ಬಸ್ ಅಪಘಾತದಲ್ಲಿ ಗಾಯಗೊಂಡವರು  
ರಾಜ್ಯ

ಮಂಗಳೂರು-ಬೆಂಗಳೂರು ಖಾಸಗಿ ಬಸ್ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು, 20 ಮಂದಿಗೆ ಗಾಯ-Video

ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್​ ಬಳಿ ಅಳವಡಿಸಿದ್ದ ಸೈನ್ ಬೋರ್ಡ್​​ಗೆ ಡಿಕ್ಕಿ ಹೊಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಐಷಾರಾಮಿ ಸುಗಮ ಟ್ರಾವೆಲ್ಸ್ ಬಸ್ ನಾಗಮಂಗಲದ ಲಾಂಕೋ ಟೋಲ್ ಗೇಟ್ ಸಮೀಪ ಹೆದ್ದಾರಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೆಂಗಳೂರಿನ ಓರ್ವ ಪ್ರಯಾಣಿಕ ಹಾಗೂ ಬಸ್ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ 20ಕ್ಕೂ ಹೆಚ್ಚು ಪ್ರಯಾಣಿಕರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರು ಸಾವು, ಬಸ್​ನಲ್ಲಿದ್ದ 20 ಮಂದಿಗೆ ಗಾಯ

ಮಂಗಳೂರು-ಬೆಂಗಳೂರು ಹೈವೇಯಲ್ಲಿ ಈ ದುರ್ಘಟನೆ ನಡೆದಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್​ ಬಳಿ ಅಳವಡಿಸಿದ್ದ ಸೈನ್ ಬೋರ್ಡ್​​ಗೆ ಡಿಕ್ಕಿ ಹೊಡೆದಿದೆ. ಬಸ್​ನಲ್ಲಿ ಓರ್ವ ಪ್ರಯಾಣಿಕರು ಹಾಗೂ ಬಸ್ ಕ್ಲೀನರ್​ ಮೃತಪಟ್ಚಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿ

ಅತೀ ವೇಗವಾಗಿ ಬರ್ತಿದ್ದ ಖಾಸಗಿ ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್ ಬಾಗ್ (64ವ), ಬಸ್ ಕ್ಲೀನರ್ ಅಶೋಕ್ (25ವ) ಮೃತಪಟ್ಟಿದ್ದಾರೆ. ಬಸ್​​ನಲ್ಲಿದ್ದ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.https://x.com/KannadaPrabha/status/2090310871037968514

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Gen Z ವೋಟರ್ಸ್ ಮೇಲೆ ಮೋದಿ ಕಣ್ಣು: ಕೇಂದ್ರ ಸಚಿವರಿಗೆ 'Social media Scorecard'; ಯುವ ಜನತೆ ಸೆಳೆಯಲು ನಾಯಕರಿಗೆ ಹೊಸ ಟಾಸ್ಕ್..!

Pakಗೆ ಭಾರತ ಬಿಗ್ ಶಾಕ್: ದೆಹಲಿಯಲ್ಲಿ ಗರ್ಜಿಸಿದ ಬುಲ್ಡೋಜರ್; ಪಾಕಿಸ್ತಾನ ರಾಯಭಾರ ಕಚೇರಿ ಮುಂಭಾಗದ ಅನಧಿಕೃತ ನಿರ್ಮಾಣಗಳು ಧ್ವಂಸ..!

ಇರಾನ್ ಬೆನ್ನೆಲುಬು ಮುರಿಯಲು ಅಮೆರಿಕಾ ಪ್ಲ್ಯಾನ್: 'Economic D-Day' ಘೋಷಣೆ; ನೆರವು ನೀಡುವ ರಾಷ್ಟ್ರಗಳಿಗೂ ಕಾದಿದೆ ಗಂಡಾಂತರ..!

ಭಯೋತ್ಪಾದಕರ ರಕ್ಷಣೆಗೆ ವಿಶ್ವಸಂಸ್ಥೆ ವೇದಿಕೆ ಬಳಸದಿರಿ: ಪಾಕ್-ಚೀನಾಗೆ ಭಾರತದ ಖಡಕ್‌ ಎಚ್ಚರಿಕೆ

‘ಯಾವುದೇ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿಲ್ಲ’: ಸಚಿವ ನಾಗೇಂದ್ರ ಕುರಿತು DCM ಡಾ.ಜಿ.ಪರಮೇಶ್ವರ್ ಸಮರ್ಥನೆ