ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗ ಮರಳು ಗಣಿಗಾರಿಕೆಯಲ್ಲಿ ಅಕ್ರಮ: ನಿಯಮ ಉಲ್ಲಂಘಿಸಿದ ಗುತ್ತಿಗೆದಾರರಿಗೆ ಸರ್ಕಾರ ಬಿಗ್ ಶಾಕ್, 68 ಕೋಟಿ ರೂ. ಗೂ ಅಧಿಕ ದಂಡ..!

ಬಾಕಿ ಇರುವ ದಂಡದ ಮೊತ್ತದ ಕುರಿತು ಜಿಲ್ಲಾಮಟ್ಟದ ಮರಳು ಸಮಿತಿಯ ಮುಂದೆ ವಿಷಯ ಮಂಡಿಸಲಾಗುವುದು. ಅನ್ವಯವಾಗುವ ನಿಯಮಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ನಿಯಮಗಳನ್ನು ಉಲ್ಲಂಘಿಸಿದ ಗುತ್ತಿಗೆದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ.

ಅಕ್ರಮ ಗಣಿಗಾರಿಕೆ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ 28 ಮರಳು ಗುತ್ತಿಗೆದಾರರಿಗೆ ಒಟ್ಟು ರೂ.68 ಕೋಟಿಗೂ ಅಧಿಕ ದಂಡ ವಿಧಿಸುವ ನೋಟಿಸ್ ನೀಡಲಾಗಿದೆ.

ಈ ಪೈಕಿ ತೀರ್ಥಹಳ್ಳಿ ತಾಲೂಕಿನ ದಬ್ಬನಗದ್ದೆ ಗ್ರಾಮದಲ್ಲಿ 2,116 ಮೆಟ್ರಿಕ್ ಟನ್ ಮರಳನ್ನು ಅಕ್ರಮವಾಗಿ ತೆಗೆದ ಪ್ರಕರಣದಲ್ಲಿ ಗುತ್ತಿಗೆದಾರನಿಗೆ ರೂ.1.08 ಕೋಟಿ ದಂಡ ವಿಧಿಸಲು ನೋಟಿಸ್ ನೀಡಲಾಗಿದೆ.

ವಿಧಾನ ಪರಿಷತ್‌ನಲ್ಲಿ ಎಂಎಲ್‌ಸಿ ಬಲ್ಖೀಸ್ ಬಾನು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು, ಬಾಕಿ ಇರುವ ದಂಡದ ಮೊತ್ತದ ಕುರಿತು ಜಿಲ್ಲಾಮಟ್ಟದ ಮರಳು ಸಮಿತಿಯ ಮುಂದೆ ವಿಷಯ ಮಂಡಿಸಲಾಗುವುದು. ಅನ್ವಯವಾಗುವ ನಿಯಮಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯ ಮರಳು ಗಣಿಗಾರಿಕೆ ಗುತ್ತಿಗೆಗಳ ಬಗ್ಗೆಯೂ ಸಚಿವರ ಉತ್ತರದಲ್ಲಿ ಮಾಹಿತಿ ನೀಡಲಾಗಿದೆ. 2016ರಲ್ಲಿ ತಿದ್ದುಪಡಿ ನಿಯಮಗಳ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 38 ಮರಳು ಗಣಿಗಾರಿಕೆ ಗುತ್ತಿಗೆಗಳಿಗೆ ಅನುಮೋದನೆ ನೀಡಲಾಗಿತ್ತು. ಈ ಪೈಕಿ 34 ಗುತ್ತಿಗೆಗಳ ಅವಧಿ ಮುಗಿದಿದ್ದು, ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು, 1994ರ ಅಡಿಯಲ್ಲಿ ಮೂರು ಮರಳು ಗುತ್ತಿಗೆಗಳು ಹಾಗೂ ಒಂದು ರಿಯಾಯಿತಿ ಪ್ರಸ್ತುತ ಜಾರಿಯಲ್ಲಿವೆ.

ಇದಲ್ಲದೆ, ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳ (ತಿದ್ದುಪಡಿ) ನಿಯಮಗಳು, 2023ರ ನಿಯಮ 31-ಯು ಅಡಿಯಲ್ಲಿ ಜಿಲ್ಲೆಯಲ್ಲಿ 31 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಈ ಪೈಕಿ ಎಂಟು ಬ್ಲಾಕ್‌ಗಳನ್ನು ಸರ್ಕಾರಿ ಕಾಮಗಾರಿಗಳಿಗೆ ಮೀಸಲಿಡಲಾಗಿದ್ದು, ಉಳಿದ 23 ಬ್ಲಾಕ್‌ಗಳನ್ನು ಟೆಂಡರ್‌-ಕಮ್‌-ಹರಾಜು ಪ್ರಕ್ರಿಯೆ ಮೂಲಕ ಹಂಚಿಕೆ ಅಥವಾ ವಿಲೇವಾರಿ ಮಾಡಲಾಗಿದೆ.

ಟೆಂಡರ್‌-ಕಮ್‌-ಹರಾಜು ಪ್ರಕ್ರಿಯೆಗೆ 2025ರ ಫೆಬ್ರವರಿ 24ರಂದು ಅಧಿಸೂಚನೆ ಹೊರಡಿಸಲಾಗಿತ್ತು. 20 ಮರಳು ಬ್ಲಾಕ್‌ಗಳ ಪ್ರಕ್ರಿಯೆ ಪೂರ್ಣಗೊಂಡಿದ್ದು, ಯಶಸ್ವಿ ಬಿಡ್‌ದಾರರಿಗೆ ಉದ್ದೇಶ ಪತ್ರ ನೀಡಲಾಗಿದೆ. ಕ್ಯಾರಿ ಯೋಜನೆಗಳಿಗೂ ಅನುಮೋದನೆ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಆದರೆ, ಯಶಸ್ವಿ ಬಿಡ್‌ದಾರರು ಮರಳು ಗಣಿಗಾರಿಕೆ ಗುತ್ತಿಗೆಗಳನ್ನು ಅಧಿಕೃತವಾಗಿ ಜಾರಿಗೊಳಿಸುವ ಮೊದಲು ಪರಿಸರ ಅನುಮತಿ ಪಡೆಯಬೇಕಾಗಿದೆ. ರಾಜ್ಯ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದಿಂದ ಪರಿಸರ ಅನುಮತಿ ದೊರೆತ ಬಳಿಕವಷ್ಟೇ ಗುತ್ತಿಗೆಗಳನ್ನು ಕಾರ್ಯಗತಗೊಳಿಸಿ ಮರಳು ಗಣಿಗಾರಿಕೆಗೆ ಅವಕಾಶ ನೀಡಲಾಗುತ್ತದೆ.

ಸರ್ಕಾರಿ ಇಲಾಖೆಗಳಿಗಾಗಿ ಮೀಸಲಿಟ್ಟಿರುವ ಎಂಟು ಮರಳು ಬ್ಲಾಕ್‌ಗಳನ್ನು ಸರ್ಕಾರಿ ಕಾಮಗಾರಿಗಳಿಗೆ ಅಗತ್ಯವಿರುವ ಮರಳಿನ ಪೂರೈಕೆಗೆ ಬಳಸಲಾಗುತ್ತದೆ. ಅಗತ್ಯ ಮರಳು ಸಂಗ್ರಹಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಇಲಾಖೆಗೆ ಕ್ಯಾರಿ ಯೋಜನೆ ಹಾಗೂ ಪರಿಸರ ಅನುಮತಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸಲಾಗಿದೆ.

ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಟವನ್ನು ತಡೆಯಲು ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳನ್ನೂ ಸರ್ಕಾರ ರಚಿಸಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಕಾರ್ಯಪಡೆ ಹಾಗೂ ಜಿಲ್ಲಾ ಮರಳು ಸಮಿತಿ ರಚಿಸಲಾಗಿದ್ದು, ಸಹಾಯಕ ಆಯುಕ್ತರ ನೇತೃತ್ವದಲ್ಲಿ ತಾಲೂಕು ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ.

ಅಕ್ರಮ ಗಣಿಗಾರಿಕೆ, ಮರಳು ಸಾಗಾಟ ಹಾಗೂ ದಾಸ್ತಾನು ವಿರುದ್ಧ ಕ್ರಮ ಕೈಗೊಳ್ಳಲು ಕಂದಾಯ, ಅರಣ್ಯ, ಪೊಲೀಸ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?