ಮಹಿಳಾ ಪೊಲೀಸ್ ಅಧಿಕಾರಿ 
ರಾಜ್ಯ

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ, ಸೂತ್ರಧಾರಿಗಳ ಹೆಸರು ಬಹಿರಂಗ!

ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್​​​​ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.

ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ.

ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್​​​​ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಅಲ್ಲದೇ ಪೊಲೀಸ್ ಇಲಾಖೆಯನ್ನೇ ಮುಜುಗರಕ್ಕೀಡು ಮಾಡಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಡಿಯೋದಲ್ಲಿರುವ ಮಹಿಳಾ ಪೊಲೀಸ್ ಅಧಿಕಾರಿ ದೂರು ದಾಖಲಿಸಿದ್ದಾರೆ. ವಿಡಿಯೋ ವೈರಲ್ ಮಾಡಿದ ಇಬ್ಬರ ವಿರುದ್ಧ ಮಹಿಳಾಧಿಕಾರಿ, ಬೆಂಗಳೂರಿನ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರೌಡಿಶೀಟರ್​ ಸಾಯಿಕುಮಾರ್ ಈ ವಿಡಿಯೋ ವೈರಲ್ ಮಾಡಿದ್ದಾನೆ ಎಂದು ಅಧಿಕಾರಿ ಆರೋಪಿಸಿದ್ದು, ಕೆಲ ವರ್ಷಗಳ ಹಿಂದೆ ರೌಡಿಶೀಟರ್​ ಧರ್ಮ ಜೊತೆ ಆತ್ಮೀಯವಾಗಿದ್ದೆ. ವಿಡಿಯೋ ಕಾಲ್​ನಲ್ಲಿ ಧರ್ಮ ಜೊತೆ ಮಾತಾಡಿದ್ದಾಗ ಆತನೇ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ವಿಡಿಯೋವನ್ನು ರೌಡಿಶೀಟರ್ ಸಾಯಿಕುಮಾರ್​​ಗೆ ಕೊಟ್ಟು ವೈರಲ್‌ ಮಾಡಿಸಿದ್ದಾನೆ. ಹೀಗಾಗಿ ಇವರಿಬ್ಬರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಸಿದ್ದಾರೆ.

ನಾನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಉಸ್ತುವಾರಿ ಅಧಿಕಾರಿಯಾಗಿದ್ದೇನೆ. ನನಗೆ ಮದುವೆಯಾಗಿ ಮಕ್ಕಳಿದ್ದಾರೆ, ಸಮಾಜದಲ್ಲಿ ಒಳ್ಳೆಯ ಹೆಸರಿದೆ. ವಿಡಿಯೋ ವೈರಲ್ ಮಾಡಿ ನನ್ನ ಮಾರ್ಯದೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ರೌಡಿಶೀಟರ್​ಗಳಾದ​​ ಧರ್ಮ, ಸಾಯಿಕುಮಾರ್ ಹಾಗೂ ಇತರರ ವಿರುದ್ಧ ಕ್ರಮಕೈಗೊಳ್ಳುವಂತೆ ಅಧಿಕಾರಿ ದೂರು ನೀಡಿದ್ದಾರೆ.

ಮಹಿಳಾ ಅಧಿಕಾರಿ ನೀಡಿರುವ ಈ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಪೊಲೀಸರು ಎನ್​​ಸಿಆರ್ ದಾಖಲಿಸಿಕೊಂಡಿದ್ದಾರೆ.​

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ರಾಜೀನಾಮೆಗೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಬಿಗ್ ರಿಲೀಫ್: ಹೈಕೋರ್ಟ್ ಮಹತ್ವದ ಆದೇಶ

ಭೂಸ್ವಾಧೀನಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ; ₹18 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ, 2.53 ಕೋಟಿ ನಗದು, 100 ಎಕರೆ ಕೃಷಿ ಜಮೀನು ಪತ್ತೆ!

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜೈಲಿನಲ್ಲೇ ನಿಧನ!

ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಶಾ ಎದುರೇ ಗುಡುಗಿದ ಡಿಕೆಶಿ: 'ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣ ರಾಜ್ಯಗಳಿಗೆ ಶಿಕ್ಷೆ ಬೇಡ'; ಲೋಕಸಭೆ ಸ್ಥಾನ 543ಕ್ಕೇ ಸೀಮಿತಗೊಳಿಸುವಂತೆ ಆಗ್ರಹ!

ಅಂತ್ಯದ ಹಾದಿಯಲ್ಲಿ 'ಫ್ಯಾಸಿಸ್ಟ್ ಆಳ್ವಿಕೆ': ಮೊದಲ ಬಾರಿಗೆ ಮೋದಿ ಅಹಂಕಾರಕ್ಕೆ ಪೆಟ್ಟು, ಯುವ ಜನತೆ ರಾಜಕೀಯ ಅರಿವು ಬೆಳೆಸಿಕೊಳ್ಳಿ- ನಟ ಪ್ರಕಾಶ್ ರಾಜ್ ಕರೆ!