ಸಿದ್ದರಾಮಯ್ಯ 
ರಾಜ್ಯ

ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬನ್ನಿ: ಯುವ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ಕರೆ

ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಯಚೂರು: ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ, ಕೆಲವರು ಶಿಕ್ಷಣ ದೊರೆತರೂ ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದಿಲ್ಲ. ಸ್ವಾಭೀಮಾನಿಗಳಾಗಿ ಬದುಕುವುದು ಮುಖ್ಯ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಯುವಪೀಳಿಗೆ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಶೇ. 15ರಷ್ಟಿದ್ದ ಶಿಕ್ಷಣ ಈಗ ಶೇ.76 ಆಗಿದ್ದರೂ, ನಮ್ಮಲ್ಲಿ ಜಾತಿವ್ಯವಸ್ಥೆ ನಶಿಸಿಲ್ಲ. ಜಡತ್ವದಿಂದ ಕೂಡಿದ ಸಮಾಜಕ್ಕೆ ಚಲನೆ ಬರಲು ಆರ್ಥಿಕ, ಸಾಮಾಜಿಕ ಸಮಾನತೆಬೇಕು. ಸಮಾಜದ ಮೌಢ್ಯಗಳನ್ನು ಅಳಿಸುವ ಕಾರ್ಯದಲ್ಲಿ ಸ್ವಾಮೀಜಿಯವರು ತೊಡಗಿದ್ದರು. ಜನರ ಆರ್ಶೀವಾದದಿಂದ 8 ಬಾರಿ ಗೆದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾಡಿನ ಎಲ್ಲ ಜನರ ಪ್ರೀತಿಯಿಂದಲೇ ರಾಜಕೀಯದಲ್ಲಿಯೂ ಇಂದಿಗೂ ಬದುಕಿದ್ದೇನೆ. ಈ ಸಮಾಜದ ಪ್ರೀತಿಗೆ ಬೆಲೆಕಟ್ಟಲಾಗದು. ಧ್ವನಿಯಿಲ್ಲದವರ ಪರವಾಗಿ ಹೋರಾಡುವುದೇ ನನ್ನ ಕೆಲಸ ಎಂದರು.

ಇಡೀ ರಾಜ್ಯಕ್ಕೆ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಸತಿ ನಿಲಯ, ಯಾತ್ರಿನಿವಾಸ ಸೇರಿದಂತೆ ಹಲವು ಬೇಡಿಕೆಗಳಿಗೆ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು. ಎಲ್ಲ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಬೆಂಗಳೂರಿಗೆ ಸುಮಾರು 50 ಎಕರೆ ಪ್ರದೇಶವನ್ನು ನೀಡಲು ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿಯನ್ನು ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದರು.

ಕನಕದಾಸರು 'ಕುಲಕುಲವೆಂದು ಹೊಡೆದಾಡದಿರಿ' ಎಂದಂತೆ ಬುದ್ಧಬಸವಾದಿಶರಣರು ಜಾತಿವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದ್ದಾರೆ. ನಮ್ಮ ಸಮಾಜ ವಿವಿಧ ಜಾತಿ ಧರ್ಮ ವರ್ಗ ಭಾಷೆಗಳಿಂದ ಕೂಡಿದೆ. ಮನುಜರೆಲ್ಲರೂ ಒಂದೇ ಕುಟುಂಬ ಎಂದು ಭಾವಿಸಬೇಕು. ಸಾಮಾಜಿಕ ಚಿಂತಕರಾದ ಲೋಹಿಯಾ ಅವರು ಮುಂದುವರಿದ ಜಾತಿಯವರು ಸಮಾಜವನ್ನು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಾರೆ ಎಂದಿದ್ದರು. ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ. ಶಿಕ್ಷಣವಿಲ್ಲದೇ ಪ್ರಗತಿ ಸಾಧ್ಯವಿಲ್ಲ. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣ ವಾಗಿದೆ. ಯಾವುದೇ ಧರ್ಮವೂ ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ