ಕಟೌಟ್ ಮೇಲೆ ಪ್ಯಾಲೆಸ್ತೀನ್ ಧ್ವಜ  
ರಾಜ್ಯ

ಶಿವಮೊಗ್ಗ: ಈದ್ ಮಿಲಾದ್‌ ಗೆ ಕಟೌಟ್‌ ಮೇಲೆ ಪ್ಯಾಲೆಸ್ತೀನ್ ಧ್ವಜ ಹಾರಾಟ; ಮೂವರ ವಿರುದ್ಧ ಕೇಸು ದಾಖಲು; Video

ಎಫ್‌ಐಆರ್‌ ಪ್ರಕಾರ, ನಿಹಾಲ್ ಅಲಿಯಾಸ್ ಬೆಕ್ಕು, ಉಮರ್ ಹಾಗೂ ಅಬ್ರಹಾರ್ ಅವರು ಕಟೌಟ್‌ ಮೇಲೇರಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿ, ಕೃತ್ಯವನ್ನು ವಿಡಿಯೊ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ. ಬಳಿಕ ಈ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ: ಆರ್‌ಎಂಎಲ್ ನಗರದಲ್ಲಿ ಈದ್ ಮಿಲಾದ್‌ ಆಚರಣೆಗೆ ನಿರ್ಮಿಸಲಾಗುತ್ತಿದ್ದ ಕಟೌಟ್‌ ಮೇಲೆ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಆರೋಪದ ಮೇರೆಗೆ ಶಿವಮೊಗ್ಗ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಎಫ್‌ಐಆರ್‌ ಪ್ರಕಾರ, ನಿಹಾಲ್ ಅಲಿಯಾಸ್ ಬೆಕ್ಕು, ಉಮರ್ ಹಾಗೂ ಅಬ್ರಹಾರ್ ಅವರು ಕಟೌಟ್‌ ಮೇಲೇರಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿ, ಕೃತ್ಯವನ್ನು ವಿಡಿಯೊ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ. ಬಳಿಕ ಈ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೃತ್ಯವು ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಸೃಷ್ಟಿಸುವ, ಪರಸ್ಪರ ದ್ವೇಷಕ್ಕೆ ಪ್ರಚೋದನೆ ನೀಡುವ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಸಾಧ್ಯತೆ ಹೊಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮೂವರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್‌ 353(2), 196(1) ಹಾಗೂ 197ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು