ಸಿಜೆ ರಾಯ್ ಅಂತ್ಯಕ್ರಿಯೆ 
ರಾಜ್ಯ

ಕಾಸಾಗ್ರ್ಯಾಂಡ್‌ ಮಣ್ಣಲ್ಲಿ ಮಣ್ಣಾದ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್

ಇಂದು ಸಂಜೆ ಬನ್ನೇರುಘಟ್ಟದಲ್ಲಿರುವ ಕಾಸಾಗ್ರಾಂಡ್‌ನಲ್ಲಿ ಕ್ರಿಶ್ಚಿಯನ್ ಧರ್ಮದ ವಿಧಿ-ವಿಧಾನದಂತೆ ಅಂತ್ಯಸಂಸ್ಕಾರ ನೆರವೇರಿತು.

ಬೆಂಗಳೂರು: ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಅವರು ಭಾನುವಾರ ತಮ್ಮಿಚ್ಛೆಯಂತೆ ಕಾಸಾಗ್ರ್ಯಾಂಡ್‌ನ ಮಣ್ಣಲ್ಲಿ ಮಣ್ಣಾಗಿದ್ದಾರೆ.

ಇಂದು ಸಂಜೆ ಬನ್ನೇರುಘಟ್ಟದಲ್ಲಿರುವ ಕಾಸಾಗ್ರಾಂಡ್‌ನಲ್ಲಿ ಕ್ರಿಶ್ಚಿಯನ್ ಧರ್ಮದ ವಿಧಿ-ವಿಧಾನದಂತೆ ಅಂತ್ಯಸಂಸ್ಕಾರ ನೆರವೇರಿತು.

ಅಂತ್ಯಕ್ರಿಯೆಗೆ ಮುನ್ನ ಬನ್ನೇರುಘಟ್ಟದಲ್ಲಿರುವ ಕಾಸಾಗ್ರಾಂಡ್‌ನಲ್ಲಿ ಮಧ್ಯಾಹ್ನ ಎರಡು ಗಂಟೆಯವರೆಗೂ ರಾಯ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇರಿಸಲಾಗುತ್ತಿದೆ. ಅಂತಿಮ ಗೌರವ ಸಲ್ಲಿಸಲು ಸಂಬಂಧಿಕರು, ಆಪ್ತರು ಹಾಗೂ ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ತೀವ್ರ ನೊಂದಿದ್ದ ಸಿಜೆ ರಾವ್ ಅವರು ಕಳೆದ ಶುಕ್ರವಾರ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಂಪನಿ ಕಚೇರಿಯಲ್ಲಿ ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿಜೆ ರಾಯ್ ಅವರ ಮನೆ, ಕಚೇರಿಗಳ ಮೇಲೆ ಈ ಹಿಂದೆ ಹಲವು ಬಾರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅದರಂತೆ ಇಂದು ಸಹ ಅವರ ಕಂಪನಿಯ ಮೇಲೆ ಐಟಿ ದಾಳಿ ನಡೆದಿದ್ದು, ಇದರಿಂದ ಮನನೊಂದು ತಮ್ಮ ಪಿಸ್ತೂಲ್​​ನಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಈ ಘಟನೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!