ಪ್ರಿಯಾಂಕ್ ಖರ್ಗೆ 
ರಾಜ್ಯ

ಕೇಂದ್ರ ಸರ್ಕಾರ ಅಂಬಾನಿ, ಅದಾನಿ 'ಗುಲಾಮ' ಎಂಬ ಅಭಿಪ್ರಾಯಕ್ಕೆ ಈಗಲೂ ಬದ್ಧ; ಆದರೆ ಅದಾನಿ ನಮಗೆ ಕೇವಲ...: ಪ್ರಿಯಾಂಕ್ ಖರ್ಗೆ

ಸರ್ಕಾರದ ಎರಡು ಯೋಜನೆಗಳಲ್ಲಿ ಅದಾನಿ ಎಲ್-1 ಆಗಿದ್ದಾರೆ. ನಮ್ಮ ರಾಜ್ಯಕ್ಕೆ ಆ ಯೋಜನೆಗಳು ಮುಖ್ಯವಾಗಿವೆ. ನಾವು ಟೆಂಡರ್ ಮೇಲೆ ಪರಿಣಾಮ ಬೀರಲು ಆಗುವುದಿಲ್ಲ.

ಬೆಂಗಳೂರು: ಸರ್ಕಾರಿ ಗುತ್ತಿಗೆದಾರರಾಗಿ ಗೌತಮ್ ಅದಾನಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಡಿ.ಕೆ. ಶಿವಕುಮಾರ್- ಅದಾನಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದಾನಿ ಬಗ್ಗೆ ನಮ್ಮ ಅಭಿಪ್ರಾಯ ಏನೇ ಇರಬಹುದು. ಚಿತ್ತಾಪುರದಲ್ಲಿ ಎಸಿಸಿ ಸಿಮೆಂಟ್ ಕಾರ್ಖಾನೆಯನ್ನು ಅದಾನಿ ಖರೀದಿಸಿದ್ದಾರೆ. ಕಾನೂನುಬದ್ಧವಾಗಿ ಉತ್ಪಾದನೆ ಮತ್ತು ವ್ಯವಹಾರ ನಡೆಸುವುದಕ್ಕೆ ಸರ್ಕಾರದ ಯಾವುದೇ ಆಕ್ಷೇಪಣೆ ಇಲ್ಲ. ಅದೇ ರೀತಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡುವುದರಲ್ಲೂ ತಪ್ಪಿಲ್ಲ ಎಂದರು.

ಸರ್ಕಾರದ ಎರಡು ಯೋಜನೆಗಳಲ್ಲಿ ಅದಾನಿ ಎಲ್-1 ಆಗಿದ್ದಾರೆ. ನಮ್ಮ ರಾಜ್ಯಕ್ಕೆ ಆ ಯೋಜನೆಗಳು ಮುಖ್ಯವಾಗಿವೆ. ನಾವು ಟೆಂಡರ್ ಮೇಲೆ ಪರಿಣಾಮ ಬೀರಲು ಆಗುವುದಿಲ್ಲ. ಎಲ್-1 ಆಗಿರುವುದರಿಂದ ಸೌಜನ್ಯಕ್ಕಾಗಿ ಭೇಟಿ ಆಗಿರಬಹುದು. ನಮಗೆ ಅವರು ಗುತ್ತಿಗೆದಾರ ಅಷ್ಟೇ ಎಂದರು.

ಕೇಂದ್ರ ಸರ್ಕಾರ ಅಂಬಾನಿ, ಅದಾನಿ ಗುಲಾಮರು ಎಂಬುದು ನಮ್ಮ ಅಭಿಪ್ರಾಯ. ಆದರೆ, ನ್ಯಾಯಯುತವಾಗಿ ಟೆಂಡರ್ ಪಡೆದಿದ್ದರೆ ಏನು ಮಾಡುವುದು, ನಮಗೆ ಕೆಲಸ ಮಾಡಿಸುವುದು ಮುಖ್ಯ. ಅದು ಅಂಬಾನಿ, ಅದಾನಿ ಅಥವಾ ಅಂಬರೀಷ್ ಯಾರೇ ಆಗಿರಬಹುದು.

ನಾವು ಬೇರೆಯವರಿಗೆ ಟೆಂಡರ್ ಕೊಟ್ಟಿದ್ದರೆ ಹಗರಣ ಎನ್ನುತ್ತಿದ್ದೀರಿ. ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ. ಅದಕ್ಕಾಗಿ ಅವರು ಭೇಟಿ ಆಗಿರಬಹುದು ಎಂದು ಸಮರ್ಥಿಸಿಕೊಂಡರು.

ಬಿಜೆಪಿ ನಾಯಕರು ಸುರಂಗ ಮಾರ್ಗ ಮಾಡಬೇಕೆಂದು ಹೇಳುತ್ತಾರೊ, ಬೇಡ ಎನ್ನುತ್ತಾರಾ? ಸಂಸದರು ಈ ಹಿಂದೆ ಬಾಯಿ ಬಡಿದುಕೊಳ್ಳುತ್ತಿದ್ದರು. ಈಗ ಅವರ ನೆಂಟರಿಗೆ ಸಿಕ್ಕಿದೆ. ನೆಂಟರು, ಬೀಗರು ಟೆಂಡರ್ ಹಾಕಬಹುದು. ನಾವು ಬೇಡ ಎನ್ನಲು ಆಗುತ್ತದೆಯೇ ಎಂದೂ ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೆಹಲಿ ಚಲೋ’ ಪ್ರತಿಭಟನೆಗೆ ಬ್ರೇಕ್: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video