ಸಾಂದರ್ಭಿಕ ಚಿತ್ರ 
ರಾಜ್ಯ

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; 72 ವರ್ಷದ ವ್ಯಕ್ತಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 72 ವರ್ಷದ ವ್ಯಕ್ತಿಯೊಬ್ಬನನ್ನು ಅಶೋಕ್ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 29ರಂದು ಘಟನೆ ನಡೆದಿತ್ತು.

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 72 ವರ್ಷದ ವ್ಯಕ್ತಿಯೊಬ್ಬನನ್ನು ಅಶೋಕ್ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 29ರಂದು ಘಟನೆ ನಡೆದಿದ್ದು ಬಾಲಕಿಯ ಮೇಲಿನ ದೌರ್ಜನ್ಯ ವಿಷಯ ತಿಳಿದರೂ ಪೋಷಕರು ದೀರ್ಘ ಕಾನೂನು ಪ್ರಕ್ರಿಯೆಗೆ ಹೆದರಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಸ್ಥಳೀಯ ನಿವಾಸಿಗಳ ಗುಂಪೊಂದು ಆಕ್ರೋಶಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರ ಭರವಸೆ ನಂತರ ಪೋಷಕರು ದೂರು ನೀಡಿದರು. ದೂರಿನ ಆಧಾರದ ಮೇಲೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

SCROLL FOR NEXT