ಬಿಡದಿ ಬಳಿಕ ಮೈಸೂರಿನಲ್ಲೂ ಭೂಸ್ವಾಧೀನದ ಕಿಚ್ಚು Online Desk
ರಾಜ್ಯ

ಬಿಡದಿ ಬಳಿಕ ಮೈಸೂರಿನ ವರುಣಾ ಮೇಲೆ ಸರ್ಕಾರದ ಕಣ್ಣು! ಮಾಜಿ CM ಸಿದ್ದರಾಮಯ್ಯ ತವರಲ್ಲೇ 165 ಎಕರೆ ಭೂಸ್ವಾಧೀನಕ್ಕೆ ರೈತರಿಂದ ಭಾರಿ ವಿರೋಧ!

ಬಿಡದಿ ಬಳಿಕ ಮೈಸೂರಿನಲ್ಲೂ ಭೂಸ್ವಾಧೀನದ ಕಿಚ್ಚು: ವರುಣಾ ಕ್ಷೇತ್ರದ ಫಲವತ್ತಾದ ಕೃಷಿ ಭೂಮಿ ಮೇಲೆ ಸರ್ಕಾರದ ಕಣ್ಣು! 165 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆಗೆ ಅನ್ನದಾತರ ತೀವ್ರ ವಿರೋಧ. ಆ ಕುರಿತ ವರದಿ ಇಲ್ಲಿದೆ:

ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಬಳಿ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಅಂದರೆ ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗಾಗಿ ಸರ್ಕಾರ ಯೋಜನೆ ರೂಪಿಸಿದೆ. ಆದರೆ, ಇದರ ಅನುಷ್ಠಾನಕ್ಕೆ ಬಿಡದಿ ಭಾಗದ ರೈತರು ದೊಡ್ಡ ಮಟ್ಟದಲ್ಲಿ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆಯೇ, ರಾಜ್ಯ ಸರ್ಕಾರ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿಯೂ ಮತ್ತೊಂದು, ಯೋಜನೆಗಾಗಿ 165 ಎಕರೆ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದು ಸ್ಥಳೀಯ ರೈತರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಆ ಕುರಿತ ವರದಿ ಇಲ್ಲಿದೆ:

ಹೌದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ಮೈಸೂರಿನ ವರುಣಾ ವಿಧಾನಸಭಾ ವ್ಯಾಪ್ತಿಯಲ್ಲಿ, ಮೈಸೂರು ವಿಮಾನ ನಿಲ್ದಾಣದ ಸಮೀಪವಿರುವ ಮರಸೇ ಮತ್ತು ಮಾದರಹಳ್ಳಿ ಮುಂತಾದ ಗ್ರಾಮಗಳ ಸುಮಾರು 165 ಎಕರೆ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗಾಗಿ ವಶಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಮುಂದಾಗಿದ್ದು, ಸ್ಥಳೀಯ ರೈತರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ರೈತರಿಂದ ಭಾರಿ ವಿರೋಧ!

ಪ್ರಸ್ತಾವಿತ ಭೂಮಿಯಲ್ಲಿ ರೈತರು ಅಡಿಕೆ, ತೆಂಗು, ಬಾಳೆ ಮತ್ತು ಭತ್ತದಂತಹ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಆದರೆ, ಯೋಜನೆಗಾಗಿ, ಸರ್ಕಾರದಿಂದ ಸುಮಾರು 65ಕ್ಕೂ ಹೆಚ್ಚು ರೈತರಿಗೆ ನೋಟಿಸ್ ನೀಡಲಾಗಿದ್ದು, ರೈತರು ತಮ್ಮ ಫಲವತ್ತಾದ ಭೂಮಿಯನ್ನು ಕೈಗಾರಿಕೆಗಳಿಗಾಗಿ ಬಿಟ್ಟುಕೊಡಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. "ನಮ್ಮ ಜೀವನದ ಆಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಕೈಗಾರಿಕೆಗಳ ಸ್ಥಾಪನೆಗೆ ಬಿಟ್ಟುಕೊಡುವುದಿಲ್ಲ" ಎಂದು ಸ್ಥಳೀಯ ರೈತರು ಒಕ್ಕೊರಲಿನಿಂದ ಪಟ್ಟುಹಿಡಿದಿದ್ದಾರೆ. ಹಾಗಾಗಿ, ಬೆಂಗಳೂರು ಸಮೀಪದ ಬಿಡದಿಯಲ್ಲಿ ನಡೆದ ಭೂಸ್ವಾಧೀನ ವಿರೋಧಿ ಚಳವಳಿಯ ಮಾದರಿಯಲ್ಲೇ ಮೈಸೂರು ಜಿಲ್ಲೆಯಲ್ಲೂ ಬೃಹತ್ ಹೋರಾಟ ಮತ್ತು ಪ್ರತಿಭಟನೆಗಳನ್ನು ಸಂಘಟಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ