ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು 
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

ರಾಜಧಾನಿ ಬೆಂಗಳೂರಿನಲ್ಲಿ ಮಧ್ಯರಾತ್ರಿ ಪೊಲೀಸರ ಬಂದೂಕು ಸದ್ದು ಮಾಡಿದೆ. ಸೋಮಸುಂಡ್ರಪಾಳ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದುಕೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಧ್ಯರಾತ್ರಿ ಪೊಲೀಸರ ಬಂದೂಕು ಸದ್ದು ಮಾಡಿದೆ. ಸೋಮಸುಂಡ್ರಪಾಳ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದುಕೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ತಕ್ಷಣ ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ, ರೌಡಿಯ ಅಟ್ಟಹಾಸ ತಡೆಯಲು ಬಂದ ಪೊಲೀಸರ ಮೇಲೆಯೇ ಆ ರೌಡಿಶೀಟರ್ ದಾಳಿಗೆ ಮುಂದಾಗಿದ್ದು, ಕೊನೆಗೆ ಅನಿವಾರ್ಯವಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಸುಂಡ್ರಪಾಳ್ಯ ಪ್ರದೇಶದಲ್ಲಿ, ತಲೆಮರೆಸಿಕೊಂಡಿದ್ದ ರೌಡಿಶೀಟರ್ ಜಿಶಾನ್‌, ದ್ವಿಚಕ್ರ ವಾಹನದಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು. ಈ ಬಗ್ಗೆ ಸ್ಥಳೀಯರಿಂದ ಬಂಡೆಪಾಳ್ಯ ಪೊಲೀಸರಿಗೆ ಖಚಿತ ಮಾಹಿತಿ ತಲುಪಿತ್ತು. ಮಾಹಿತಿ ಸಿಕ್ಕ ತಕ್ಷಣವೇ ಬಂಡೆಪಾಳ್ಯ ಪೊಲೀಸ್ ಠಾಣೆಯ ಪಿಎಸ್‌ಐ ಸಚಿನ್ ಹಾಗೂ ಸಿಬ್ಬಂದಿ ಸಂದೀಪ್ ಕಾಂಬ್ಳೆ ಸ್ಥಳಕ್ಕೆ ತೆರಳಿದರು. ಅದರಂತೆ, ಮಧ್ಯರಾತ್ರಿ ಸುಮಾರು 12.50ರ ವೇಳೆಗೆ ಪೊಲೀಸರು ಆರೋಪಿ ಜಿಶಾನ್‌ನನ್ನು ವಶಕ್ಕೆ ಪಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಮುಂದಾದ ಆರೋಪಿ ಜಿಶಾನ್, ತನ್ನ ಬಳಿಯಿದ್ದ ಮಾರಕಾಸ್ತ್ರದಿಂದ ಕಾನ್‌ಸ್ಟೇಬಲ್ ಸಂದೀಪ್ ಕಾಂಬ್ಳೆ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

ಆತ್ಮರಕ್ಷಣೆಗಾಗಿ ಪಿಎಸ್‌ಐ ನಡೆಸಿದ ಫೈರಿಂಗ್

ಕಾನ್‌ಸ್ಟೇಬಲ್ ಸಂದೀಪ್ ಕಾಂಬ್ಳೆ ಮೇಲೆ ದಾಳಿ ನಡೆಸಿದಷ್ಟೇ ಅಲ್ಲದೆ, ಆರೋಪಿ ಜಿಶಾನ್ ಪಿಎಸ್‌ಐ ಸಚಿನ್ ಅವರ ಮೇಲೆಯೂ ಮಾರಣಾಂತಿಕ ಹಲ್ಲೆಗೆ ಮುಂದಾಗಿದ್ದಾನೆ. ಈ ಸಂದರ್ಭದ ಆತ್ಮರಕ್ಷಣೆಗಾಗಿ ಪಿಎಸ್‌ಐ ಸಚಿನ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಗುಲಿದ ತಕ್ಷಣವೇ ಆರೋಪಿ ಕುಸಿದುಬಿದ್ದಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದದ್ದಾರೆ. ಇನ್ನು, ಘಟನೆಯಲ್ಲಿ ಗಾಯಗೊಂಡ ಕಾನ್‌ಸ್ಟೇಬಲ್ ಸಂದೀಪ್ ಕಾಂಬ್ಳೆ ಹಾಗೂ ರೌಡಿಶೀಟರ್ ಜಿಶಾನ್ ಇಬ್ಬರನ್ನೂ ಚಿಕಿತ್ಸೆಗಾಗಿ ತಕ್ಷಣವೇ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದುವರೆದು, ಆರೋಪಿ ಝೀಶಾನ್ ಈ ಹಿಂದೆ ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹೇಲ್ ಕೊಲೆ ಪ್ರಕರಣದ ಆರೋಪಿ ರೌಡಿ ಶೀಟರ್ ಆದಿಲ್ ಅಕ್ಮಲ್‌ನ ಆಪ್ತ ಸಹಚರನಾಗಿದ್ದು, ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಆತ ಯಾವ ಕೃತ್ಯಕ್ಕೆ ಸಂಚು ರೂಪಿಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ