ಶೋಭಾ ಕರಂದ್ಲಾಜೆ 
ರಾಜ್ಯ

ಪುತ್ತೂರು ಹಲ್ಲೆ ಪ್ರಕರಣ: ‘ಅಪರಾಧಿಗಳು ಪೊಲೀಸರನ್ನೇ ಧಿಕ್ಕರಿಸುವಂತಾಗಿದೆ, ಇದು ಸರ್ಕಾರದ ಸಂಪೂರ್ಣ ವೈಫಲ್ಯ’; ಶೋಭಾ ಕರಂದ್ಲಾಜೆ ವಾಗ್ದಾಳಿ

ಮಹಿಳೆಯೊಬ್ಬರ ಮೇಲೆ ಹಾಡಹಗಲೇ ಹಲ್ಲೆ ನಡೆಸಲಾಗಿದೆ. ಬಳಿಕ ಹಲ್ಲೆ ನಡೆಸಿದವರು ಪೊಲೀಸ್ ಜೀಪ್‌ ಒಳಗೆ ಪ್ರವೇಶಿಸಿ, ಪೊಲೀಸರ ಸಮ್ಮುಖದಲ್ಲೇ ಹಲ್ಲೆ ಮುಂದುವರಿಸಿದ್ದಾರೆ.

ಬೆಂಗಳೂರು: ಪುತ್ತೂರಿನಲ್ಲಿ ಹಿಂದೂ ಮಹಿಳೆಯೊಬ್ಬರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಶೋಭಾ ಕರಂದ್ಲಾಜೆ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಅವರು, ರಾಜಕೀಯ ರಕ್ಷಣೆಯಿಂದಾಗಿ ಅಪರಾಧಿಗಳಿಗೆ ಭಯವೇ ಇಲ್ಲದಂತಾಗಿದೆ ಎಂದು ದೂರಿದ್ದಾರೆ.

‘ಎಕ್ಸ್‌’ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಶೋಭಾ ಕರಂದ್ಲಾಜೆ ಅವರು, ಮಹಿಳೆಯೊಬ್ಬರ ಮೇಲೆ ಹಾಡಹಗಲೇ ಹಲ್ಲೆ ನಡೆಸಲಾಗಿದೆ. ಬಳಿಕ ಹಲ್ಲೆ ನಡೆಸಿದವರು ಪೊಲೀಸ್ ಜೀಪ್‌ ಒಳಗೆ ಪ್ರವೇಶಿಸಿ, ಪೊಲೀಸರ ಸಮ್ಮುಖದಲ್ಲೇ ಹಲ್ಲೆ ಮುಂದುವರಿಸಿದ್ದಾರೆ.

ಪೊಲೀಸರ ಎದುರೇ ಅಪರಾಧಿಗಳು ಈ ರೀತಿಯಾಗಿ ವರ್ತಿಸಿರುವುದು ಅವರ ‘ಧೈರ್ಯ’ವನ್ನು ತೋರಿಸುತ್ತದೆ, ಕಾಂಗ್ರೆಸ್ ಸರ್ಕಾರವೇ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನೀವು ಸಂಪೂರ್ಣವಾಗಿ ವಿಫಲರಾಗಿದ್ದೀರಿ. ಹಿಂದೂ ಮಹಿಳೆಯರ ಮೇಲೆ ಹಲ್ಲೆಗಳು ನಡೆಯುತ್ತಿವೆ, ಅಪರಾಧಿಗಳು ಯಾವುದೇ ಭಯವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಇದರ ಬೆಲೆಯನ್ನು ಕರ್ನಾಟಕದ ಜನತೆ ತೆರುತ್ತಿದ್ದಾರೆ. ಅಪರಾಧಿಗಳಿಗೆ ಕಾಂಗ್ರೆಸ್ ಸರ್ಕಾರದ ರಕ್ಷಣೆ ಸಿಗುತ್ತಿದೆ. ಅಪರಾಧಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲಾಗುತ್ತಿದೆ. ಇದೀಗ ಸರ್ಕಾರ ತಮ್ಮ ಬೆನ್ನಿಗಿದೆ ಎಂದು ನಂಬಿರುವ ಮತಾಂಧ, ಸಮಾಜವಿರೋಧಿ ಮತ್ತು ದೇಶವಿರೋಧಿ ಶಕ್ತಿಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಈ ವಿಚಾರದಲ್ಲಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಅಪರಾಧಿಗಳು ಪೊಲೀಸರನ್ನೇ ಬಹಿರಂಗವಾಗಿ ಧಿಕ್ಕರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಅದು ನಿಮ್ಮ ಆಡಳಿತದ ಸಂಪೂರ್ಣ ವೈಫಲ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?