ಬಿ. ನಾಗೇಂದ್ರ ಜೊತೆಗೆ ಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಪ್ರತಿಪಕ್ಷಗಳು ರಾಜೀನಾಮೆಗೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಬಿಗ್ ರಿಲೀಫ್: ಹೈಕೋರ್ಟ್ ಮಹತ್ವದ ಆದೇಶ

ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದಿರುವ ಸಚಿವ ಬಿ. ನಾಗೇಂದ್ರ ಅವರಿಗೆ ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ತೆರಳದಂತೆ ಷರತ್ತು ವಿಧಿಸಲಾಗಿತ್ತು.

ಬೆಂಗಳೂರು: ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಕಳಂಕಿತ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ನಾವು ವಿಧಾನಸಭೆ ಕಲಾಪ ನಡೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಬೆನ್ನಲ್ಲೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ ಅವರಿಗೆ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ.

ಪ್ರಕರಣದಲ್ಲಿ ಈಗಾಗಲೇ ಜಾಮೀನು ಪಡೆದಿರುವ ಸಚಿವ ಬಿ. ನಾಗೇಂದ್ರ ಅವರಿಗೆ ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ತೆರಳದಂತೆ ಷರತ್ತು ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ನಾಗೇಂದ್ರ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಭಾರತದೊಳಗೆ ಪ್ರಯಾಣಿಸಲು ಅನುಮತಿ ನೀಡಿದೆ.

ಈ ಹಿಂದೆ ರಾಜ್ಯ ಬಿಟ್ಟು ತೆರಳದಂತೆ ಇದ್ದ ಷರತ್ತಿಗೆ ತಡೆ ನಿಡಿದ ಹೈಕೋರ್ಟ್, ಇದೀಗ ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂಬ ಷರತ್ತನ್ನು ರದ್ದು ಮಾಡಿದೆ. ಆದರೆ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

"ಅರ್ಜಿದಾರರು ದೇಶದೊಳಗೆ ಪ್ರಯಾಣಿಸಲು ಸ್ವತಂತ್ರರು. ಏಕೆಂದರೆ ಅವರಿಗೆ ದೇಶದೊಳಗೆ ಪ್ರಯಾಣಿಸಲು ಅನುಮತಿಸದಿದ್ದರೆ ಅವರ ಸ್ವಾತಂತ್ರ್ಯ ಮತ್ತು ಅವರು ಈಗ ಹೊಂದಿರುವ ಹುದ್ದೆಯನ್ನು ಮೊಟಕುಗೊಳಿಸದಂತಾಗುತ್ತದೆ" ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಹೇಳಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ನಾಗೇಂದ್ರ ಅವರು, ಇತ್ತೀಚಿಗೆ ವಿಸ್ತರಣೆಯಾದ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿದ್ದಾರೆ. ನಾಗೇಂದ್ರ ಇಡಿ ತನಿಖೆ ಎದುರಿಸುತ್ತಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಜೈಲಿನಲ್ಲೇ ನಿಧನ!

ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಶಾ ಎದುರೇ ಗುಡುಗಿದ ಡಿಕೆಶಿ: 'ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣ ರಾಜ್ಯಗಳಿಗೆ ಶಿಕ್ಷೆ ಬೇಡ'; ಲೋಕಸಭೆ ಸ್ಥಾನ 543ಕ್ಕೇ ಸೀಮಿತಗೊಳಿಸುವಂತೆ ಆಗ್ರಹ!

ಅಂತ್ಯದ ಹಾದಿಯಲ್ಲಿ 'ಫ್ಯಾಸಿಸ್ಟ್ ಆಳ್ವಿಕೆ': ಮೊದಲ ಬಾರಿಗೆ ಮೋದಿ ಅಹಂಕಾರಕ್ಕೆ ಪೆಟ್ಟು, ಯುವ ಜನತೆ ರಾಜಕೀಯ ಅರಿವು ಬೆಳೆಸಿಕೊಳ್ಳಿ- ನಟ ಪ್ರಕಾಶ್ ರಾಜ್ ಕರೆ!

1 ಲಕ್ಷ ವೀಕ್ಷಣೆಯ ವೀಡಿಯೊಗೆ 1 ಲಕ್ಷ ರೂ: Social Media Influencers ಗಳಿಗೆ ಸರ್ಕಾರದ ಬಂಪರ್ ಯೋಜನೆ!

ಕಾಡಿಗೆ ಬೆಂಕಿ ಹಚ್ಚಿ, ಶಿಬಿರಗಳನ್ನೇ ಸ್ಫೋಟಿಸಿದ ಕಳ್ಳಬೇಟೆಗಾರರು: ಚಾಮರಾಜನಗರ ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!