಹಿನ್ನೆಲೆಯಿಂದ ಬಂದವರು, ಎಸ್‌ಎಸ್‌ಎಲ್‌ಸಿ ವರೆಗೆ ಮಾತ್ರ ಅಧ್ಯಯನ ಮಾಡಿದ್ದರು,, ಆದರೆ ನಂತರ ರಾಜ್ಯಶಾಸ್ತ್ರದಲ್ಲಿ ಎಂಎಸ್ಸಿ ಪಡೆದರು.

ಅವರು 2001 ರಲ್ಲಿ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡರು ಮತ್ತು 2007 ರವರೆಗೆ ಸೇವೆ ಸಲ್ಲಿಸಿದರು. ಅವರು 2008 ರ ವಿಧಾನಸಭಾ ಚುನಾವಣೆಯಲ್ಲಿ ತೇರದಾಳದಿಂದ ಸ್ಪರ್ಧಿಸಿ ಸೋತರು, ನಂತರ 2013 ರಲ್ಲಿ ಗೆದ್ದು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾದರು.

ಉಮಾಶ್ರೀ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಸಬಲೀಕರಣ, ಹಿರಿಯ ನಾಗರಿಕರ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಖಾತೆಗಳನ್ನು ನಿರ್ವಹಿಸಿದರು ಮತ್ತು 2016 ರಲ್ಲಿ ಅವರ ಇಲಾಖೆಯ ಕಾರ್ಯಕ್ಷಮತೆಗಾಗಿ ಅವರನ್ನು ಗೌರವಿಸಲಾಯಿತು.

ಪರಿಷತ್ತಿನಲ್ಲಿ ಉಮಾಶ್ರೀ ಅವರನ್ನು ಅಭಿನಂದಿಸಿದ ಸಭಾನಾಯಕಿ ಯತೀಂದ್ರ ಸಿದ್ದರಾಮಯ್ಯ, ಬಡತನ ಮತ್ತು ಹಲವಾರು ಸವಾಲುಗಳನ್ನು ಮೆಟ್ಟಿ ನಿಂತ ನಟಿ ಮತ್ತು ರಾಜಕಾರಣಿಯಾಗಿ ತಮ್ಮನ್ನು ತಾವು ಸ್ಥಾಪಿಸಿಕೊಂಡ ಮಹಿಳೆಯರಿಗೆ ಅವರು ಮಾದರಿ ಎಂದು ಬಣ್ಣಿಸಿದರು.

ಉಮಾಶ್ರೀ ಜೀವನೋಪಾಯಕ್ಕಾಗಿ ರಂಗಭೂಮಿಯತ್ತ ತಿರುಗಿದರು ಆದರೆ ಅಂತಿಮವಾಗಿ ಭಾರತೀಯ ಚಿತ್ರರಂಗದ ಅತ್ಯುತ್ತಮ ನಟಿಯರಲ್ಲಿ ಒಬ್ಬರಾಗಿ ಹೊರಹೊಮ್ಮಿದರು ಎಂದು ಯತೀಂದ್ರ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?

‘Dimagi Naxal’ ವಿವಾದ: ‘ಕಾಂಗ್ರೆಸ್‌ ಮಾವೋವಾದಿ ಪಕ್ಷವಾಗಿ ಬದಲಾಗುತ್ತಿದೆ’: ಕಿರಣ್‌ ರಿಜಿಜು ವಾಗ್ದಾಳಿ

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!