ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ; ಸುತ್ತಿಗೆಯಿಂದ ಹೊಡೆದು ವೃದ್ಧ ಪೋಷಕರನ್ನು ಕೊಂದ ಮಗ, ಪೊಲೀಸರಿಗೆ ತಾನೆ ಕರೆ ಮಾಡಿ ಮಾಹಿತಿ ನೀಡಿದ ಆರೋಪಿ ಅಂದರ್!

ಮೃತರನ್ನು ಟ್ರಕ್ ಚಾಲಕ ಮೆಹಬೂಬ್ ಅಲಿ (55) ಮತ್ತು ಅವರ ಪತ್ನಿ ಶಂಶಾದ್ ಬೇಗಂ (50) ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅವರ ಮಗ ಆರೋಪಿ ಶಾಹೀದ್ ಅಲಿಯನ್ನು ಬಂಧಿಸಲಾಗಿದೆ.

ಉಡುಪಿ: ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದ ಬೈಕಾಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, 31 ವರ್ಷದ ವ್ಯಕ್ತಿಯೊಬ್ಬ ತನ್ನ ವಯಸ್ಸಾದ ಪೋಷಕರನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ನಡೆದಿದೆ.

ಮೃತರನ್ನು ಟ್ರಕ್ ಚಾಲಕ ಮೆಹಬೂಬ್ ಅಲಿ (55) ಮತ್ತು ಅವರ ಪತ್ನಿ ಶಂಶಾದ್ ಬೇಗಂ (50) ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅವರ ಮಗ ಆರೋಪಿ ಶಾಹೀದ್ ಅಲಿಯನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಝೊಮ್ಯಾಟೊದಲ್ಲಿ ಫುಡ್ ಡೆಲಿವರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಶಹೀದ್ ಅಲಿ, ಸಣ್ಣ ವಿಚಾರಕ್ಕೆ ತನ್ನ ತಂದೆ-ತಾಯಿಯೊಂದಿಗೆ ಜಗಳವಾಡಿದ್ದಾನೆ. ಬಳಿಕ ತನ್ನ ಪೋಷಕರ ತಲೆಗೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತನ್ನ ತಂದೆ ಆಗಾಗ್ಗೆ ತನ್ನ ಮೇಲೆ ಹಲ್ಲೆ ನಡೆಸುತ್ತಿದ್ದರು ಮತ್ತು ಬೈಯುತ್ತಿದ್ದರು ಮತ್ತು ತಾಯಿ ಅದಕ್ಕೆ ಬೆಂಬಲ ನೀಡುತ್ತಿದ್ದರು ಎಂದು ಶಹೀದ್ ಅಲಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಟ್ಟಿನ ಭರದಲ್ಲಿ ಅವನು ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ಘಟನೆ ನಂತರ, ಶಹೀದ್ ಸ್ವತಃ ತಾನೇ ಪೊಲೀಸರ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ಕೊಲೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ತನ್ನ ಪೋಷಕರಿಂದ ದೀರ್ಘಕಾಲದವರೆಗೆ ಅನುಭವಿಸಿದ ಮಾನಸಿಕ ಕಿರುಕುಳವೇ ಇದಕ್ಕೆ ಕಾರಣ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS), 2023ರ ಸೆಕ್ಷನ್ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!