ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಪರಮೇಶ್ವರ ಗಂಭೀರ ಆರೋಪ

ಕೆಲವು ಭಾಗಗಳಲ್ಲಿ, ಕೆಲವರು ಭಾಷಣಗಳನ್ನು ಮಾಡಿದ್ದಾರೆ. ಭಾಷಣ ಮಾಡಿದ ಮೇಲೆ ಏನಾಯಿತು ಎಂಬುದನ್ನು ಗಮನಿಸಿದ್ದೇವೆ. ಇದಕ್ಕೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ಬಿಲ್ ತಂದಿದ್ದೇವೆ. ಯಾರು ಏನು ಬೇಕಾದರೂ ಮಾತಾಡಬಹುದೇ?

ಬೆಂಗಳೂರು: ದ್ವೇಷ ಭಾಷಣ ಮಸೂದೆಯಲ್ಲಿನ 28 ಅಂಶಗಳನ್ನು ರಾಜ್ಯಪಾಲರು ಪ್ರಶ್ನಿಸಿದ್ದಾರೆ. ಅದನ್ನು ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ. ಮುಂದೆ ಏನಾಗುತ್ತದೆ ನೋಡೋಣ. ರಾಷ್ಟ್ರಪತಿಗಳು ಪರಿಶೀಲಿಸಿ ವಾಪಸ್ ಕೊಟ್ಟರೆ, ಬದಲಾವಣೆ ಮಾಡಿ ಕಳಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಏನು ಬೇಕಾದರೂ ಮಾತನಾಡಿದರೆ, ಅದರ ಪರಿಣಾಮ‌ ಸಮಾಜಕ್ಕೆ ಆಗುತ್ತದೆ. ಸಮುದಾಯಗಳನ್ನು ದೂಷಣೆ ಮಾಡುವುದು, ವೈಯಕ್ತಿಕವಾಗಿ ಮಾತನಾಡುವುದು. ಆ ಮಾತುಗಳು ಸಮಾಜದ ಮೇಲೆ ಏನು ಪರಿಣಾಮ ಬೀರುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ದ್ವೇಷಭಾಷಣ ಮಸೂದೆ ತಂದಿದ್ದೇವೆ.

ಕೆಲವು ಭಾಗಗಳಲ್ಲಿ, ಕೆಲವರು ಭಾಷಣಗಳನ್ನು ಮಾಡಿದ್ದಾರೆ. ಭಾಷಣ ಮಾಡಿದ ಮೇಲೆ ಏನಾಯಿತು ಎಂಬುದನ್ನು ಗಮನಿಸಿದ್ದೇವೆ. ಇದಕ್ಕೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ಬಿಲ್ ತಂದಿದ್ದೇವೆ. ಯಾರು ಏನು ಬೇಕಾದರೂ ಮಾತಾಡಬಹುದೇ? ಸಮಾಜದಲ್ಲಿ ಅಶಾಂತಿ ಉಂಟು‌ ಮಾಡಬಹುದೇ ಎಂದು ಪ್ರಶ್ನಿಸಿದರು.ರಾಜ್ಯಪಾಲರು ಉದ್ದೇಶಪೂರ್ವಕವಾಗಿ, ದ್ವೇಷ ಭಾಷಣ ಮಸೂದೆ ನೆನೆಗುದಿಗೆ ಬೀಳಬೇಕು. ಇದು ಜಾರಿಯಾಗಬಾರದು ಎಂಬ ಉದ್ದೇಶದಿಂದ ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಇನ್ನೂ ಇತ್ತೀಚೆಗೆ ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆಯಲ್ಲಿನ 28 ಅಂಶಗಳನ್ನು ರಾಜ್ಯಪಾಲರು ಪ್ರಶ್ನಿಸಿದ್ದಾರೆ. ಅದನ್ನು ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ. ಮುಂದೆ ಏನಾಗುತ್ತದೆ ನೋಡೋಣ. ರಾಷ್ಟ್ರಪತಿಗಳು ಪರಿಶೀಲಿಸಿ ವಾಪಸ್ ಕೊಟ್ಟರೆ, ಬದಲಾವಣೆ ಮಾಡಿ ಕಳಿಸಲಾಗುವುದು ಎಂದರು.

ಕರ್ನಾಟಕ ರಾಜ್ಯಪಾಲರು ಉದ್ದೇಶಪೂರ್ವಕವಾಗಿ, ರಾಜ್ಯ ಸರ್ಕಾರ 'ದ್ವೇಷ ಭಾಷಣ ಮಸೂದೆ 2026' ನೆನೆಗುದಿಗೆ ಬೀಳಬೇಕು. ಇದು ಜಾರಿಯಾಗಬಾರದು ಎಂಬ ಉದ್ದೇಶದಿಂದಲೇ ರಾಷ್ಟ್ರಪತಿಗಳಿಗೆ ಕಳಿಸಿದ್ದಾರೆ ಎಂದು ಜಿ.ಪರಮೇಶ್ವರ ಅವರು ಅಭಿಪ್ರಾಯ ಹೊರ ಹಾಕಿದರು.

ಉದ್ಯಮಿ ಸಿ.ಜೆ.ರಾಯ್ ಅತ್ಮಹತ್ಯೆ ಪ್ರಕರಣದಲ್ಲಿ ಬೇರೆಬೇರೆ ರೀತಿಯಲ್ಲಿ ಊಹಾಪೋಹಾಗಳು ಆಗಬಾರದು ಎಂಬ ಕಾರಣದಿಂದ ಎಸ್‌ಐಟಿ ರಚನೆ ಮಾಡಿದ್ದೇವೆ. ಎಸ್‌ಐಟಿ ವರದಿ ಏನು ಬರುತ್ತದೆ ಗಮನಿಸೋಣ. ಯಾರ ಪಾತ್ರಗಳು ಏನಿದೆ ಎಂಬುದು ನೋಡಬೇಕಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!