ಜ್ಞಾನೇಂದ್ರ ಕುಮಾರ್ 
ರಾಜ್ಯ

KPSC ಪಶುವೈದ್ಯರ ನೇಮಕಾತಿ ಅಕ್ರಮ: ನಾಪತ್ತೆಯಾಗಿದ್ದ IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಪ್ರತ್ಯಕ್ಷ; CID ವಿಚಾರಣೆಗೆ ಹಾಜರು!

ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಶುಕ್ರವಾರ ತನಿಖಾಧಿಕಾರಿ ರಾಘವೇಂದ್ರ ಹೆಗಡೆ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಸಿಐಡಿ ಕಣ್ಣು ತಪ್ಪಿಸಿ ಪರಾರಿಯಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.

ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಶುಕ್ರವಾರ ತನಿಖಾಧಿಕಾರಿ ರಾಘವೇಂದ್ರ ಹೆಗಡೆ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಜ್ಞಾನೇಂದ್ರ ಅವರು ನಿನ್ನೆಯೇ (ಆ.27) ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ವಿಚಾರಣೆಗೆ ಗೈರಾಗಿದ್ದರು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರ ಅವಧಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ ನಡೆದಿತ್ತು. ಈ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ.

2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಂದ್ರ ಕುಮಾರ್, ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಪಶುವೈದ್ಯರ ನೇಮಕಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.

ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಬೆಂಗಳೂರಿನ ಜಯಮಹಲ್‌ನಲ್ಲಿರುವ ಅವರ ನಿವಾಸ ಹಾಗೂ ಉತ್ತರ ಪ್ರದೇಶದ ಲಖನೌ ಬಳಿಯ ಸ್ವಗ್ರಾಮದ ಮನೆ ಮೇಲೆಯೂ ದಾಳಿ ನಡೆಸಿದ್ದರು.

ಇಡಿ ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ಜ್ಞಾನೇಂದ್ರ ಕುಮಾರ್ ತಮ್ಮ ಮೊಬೈಲ್, ಲ್ಯಾಪ್ಟಾಪ್ ಹಾಗೂ ಪ್ರಮುಖ ದಾಖಲೆಗಳೊಂದಿಗೆ ತರಾತುರಿಯಲ್ಲಿ ದೆಹಲಿಗೆ ತೆರಳಿ ಪರಾರಿಯಾಗಿದ್ದರು.

ಇಡಿ ಶೋಧದ ಬಳಿಕ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಸಿಐಡಿ ಅಧಿಕಾರಿಗಳು, ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನ ಮನೆ ಹಾಗೂ ಕಚೇರಿಯ ಬಾಗಿಲಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೋಟಿಸ್ ಅಂಟಿಸಿ ಬಂದಿದ್ದರು. ಸಾಲು ಸಾಲು ಅನುಮಾನಗಳು ಹಾಗೂ ಬಂಧನದ ಭೀತಿ ಎದುರಾದ ಹಿನ್ನೆಲೆಯಲ್ಲಿ, ಕೊನೆಗೂ ಜ್ಞಾನೇಂದ್ರ ಕುಮಾರ್ ಇಂದು ಸಿಐಡಿ ಕಚೇರಿಗೆ ಆಗಮಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 472ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!