ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಕುರುಬ ಸಮುದಾಯ ST ಪಟ್ಟಿಗೆ: ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು

ಜಾತಿಗಣತಿ ವರದಿಯನ್ನು ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು.

ರಾಯಚೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವ ಸಂಬಂಧ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರದಿಂದ ಕೆಲವು ಮಾಹಿತಿ ಕೇಳಲಾಗಿದ್ದು, ಅವಕ್ಕೆ ಸ್ಪಷ್ಟೀಕರಣಗಳೊಂದಿಗೆ ಮರು ಶಿಫಾರಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಬ್ರಹ್ಮಲೀನರಾದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿಯನ್ನು ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಹಿಂದುಳಿದವರ್ಗಗಳ ಉನ್ನತಿ ಶಿಕ್ಷಣದ ಮೂಲಕ ಮಾತ್ರ ಸಾಧ್ಯ. ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪರಸ್ಪರ ಪ್ರೀತಿಯನ್ನು ಕಲಿಸುತ್ತವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು. ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ1992 ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು.

ರಾಜ್ಯದಲ್ಲಿನ ಎಲ್ಲಾ ಜಾತಿ ಮತ್ತು ಸಮುದಾಯಗಳ ಜನರ ಪ್ರೀತಿ ಹಾಗೂ ವಿಶ್ವಾಸ ನನಗಿದೆ. ಶಕ್ತಿ ಇರುವವರೆಗೆ ರಾಜಕಾರಣದಲ್ಲಿ ಮುಂದುವರಿದು ಬಡವರು ಹಾಗೂ ಧ್ವನಿಯಿಲ್ಲದವರ ಪರವಾಗಿ ಮಾತನಾಡುತ್ತೇನೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ನಿರಂಜನಂದಪುರಿ ಸ್ವಾಮೀಜಿ, ಕೆ.ಆರ್.ನಗರ ಕನಕ ಗುರುಪೀಠದ ಶಿವಾನಂದಪುರಿ ಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಉಪಸ್ಥಿತರಿದ್ದರು.

ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್, ಎನ್.ಎಸ್. ಬೋಸರಾಜು, ಶರಣಬಸಪ್ಪ ದರ್ಶನಾಪುರ, ಶಿವರಾಜ ತಂಗಡಗಿ, ಶಾಸಕರಾದ ಕರೆಮ್ಮ ನಾಯಕ್, ಭೀಮಸೇನ್ ಬಿ. ಚಿಮ್ಮನಕಟ್ಟಿ, ರಾಘವೇಂದ್ರ ಹಿಟ್ನಾಳ್, ಬನಸಗೌಡ ದದ್ದಾಳ್, ಆರ್. ಬಸನಗೌಡ ತುರವಿಹಾಳ, ದೊಡ್ಡನಗೌಡ ಪಾಟೀಲ್. ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಬಂಡೆಪ್ಪ ಕಾಶೆಂಪುರ, ವೆಂಕಟರಾವ್ ನಾಡಗೌಡ, ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ಮಾಜಿ ಶಾಸಕ ಶಿವನಗೌಡ ನಾಯಕ್ ಹಾಗೂ ನಿಕೇತ್ ರಾಜ್ ಮೌರ್ಯ ಸೇರಿದಂತೆ ಅನೇಕ ನಾಯಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಯೋತ್ಪಾದನೆ ಬಗ್ಗೆ ಭಾರತ ಯಾವುದೇ ದ್ವಿಮುಖ ನೀತಿಯನ್ನು ಹೊಂದಿಲ್ಲ, ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ-Video

ಆಪ್ತ ಮಿತ್ರನಿಗೆ ಕೈ ಕೊಟ್ಟ ಭಾರತ?; ಅಮೆರಿಕಾ ಹೇಳಿದ್ದೇ ನಿಜವಾಯ್ತಾ?

ಡಿ-ಕೋಡ್: ಕಂಬಳಿ ಹುಳದಿಂದ ಚಿಟ್ಟೆಯಾಗುವ ಕಡೆಗೆ 'ಬಿಜೆಪಿ' ರೂಪಾಂತರ

ಭಾರತ- US ವ್ಯಾಪಾರ ಒಪ್ಪಂದದಿಂದ ರೈತರಿಗೆ ಭಾರಿ ಹೊಡೆತ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಏನಂತಾರೆ?

ಕಾಂಗ್ರೆಸ್ ಪಕ್ಷದ ನಿಷ್ಠ ರಾಜಕಾರಣಿಯಿಂದ ವಿಶ್ವಾಸಘಾತಕ ಎಂಬ ಟೀಕೆಯ ವರೆಗೆ.... ರವನೀತ್ ಸಿಂಗ್ ಬಿಟ್ಟು ರಾಜಕೀಯ ಜೀವನದ ಬಗ್ಗೆ ಇಲ್ಲಿದೆ ಮಾಹಿತಿ

SCROLL FOR NEXT