ಪ್ರಿಯಾಂಕ್ ಖರ್ಗೆ online desk
ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ

ಆಗಸ್ಟ್ 11ರಂದು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ನಡೆಸಿದ ದಿಢೀರ್ ತಪಾಸಣೆಯ ವೇಳೆ ಪ್ರಜ್ವಲ್ ಅವರಿಂದ ಸಿಮ್ ಕಾರ್ಡ್ ಹೊಂದಿದ್ದ ಸ್ಮಾರ್ಟ್‌ಫೋನ್, ಮೊಬೈಲ್ ಚಾರ್ಜರ್, ಡೈರಿ ಹಾಗೂ ಕಪ್ಪು ಬಣ್ಣದ ಪೆನ್‌ಡ್ರೈವ್ ಪತ್ತೆಯಾಗಿದೆ.

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ವಿಐಪಿ, ಸಾಮಾನ್ಯ ಕೈದಿ ಎಂಬ ಯಾವುದೇ ಪ್ರತ್ಯೇಕ ವರ್ಗೀಕರಣ ಇಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು ಮತ್ತು ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ," ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಯಲಹಂಕ ಶಾಸಕ ಎಸ್‌.ಟಿ. ಸೋಮಶೇಖರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ರಾಜ್ಯದ ಕಾರಾಗೃಹಗಳಲ್ಲಿ ಭದ್ರತೆ ಹಾಗೂ ಆಡಳಿತಾತ್ಮಕ ಉದ್ದೇಶಗಳಿಗಾಗಿ ಕೈದಿಗಳನ್ನು ಅಕ್ಷರಮಾಲೆಯ ಆಧಾರದ ಮೇಲೆ ವರ್ಗೀಕರಿಸಲಾಗುತ್ತದೆಯೇ ಹೊರತು ವಿಐಪಿ ಮಾನದಂಡ ಅನ್ವಯಿಸಿಲ್ಲ ಎಂದು ಹೇಳಿದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ, ಅದರಲ್ಲೂ ವಿಶೇಷವಾಗಿ ಪ್ರಜ್ವಲ್ ರೇವಣ್ಣ ಅವರಿಗೆ ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಸೋಮಶೇಖರ್ ಸರ್ಕಾರದಿಂದ ಸ್ಪಷ್ಟನೆ ಕೇಳಿದ್ದರು.

ಜೈಲಿನೊಳಗೆ ಪ್ರಜ್ವಲ್ ಮೊಬೈಲ್ ಫೋನ್ ಬಳಸಿದ್ದಾರೆ ಎಂಬ ವರದಿಗಳ ಬಗ್ಗೆಯೂ ಪ್ರಶ್ನಿಸಿದ ಅವರು, ವಶಪಡಿಸಿಕೊಂಡ ಮೊಬೈಲ್ ಪರಿಶೀಲಿಸಲಾಗಿದೆಯೇ ಮತ್ತು ಅದರಲ್ಲಿ ಏನಿತ್ತು ಎಂಬುದರ ಕುರಿತು ಮಾಹಿತಿ ಕೋರಿದ್ದರು.

ಇದಕ್ಕೆ ಉತ್ತರಿಸಿದ ಖರ್ಗೆ, ಆಗಸ್ಟ್ 11ರಂದು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ನಡೆಸಿದ ದಿಢೀರ್ ತಪಾಸಣೆಯ ವೇಳೆ ಪ್ರಜ್ವಲ್ ಅವರಿಂದ ಸಿಮ್ ಕಾರ್ಡ್ ಹೊಂದಿದ್ದ ಸ್ಮಾರ್ಟ್‌ಫೋನ್, ಮೊಬೈಲ್ ಚಾರ್ಜರ್, ಡೈರಿ ಹಾಗೂ ಕಪ್ಪು ಬಣ್ಣದ ಪೆನ್‌ಡ್ರೈವ್ ಪತ್ತೆಯಾಗಿದೆ ಎಂದು ಸದನಕ್ಕೆ ತಿಳಿಸಿದರು.

ನಿಷೇಧಿತ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅದೇ ದಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 319/2026 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಕೈಪಿಡಿಯ ನಿಯಮಗಳ ಪ್ರಕಾರವೇ ಎಲ್ಲ ಕೈದಿಗಳನ್ನು ನಡೆಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ವಶಪಡಿಸಿಕೊಂಡಿರುವ ಮೊಬೈಲ್ ಫೋನ್ ಸೇರಿದಂತೆ ಇತರ ವಸ್ತುಗಳು ಪ್ರಸ್ತುತ ಪೊಲೀಸರ ವಶದಲ್ಲಿವೆ. ಮೊಬೈಲ್‌ನಲ್ಲಿರುವ ಮಾಹಿತಿಯನ್ನು ಇನ್ನೂ ಪರಿಶೀಲಿಸಿಲ್ಲ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ನಿಷೇಧಿತ ವಸ್ತುಗಳು ಜೈಲಿನೊಳಗೆ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಮೂವರು ಜೈಲು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಸಹಾಯಕ ಅಧೀಕ್ಷಕ ಈರಣ್ಣ ರಂಗಾಪುರ, ಜೈಲರ್ ರಾಜೇಶ್ ಧರ್ಮಟ್ಟಿ ಹಾಗೂ ವಾರ್ಡನ್ ಮಹೇಶ್ ಸಜ್ಜನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಉಪ ಮಹಾನಿರೀಕ್ಷಕ ಜಿನೇಂದ್ರ ಖನಗಾವಿ ಅವರಿಗೆ ಸೂಚಿಸಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!