ಡಿ ಕೆ ಶಿವಕುಮಾರ್  
ರಾಜ್ಯ

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್

ಪ್ರವಾದಿ ಮಹಮ್ಮದ್ ಅವರ ಜನ್ಮದಿನದಂದು ಅವರ ಸಂದೇಶ ಸ್ಮರಿಸುತ್ತಿದ್ದೇವೆ. ನಾನು ದೆಹಲಿ ಪ್ರವಾಸ ಕೈಗೊಳ್ಳಬೇಕಿತ್ತು. ನಿಮ್ಮ ಮೇಲಿನ ಅಭಿಮಾನ ಪೂರ್ವಕವಾಗಿ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ.

ಬೆಂಗಳೂರು: ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರ ನಿಮ್ಮ ಜೊತೆಗೆ ನಿಲ್ಲಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.

ಮರ್ಕಝಿ ಮಿಲಾದ್ ಒ ಸೀರತ್ ಕಮಿಟಿ ಸುನ್ನಿ ಜಮಾಯತ್ ಆಲ್ ಕರ್ನಾಟಕ ವತಿಯಿಂದ ಬೆಂಗಳೂರಿನ ವೈಎಂಸಿಎ ಮೈದಾನದಲ್ಲಿ ಬುಧವಾರ ನಡೆದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.

"ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ನಾವು ಹುಟ್ಟುವಾಗ ಯಾವ ಜಾತಿ, ಧರ್ಮದಲ್ಲಿ ಹುಟ್ಟುತ್ತೇವೆ ಎಂದು ಅರ್ಜಿ ಹಾಕುವುದಿಲ್ಲ. ಯಾವುದೇ ಧರ್ಮ ಬೇರೆಯವರಿಗೆ ತೊಂದರೆ ಮಾಡು ಎಂದು ಹೇಳುವುದಿಲ್ಲ. ಶಾಂತಿ ನೆಲೆಸಿ, ದೇಶದಲ್ಲಿ ಐಕ್ಯತೆ, ಸಮಗ್ರತೆ ಇರಬೇಕು ಎಂದು ಎಲ್ಲಾ ಧರ್ಮಗುರುಗಳು ಸಾರಿದ್ದಾರೆ" ಎಂದು ತಿಳಿಸಿದರು.

"ಪ್ರವಾದಿ ಮಹಮ್ಮದ್ ಅವರ ಜನ್ಮದಿನದಂದು ಅವರ ಸಂದೇಶ ಸ್ಮರಿಸುತ್ತಿದ್ದೇವೆ. ನಾನು ದೆಹಲಿ ಪ್ರವಾಸ ಕೈಗೊಳ್ಳಬೇಕಿತ್ತು. ನಿಮ್ಮ ಮೇಲಿನ ಅಭಿಮಾನ ಪೂರ್ವಕವಾಗಿ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ನೀವು ಶಾಂತಿ ಕಾಪಾಡುವ ಜನ. ನಿಮಗೆ ಶುಭಕೋರಲು ಬಂದಿದ್ದೇನೆ" ಎಂದರು.

"ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲರನ್ನು ಸಮಾಣತೆಯಿಂದ ನೋಡುತ್ತಿದೆ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದೆ. ಸಾಮಾಜಿಕ ನ್ಯಾಯ ಹಾಗೂ ಶಾಂತಿ ಕಾಪಾಡಲು ಬದ್ಧವಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಣ ಮೀಸಲಿಟ್ಟು ಕಾರ್ಯಕ್ರಮ ರೂಪಿಸಲಾಗಿದೆ. ನಿಮ್ಮ ಸಹಕಾರದಲ್ಲಿ ಬಲಿಷ್ಠ ಸರ್ಕಾರ ಬಂದಿದೆ. ನಮ್ಮ ಸರ್ಕಾರ ಕೂಡ ಮೊದಲ ಬಾರಿಗೆ ಈ ಸಮುದಾಯಕ್ಕೆ ಪರಿಷತ್ ಸಭಾಪತಿ ಸ್ಥಾನ, 3 ಸಚಿವ ಹಾಗೂ ಹತ್ತಾರು ನಿಗಮ ಅಧ್ಯಕ್ಷ ಸ್ಥಾನ ನೀಡಿದೆ" ಎಂದರು.

"ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿತು 7 ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಬಗ್ಗೆ ಚರ್ಚಿಸಿ ಪಕ್ಷಾತೀತವಾಗಿ ತೀರ್ಮಾನ ಕೈಗೊಳ್ಳಲು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗುವುದು" ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!