ಕೇಂದ್ರ ಸಚಿವ ವಿ. ಸೋಮಣ್ಣ 
ರಾಜ್ಯ

ಹಿಂದಿನ ಸರ್ಕಾರದ ನಿರ್ಲಕ್ಷ್ಯಕ್ಕೆ ತೆರೆ; ರೈಲ್ವೆ ಅಭಿವೃದ್ಧಿಗೆ ಎನ್‌ಡಿಎ ಒತ್ತು: ಸಚಿವ ಸೋಮಣ್ಣ

ದೇಶದಾದ್ಯಂತ ಅಗತ್ಯವಿರುವ ಕಡೆಗಳಲ್ಲಿ ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕಾಗಿ ಕೆಳಸೇತುವೆ ಮತ್ತು ಮೇಲ್ಸೇತುವೆಗಳನ್ನು ನಿರ್ಮಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶವಾಗಿದೆ.

ಕೋಲಾರ: ಕಳೆದ 12 ವರ್ಷಗಳಲ್ಲಿ ದೇಶಾದ್ಯಂತ ಹಲವು ಪ್ರಮುಖ ರೈಲ್ವೆ ಅಭಿವೃದ್ಧಿ ಯೋಜನೆಗಳನ್ನು ಎನ್‌ಡಿಎ ಸರ್ಕಾರ ಕೈಗೆತ್ತಿಕೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಬಂಗಾರಪೇಟೆ ಬೂದಿಕೋಟೆ ವೃತ್ತದಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಮೇಲ್ಸೇತುವೆಯನ್ನು ಉದ್ಘಾಟಿಸಿ ಶನಿವಾರ ಮಾತನಾಡಿದ ಸೋಮಣ್ಣ ಅವರು, ಹಿಂದಿನ ಯುಪಿಎ ಸರ್ಕಾರ ನಿರ್ಲಕ್ಷಿಸಿದ್ದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಎನ್‌ಡಿಎ ಸರ್ಕಾರ ಕೈಗೆತ್ತಿಕೊಂಡಿದೆ ಎಂದು ಹೇಳಿದರು.

ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು “ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ” ಎಂದು ಹೇಳಿದ ಅವರು, ಮೂಲಸೌಕರ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎರಡೂ ಸರ್ಕಾರಗಳ ಸಹಕಾರ ಅಗತ್ಯ ಎಂದು ಒತ್ತಿ ಹೇಳಿದರು. ಜನಪ್ರತಿನಿಧಿಗಳು ಜನರ ಆಶಯಗಳು ಮತ್ತು ಬೇಡಿಕೆಗಳನ್ನು ಈಡೇರಿಸಲು ಕೆಲಸ ಮಾಡಬೇಕು ಎಂದರು.

ದೇಶದಾದ್ಯಂತ ಅಗತ್ಯವಿರುವ ಕಡೆಗಳಲ್ಲಿ ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕಾಗಿ ಕೆಳಸೇತುವೆ ಮತ್ತು ಮೇಲ್ಸೇತುವೆಗಳನ್ನು ನಿರ್ಮಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶವಾಗಿದೆ. ಕೋಲಾರ ಜಿಲ್ಲೆಯಲ್ಲಿ ಹಲವು ಸೇತುವೆ ಮತ್ತು ಮೇಲ್ಸೇತುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಕಾಮಸಮುದ್ರದ ಬಳಿಯೂ ಮೇಲ್ಸೇತುವೆ ನಿರ್ಮಾಣ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿ ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್; ಕೊನೆಗೂ ಊಹಾಪೋಹಗಳಿಗೆ ತೆರೆ!

ನೇಪಾಳ ದುರಂತಕ್ಕೆ 5 ತಿಂಗಳ ಹಿಂದೆಯೇ ಎಚ್ಚರಿಕೆ; ಹಿಮನದಿಗಳ ಕರಗುವಿಕೆ ಕುರಿತು ಬೆಚ್ಚಿಬೀಳಿಸುವ ವರದಿ

ಬೆಂಗಳೂರು–ಹೊಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು; ಚಾಲಕ ಸಮಯಪ್ರಜ್ಞೆಯಿಂದ ಪಾರು, Video

ನೇಪಾಳ ಪ್ರವಾಹದ ರೌದ್ರಾವತಾರ; 5ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 734ಕ್ಕೆ ಏರಿಕೆ, 2,498 ಮಂದಿ ನಾಪತ್ತೆ..!

ನೇಪಾಳ ಜಲಪ್ರಳಯ: ಕಠ್ಮಂಡು ತಲುಪಿದ ಭಾರತದ ಪರಿಹಾರ ಸಾಮಗ್ರಿ ಹೊತ್ತ 4ನೇ ವಿಮಾನ, ರಕ್ಷಣಾ ಸಾಧನ–ವಿಧಿವಿಜ್ಞಾನ ತಜ್ಞರ ತಂಡ ರವಾನೆ..!