ಜಿ. ಪರಮೇಶ್ವರ್  
ರಾಜ್ಯ

ವಸತಿ ರಹಿತರಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ಗಳ ವಿತರಣೆ: ಸರ್ಕಾರ ಘೋಷಣೆ

ನಿವೇಶನ ಹಂಚಿಕೆಯಲ್ಲಿ ದುರ್ಬಲ ವರ್ಗಗಳಿಗೆ ಆದ್ಯತೆ ನೀಡಬೇಕು. ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಅಂಗವಿಕಲರು, ವಿಧವೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು: ರಾಜ್ಯದ ವಸತಿ ರಹಿತರಿಗೆ ಹಾಗೂ ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದೆ.

ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50,000 ವಸತಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ, ಮುಂಬರುವ ಡಿಸೆಂಬರ್ 31ರ ಒಳಗಾಗಿ ಒಟ್ಟು 5 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಕಂದಾಯ ಇಲಾಖೆ ಸಜ್ಜಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಗುರುವಾರ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಸೆಪ್ಟೆಂಬರ್‌ 15ರೊಳಗೆ ಸೂಕ್ತ ಸರ್ಕಾರಿ ಜಮೀನುಗಳನ್ನು ಗುರುತಿಸುವಂತೆ ಸೂಚಿಸಿದರು.

ಗುರುತಿಸುವ ಜಮೀನಿಗೆ ರಸ್ತೆ ಹಾಗೂ ನೀರಿನ ಸೌಲಭ್ಯ ಇರಬೇಕು. ಗ್ರಾಮಗಳಿಗೆ ಸಮೀಪದಲ್ಲಿರುವ ಜಮೀನಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ನಿವೇಶನ ಹಂಚಿಕೆಯಲ್ಲಿ ದುರ್ಬಲ ವರ್ಗಗಳಿಗೆ ಆದ್ಯತೆ ನೀಡಬೇಕು. ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಅಂಗವಿಕಲರು, ವಿಧವೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಕಂದಾಯ ಗ್ರಾಮಗಳ ಘೋಷಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಪರಮೇಶ್ವರ್‌ ಅವರು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 10,896 ಕಂದಾಯ ಗ್ರಾಮಗಳನ್ನು ಘೋಷಿಸುವ ಗುರಿ ಹೊಂದಲಾಗಿದ್ದು, ಈವರೆಗೆ ಕೇವಲ 3,354 ಗ್ರಾಮಗಳನ್ನು ಮಾತ್ರ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಾಕಿ ಇರುವ ಪ್ರಸ್ತಾವನೆಗಳನ್ನು 15 ದಿನಗಳೊಳಗೆ ಪ್ರಾಥಮಿಕ ಅಧಿಸೂಚನೆಗಾಗಿ ಕಳುಹಿಸಬೇಕು. ಅಂತಿಮ ಅಧಿಸೂಚನೆ ಪ್ರಕ್ರಿಯೆಯನ್ನೂ ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಹಕ್ಕುಪತ್ರ ನೋಂದಣಿಗೆ ಸೆ.30 ಗಡುವು

ಹಂಚಿಕೆ ಮಾಡಿರುವ ಹಕ್ಕುಪತ್ರಗಳ ನೋಂದಣಿ ಪ್ರಕ್ರಿಯೆಯನ್ನೂ ತ್ವರಿತಗೊಳಿಸುವಂತೆ ಪರಮೇಶ್ವರ್‌ ನಿರ್ದೇಶನ ನೀಡಿದರು. ಈವರೆಗೆ 2.05 ಲಕ್ಷ ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, ಸುಮಾರು 1.55 ಲಕ್ಷ ಹಕ್ಕುಪತ್ರಗಳು ನೋಂದಣಿಯಾಗಿವೆ. ಉಳಿದ ಹಕ್ಕುಪತ್ರಗಳ ನೋಂದಣಿಯನ್ನು ಸೆಪ್ಟೆಂಬರ್‌ 30ರೊಳಗೆ ಪೂರ್ಣಗೊಳಿಸಬೇಕು ಎಂದು ಗಡುವು ವಿಧಿಸಿದರು.

24.43 ಕೋಟಿ ಪುಟಗಳ ಭೂ ದಾಖಲೆ ಡಿಜಿಟಲೀಕರಣ ಬಾಕಿ

ಭೂ ದಾಖಲೆಗಳ ಡಿಜಿಟಲೀಕರಣ ಕುರಿತು ಮಾತನಾಡಿದ ಪರಮೇಶ್ವರ್‌, 10 ಜಿಲ್ಲೆಗಳಲ್ಲಿ ಈ ಕಾರ್ಯ ಪೂರ್ಣಗೊಂಡಿದ್ದು, ಇನ್ನೂ 21 ಜಿಲ್ಲೆಗಳಲ್ಲಿ ಬಾಕಿ ಇದೆ ಎಂದು ತಿಳಿಸಿದರು. ಒಟ್ಟು 24.43 ಕೋಟಿಗೂ ಹೆಚ್ಚು ಪುಟಗಳ ಭೂ ದಾಖಲೆಗಳನ್ನು ಇನ್ನೂ ಡಿಜಿಟಲೀಕರಣಗೊಳಿಸಬೇಕಿದೆ ಎಂದು ಹೇಳಿದರು.

ಬಗೈರ್‌ಹುಕುಂ ಅರ್ಜಿಗಳ ವಿಲೇವಾರಿಯನ್ನೂ ತ್ವರಿತಗೊಳಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು. ಈವರೆಗೆ 14.37 ಲಕ್ಷ ಅರ್ಜಿಗಳು ಸ್ವೀಕೃತವಾಗಿದ್ದು, ಸುಮಾರು 6.99 ಲಕ್ಷ ಅರ್ಜಿಗಳು ಇನ್ನೂ ಬಾಕಿ ಉಳಿದಿವೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು