ಡಿಕೆ ಶಿವಕುಮಾರ್ online desk
ರಾಜ್ಯ

ಅದಾನಿ ಭೇಟಿ ಬಗ್ಗೆ CM DK Shivakumar ಹೇಳಿದ್ದೇನು?

ಬೆಂಗಳೂರಿನ ಆರ್ಟ್‌ ಆಫ್‌ ಲಿವಿಂಗ್‌ಗೆ ಗೌತಮ್‌ ಅದಾನಿ ಭೇಟಿ ನೀಡಿದ್ದರು. ಅಲ್ಲಿಂದ ಏರ್‌ಪೋರ್ಟ್‌ಗೆ ವಾಪಸ್‌ ತೆರಳುವ ವೇಳೆ ಸಿಎಂ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು: ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ಉದ್ಯಮಿ ಗೌತಮ್ ಅದಾನಿ (Gautam Adani) ಅವರು ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಟೆಂಡರ್‌ಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರಿನ ಆರ್ಟ್‌ ಆಫ್‌ ಲಿವಿಂಗ್‌ಗೆ ಗೌತಮ್‌ ಅದಾನಿ ಭೇಟಿ ನೀಡಿದ್ದರು. ಅಲ್ಲಿಂದ ಏರ್‌ಪೋರ್ಟ್‌ಗೆ ವಾಪಸ್‌ ತೆರಳುವ ವೇಳೆ ಸಿಎಂ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ.

ಅತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅದಾನಿ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಎಂದು ಟೀಕೆ ಮಾಡುತ್ತಿದ್ದರೆ, ಇತ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಗೌತಮ್ ಅದಾನಿಯನ್ನು ಭೇಟಿಯಾಗಿರುವುದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ.

ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಡಿ.ಕೆ.ಶಿವಕುಮಾರ್‌, ಗೌತಮ್‌ ಅದಾನಿ ಅವರಿಗೆ ಇಲ್ಲಿ ಹಲವು ಉದ್ಯಮಗಳಿವೆ. ನಾನು ಮೊದಲ ಬಾರಿ ಸಿಎಂ ಆಗಿರುವುದರಿಂದ ಸೌಜನ್ಯಯುತ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಕರ್ಮಕಾಂಡ: ನಾಪತ್ತೆಯಾಗಿರುವ IAS ಅಧಿಕಾರಿಗೆ ED ಬಿಗ್ ಶಾಕ್; ಜ್ಞಾನೇಂದ್ರ ಕುಮಾರ್ ಮನೆ ಮೇಲೆ ದಾಳಿ

Bengaluru Tunnel Road: ಸ್ವತಃ ಅಖಾಡಕ್ಕಿಳಿದ ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ – ಸುರಂಗ ರಸ್ತೆ ಕುರಿತು ಮಹತ್ವದ ಚರ್ಚೆ

ಹತ್ರಾಸ್‌ನಲ್ಲಿ ಅಮಾನವೀಯ ಕೃತ್ಯ: 16 ವರ್ಷದ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ, ಗರ್ಭಿಣಿ.. 70ರ ಅಜ್ಜ ಅರೆಸ್ಟ್!

ಟೆಸ್ಟ್ ಕ್ರಿಕೆಟ್​ನಲ್ಲಿ ಮಿಂಚಿದ ಕನ್ನಡಿಗ: ಶ್ರೀಲಂಕಾ ವಿರುದ್ಧ ಮತ್ತೆ ಅಬ್ಬರಿಸಿದ ದೇವದತ್ ಪಡಿಕ್ಕಲ್; ಮತ್ತೊಂದು ಶತಕ!

Video: ಯಶ್​ಗೆ ಬಿಗ್ ಶಾಕ್! ‘ಟಾಕ್ಸಿಕ್’ ಇವೆಂಟ್​ನಲ್ಲಿ ಅವಘಡ; FIR ದಾಖಲು