ಪರಪ್ಪನ ಅಗ್ರಹಾರ - ಪ್ರಜ್ವಲ್ ರೇವಣ್ಣ 
ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿಯ ಬಂಧನ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟ ಆರೋಪದ ಮೇಲೆ ಬಾಣಸವಾಡಿ ನಿವಾಸಿ ನವೀನ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿ(ಎಸ್) ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟ ಆರೋಪದ ಮೇಲೆ ಬಾಣಸವಾಡಿ ನಿವಾಸಿ ನವೀನ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ದ ನವೀನ್‌ಗೆ ಪ್ರತಾಪ್ ರಾಯ್ ಎಂಬಾತನ ಪರಿಚಯವಾಗಿದ್ದು, ಜೈಲಿನಿಂದ ಹೊರಬಂದ ಬಳಿಕ ನವೀನ್, ಪ್ರತಾಪ್ ರಾಯ್‌ಗೆ ಅಕ್ರಮವಾಗಿ ಮೊಬೈಲ್ ಫೋನ್ ತಲುಪಿಸಿದ್ದ. ಇದಕ್ಕಾಗಿ ಇಬ್ಬರ ನಡುವೆ ದೊಡ್ಡ ಮಟ್ಟದ ಹಣದ ವ್ಯವಹಾರವೂ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿದ ವೇಳೆ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್‌ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ: ಕಾಂಗ್ರೆಸ್ ನಾಯಕರ ಮೌನಕ್ಕೆ ಮಲ್ಲಿಕಾರ್ಜುನ ಖರ್ಗೆ ಬೇಸರ, ‘ನನಗೆ ನೋವಾಗಿದೆ’ ಎಂದ ಅಧ್ಯಕ್ಷ..!

Gen Z ವೋಟರ್ಸ್ ಮೇಲೆ ಮೋದಿ ಕಣ್ಣು: ಕೇಂದ್ರ ಸಚಿವರಿಗೆ 'Social media Scorecard'; ಯುವ ಜನತೆ ಸೆಳೆಯಲು ನಾಯಕರಿಗೆ ಹೊಸ ಟಾಸ್ಕ್..!

Pakಗೆ ಭಾರತ ಬಿಗ್ ಶಾಕ್: ದೆಹಲಿಯಲ್ಲಿ ಗರ್ಜಿಸಿದ ಬುಲ್ಡೋಜರ್; ಪಾಕಿಸ್ತಾನ ರಾಯಭಾರ ಕಚೇರಿ ಮುಂಭಾಗದ ಅನಧಿಕೃತ ನಿರ್ಮಾಣಗಳು ಧ್ವಂಸ..!

ನಾಲ್ಕೇ ತಿಂಗಳಲ್ಲಿ 22 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಧೀಶ; ಆತಂಕದಿಂದ 100 ಕೊಲೆ ಪ್ರಕರಣ ಬೇರೆ ಪೀಠಕ್ಕೆ ಶಿಫ್ಟ್!

ಇರಾನ್ ಬೆನ್ನೆಲುಬು ಮುರಿಯಲು ಅಮೆರಿಕಾ ಪ್ಲ್ಯಾನ್: 'Economic D-Day' ಘೋಷಣೆ; ನೆರವು ನೀಡುವ ರಾಷ್ಟ್ರಗಳಿಗೂ ಕಾದಿದೆ ಗಂಡಾಂತರ..!