ಕರ್ನಾಟಕ ವಿಧಾನಸಭೆ  
ರಾಜ್ಯ

BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ: ಸಚಿವ ರಿಜ್ವಾನ್ ಅರ್ಷದ್

ರದ್ದುಗೊಂಡಿರುವ ಬಿಪಿಎಲ್ ಕಾರ್ಡ್‌ಗಳನ್ನು ಮರುಪರಿಶೀಲಿಸಿ, ಅರ್ಹ ಫಲಾನುಭವಿಗಳು ತಮ್ಮ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಲು ಹಾಗೂ ನಕಲಿ ಕಾರ್ಡ್‌ಗಳು, ಅನರ್ಹ ಫಲಾನುಭವಿಗಳು ಮತ್ತು ಇತರ ಅಕ್ರಮಗಳನ್ನು ಪತ್ತೆಹಚ್ಚಲು ಇಲಾಖೆಗೆ ಸೂಚಿಸಲಾಗಿದೆ ಎಂದು ಅರ್ಷದ್ ತಿಳಿಸಿದರು.

ಬೆಂಗಳೂರು: ಬಿಪಿಎಲ್ ಕಾರ್ಡ್‌ಗಳಿಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು ಪರಿಷ್ಕರಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ವಿಧಾನಸಭೆಗೆ ತಿಳಿಸಿದ್ದಾರೆ.

ಪ್ರಸ್ತುತ ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ 1.20 ಲಕ್ಷ ರೂಪಾಯಿ ಇದೆ. ಆದಾಯ ಅರ್ಹತಾ ಮಿತಿಯನ್ನು ಪರಿಷ್ಕರಿಸುವ ವಿಚಾರ ವ್ಯಾಪಕ ಪರಿಣಾಮಗಳನ್ನು ಹೊಂದಿದ್ದು, ಎಲ್ಲ ಸಂಬಂಧಿತರೊಂದಿಗೆ ಸಮಗ್ರ ಸಮಾಲೋಚನೆ ಅಗತ್ಯವಿದೆ. ಈ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ. ಅರ್ಹ ಯಾವುದೇ ಫಲಾನುಭವಿಗೆ ಅವರ ಹಕ್ಕಿನ ಸೌಲಭ್ಯ ವಂಚನೆಯಾಗದಂತೆ ಮುಖ್ಯಮಂತ್ರಿ ಅವರೊಂದಿಗೆ ಈ ವಿಚಾರವನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.

ರದ್ದುಗೊಂಡಿರುವ ಬಿಪಿಎಲ್ ಕಾರ್ಡ್‌ಗಳನ್ನು ಮರುಪರಿಶೀಲಿಸಿ, ಅರ್ಹ ಫಲಾನುಭವಿಗಳು ತಮ್ಮ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಲು ಹಾಗೂ ನಕಲಿ ಕಾರ್ಡ್‌ಗಳು, ಅನರ್ಹ ಫಲಾನುಭವಿಗಳು ಮತ್ತು ಇತರ ಅಕ್ರಮಗಳನ್ನು ಪತ್ತೆಹಚ್ಚಲು ಇಲಾಖೆಗೆ ಸೂಚಿಸಲಾಗಿದೆ ಎಂದು ಅರ್ಷದ್ ತಿಳಿಸಿದರು.

ಪ್ರತಿ ಕುಡಿಯುವ ನೀರಿನ ಘಟಕ ದುರಸ್ತಿಗೆ 3,000 ರೂಪಾಯಿ ವೆಚ್ಚ: ಈಶ್ವರ ಖಂಡ್ರೆ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಘಟಕಗಳ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿಯೊಂದು ಘಟಕದ ದುರಸ್ತಿಗೆ ಸರ್ಕಾರ 3,000 ರೂಪಾಯಿ ವೆಚ್ಚ ಮಾಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ವಿಧಾನಸಭೆಗೆ ತಿಳಿಸಿದ್ದಾರೆ.

ಅನೇಕಲ್ ಶಾಸಕ ಬಿ. ಶಿವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಈಶ್ವರ ಖಂಡ್ರೆ, ರಾಜ್ಯಾದ್ಯಂತ ಒಟ್ಟು 20,340 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 17,208 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 602 ಘಟಕಗಳು ಸ್ಥಗಿತಗೊಂಡಿವೆ ಹಾಗೂ 2,530 ಘಟಕಗಳಿಗೆ ದುರಸ್ತಿ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯನಿರ್ವಹಿಸದ ಕುಡಿಯುವ ನೀರಿನ ಘಟಕಗಳನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ಲಭ್ಯವಿರುವ ಅನುದಾನದಿಂದ ದುರಸ್ತಿ ಮಾಡಲಾಗುವುದು. ಪಂಚಾಯಿತಿಯಲ್ಲಿ ಸಾಕಷ್ಟು ಅನುದಾನ ಇಲ್ಲದಿದ್ದರೆ, ಅಗತ್ಯ ಅನುದಾನವನ್ನು ಇಲಾಖೆ ಒದಗಿಸಲಿದೆ ಎಂದು ಹೇಳಿದರು.

ಕುಡಿಯುವ ನೀರಿನ ಘಟಕಗಳ ದುರಸ್ತಿಗಾಗಿ ರಾಜ್ಯ ಸರ್ಕಾರ 29.50 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದು, ಅದರಲ್ಲಿ 13 ಕೋಟಿ ರೂಪಾಯಿ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!