ಮಾಜಿ ಶಾಸಕ ವೇಲುಸ್ವಾಮಿ ನೇತೃತ್ವದ ನಾಯಕರು ಗ್ರಾಮಕ್ಕೆ ಭೇಟಿ ನೀಡಿದರು. 
ರಾಜ್ಯ

ಹನೂರು ಶೂಟೌಟ್ ಕೇಸ್: ಸಂತ್ರಸ್ತರ ಕುಟುಂಬಗಳಿಗೆ ತಮಿಳುನಾಡು ನಾಯಕರ ಸಾಂತ್ವನ; ಪರಿಹಾರದ ಭರವಸೆ

ಮೂವರು ಮೃತಪಟ್ಟಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಹೇಳಿಕೆ ನೀಡಿದ ಒಂದು ದಿನದ ಬಳಿಕ, ತಮಿಳುನಾಡು ವಿಧಾನಸಭೆಯಲ್ಲೂ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದರು.

ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ನಡೆದ ಶೂಟೌಟ್ ಪ್ರಕರಣ ಕುರಿತು ತಮಿಳುನಾಡಿನ ರಾಜಕೀಯ ಪಕ್ಷಗಳು ಹಾಗೂ ನಾಯಕರು ಧ್ವನಿ ಎತ್ತಿದ್ದು, ವಿವಾದಕ್ಕೆ ಹೊಸ ತಿರುವು ದೊರೆತಿದೆ.

ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿದ ತಮಿಳುನಾಡಿನ ವಿವಿಧ ಪಕ್ಷಗಳ ನಾಯಕರು, ಹೆಚ್ಚಿನ ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ಮೂವರು ಮೃತಪಟ್ಟಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಹೇಳಿಕೆ ನೀಡಿದ ಒಂದು ದಿನದ ಬಳಿಕ, ತಮಿಳುನಾಡು ವಿಧಾನಸಭೆಯಲ್ಲೂ ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದರು.

ಇದರ ಬೆನ್ನಲ್ಲೇ ವಿವಿಧ ಪಕ್ಷಗಳ ರಾಜಕೀಯ ನಾಯಕರ ನಿಯೋಗವೊಂದು ಹನೂರಿನ ಥೋಮಿಯಾರ್‌ಪಾಳ್ಯದಲ್ಲಿರುವ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿತು.

ಮಾಜಿ ಶಾಸಕ ವೇಲುಸ್ವಾಮಿ ನೇತೃತ್ವದಲ್ಲಿ ವೆಂಕಟೇಶ್ವರನ್, ಧರ್ಮಪುರಿ ಪಿಎಂಕೆ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಹಲವು ನಾಯಕರು ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

ಕರ್ನಾಟಕದ ಗಡಿ ಭಾಗದಲ್ಲಿ ವಾಸಿಸುತ್ತಿರುವ ತಮಿಳು ಮೂಲದ ಜನರಿಗೆ ತಮಿಳುನಾಡು ಸರ್ಕಾರ ನೀಡಿರುವ ಪರಿಹಾರದ ಬಗ್ಗೆಯೂ ಅವರು ಚರ್ಚಿಸಿದರು.

ಈ ಸಂದರ್ಭಧಲ್ಲಿ ಮಾತನಾಡಿದ ಮಾಜಿ ಶಾಸಕ ವೇಲುಸ್ವಾಮಿ ಅವರು, ಮೃತರಿಗೆ ನ್ಯಾಯ ದೊರೆಯುವವರೆಗೆ ತಮ್ಮ ಪಕ್ಷ ಈ ವಿಚಾರವನ್ನು ಮುಂದುವರಿಸಲಿದೆ ಎಂದು ಹೇಳಿದರು.

ಬಳಿಕ ಪಿಎಂಕೆ ನಿಯೋಗ ಥೋಮಿಯಾರ್‌ಪಾಳ್ಯ ಚರ್ಚ್‌ನಲ್ಲಿ ಸಭೆ ನಡೆಸಿ, ಮುಂದಿನ ಹೋರಾಟದ ಕುರಿತು ಚರ್ಚಿಸಿತು. ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸುವುದಾಗಿ ನಾಯಕರು ತಿಳಿಸಿದ್ದಾರೆ.

ತಮಿಳುನಾಡು ನಾಯಕರ ಈ ಭೇಟಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿನ ಈಗಾಗಲೇ ಸೂಕ್ಷ್ಮವಾಗಿರುವ ಈ ಪ್ರಕರಣಕ್ಕೆ ಮತ್ತೊಂದು ರಾಜಕೀಯ ಆಯಾಮವನ್ನು ನೀಡಿದೆ.

ಕಾವೇರಿ ವಿವಾದದ ನಡುವೆಯೇ ಎರಡೂ ರಾಜ್ಯಗಳ ಗಡಿ ಭಾಗದ ಜನರು ಹಲವು ವರ್ಷಗಳಿಂದ ಸಾಮಾಜಿಕ, ಭಾಷಿಕ ಹಾಗೂ ಜೀವನೋಪಾಯದ ಸಂಬಂಧಗಳನ್ನು ಹಂಚಿಕೊಂಡಿದ್ದಾರೆ.

ಈ ಪ್ರದೇಶದ ಇತಿಹಾಸವು ಕುಖ್ಯಾತ ಕಾಡುಗಳ್ಳ ವೀರಪ್ಪನ್‌ನ ಚಟುವಟಿಕೆಗಳೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಹಲವು ದಶಕಗಳ ಕಾಲ ವೀರಪ್ಪನ್‌ನ ಚಟುವಟಿಕೆಗಳು ನಡೆದಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!