ಕರ್ನಾಟಕ ವಿಧಾನ ಪರಿಷತ್ (ಸಾಂದರ್ಭಿಕ ಚಿತ್ರ) 
ರಾಜ್ಯ

ಪ್ರಧಾನಿ ಮೋದಿ ವಿರುದ್ಧ 'ಅವಹೇಳನಕಾರಿ' ಹೇಳಿಕೆ: ವಿಧಾನ ಪರಿಷತ್‌ನಲ್ಲಿ ಕೋಲಾಹಲ, ಕಾಂಗ್ರೆಸ್ ಎಂಎಲ್‌ಸಿ ವಿರುದ್ಧ ಬಿಜೆಪಿ ಕಿಡಿ!

ಮಂಗಳವಾರವೂ ಕೂಡ ಇದೇ ಗದ್ದಲ ಮುಂದುವರೆಯಿತು. ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ನಜೀರ್ ಅಹ್ಮದ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಎಂಎಲ್‌ಸಿ ನಜೀರ್ ಅಹ್ಮದ್ ನೀಡಿದ ಅವಹೇಳನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಮಂಗಳವಾರ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಕೋಲಾಹಲದ ವಾತಾವರಣ ನಿರ್ಮಾಣವಾಯಿತು.

ಕಾಂಗ್ರೆಸ್ ಪರಿಷತ್ ಸದಸ್ಯ ನಜೀರ್ ಅಹ್ಮದ್​ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರಿಂದ ಕೆರಳಿದ ಬಿಜೆಪಿ ಸದಸ್ಯರು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು. ನಜೀರ್ ಅಹ್ಮದ್ ಬೇಷರತ್ ಕ್ಷಮೆಯಾಚಿಸಬೇಕು ಎಂದು ಸೋಮವಾರ ಪಟ್ಟು ಹಿಡಿದರು.

ಮಂಗಳವಾರವೂ ಕೂಡ ಇದೇ ಗದ್ದಲ ಮುಂದುವರೆಯಿತು. ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ನಜೀರ್ ಅಹ್ಮದ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಭಾಪತಿ ಬಸವರಾಜ ಹೊರಟ್ಟಿ ಕೂಡ ನಜೀರ್ ಅಹ್ಮದ್ ಬೇಷರತ್ ಕ್ಷಮೆಯಾಚಿಸಬೇಕು ಎಂದರು.

ಮಹಾತ್ಮ ಗಾಂಧಿ ನಿಜವಾದ 'ವಿಶ್ವ ಗುರು' ಎಂದು ನಂಬುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ವಿಶ್ವ ಗುರು' ಎಂದು ಕರೆಯುವುದನ್ನು ತಾವು ವಿರೋಧಿಸಿರುವುದಾಗಿ ಕಾಂಗ್ರೆಸ್ ಎಂಎಲ್‌ಸಿ ವಿವರಿಸಿದರು. ತಮ್ಮ ಹೇಳಿಕೆಗಳಿಗಾಗಿ ಶಾಸಕಾಂಗದಿಂದ ಅಮಾನತುಗೊಳ್ಳಲು ಸಿದ್ಧವಾಗಿದ್ದು, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದರು.

ಇದರಿಂದಾಗಿ ಗದ್ದಲ ಮತ್ತಷ್ಟು ಹೆಚ್ಚಾದಾಗ, ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಮುಂದೂಡಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸುತ್ತಿದ್ದ ವೇಳೆ ಸೋಮವಾರ, ಕಾಂಗ್ರೆಸ್ ಪರಿಷತ್ ಸದಸ್ಯ ನಜೀರ್ ಅಹ್ಮದ್​ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ್ರೋಹಿ ಎಂದು ಹೇಳಿದರು. ಇದಕ್ಕೆ ಕೆರಳಿದ ಬಿಜೆಪಿ ಸದಸ್ಯರು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ನಜೀರ್ ಅಹ್ಮದ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಮತ್ತು ಕ್ಷಮೆ ಕೇಳಬೇಕು ಎಂದು ವಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದು, ಸದಸ್ಯರ ವಾಗ್ವಾದ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಕೂಡಲೇ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ನಾಳೆಗೆ (ಫೆ.03) ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

ಘೋರ ದುರಂತ: ಮಲಪ್ಪುರಂ ವ್ಯೂಪಾಯಿಂಟ್‌ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವು

NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವ್ಯಕ್ತಿಯೊಬ್ಬನ ಬಂಧನ; FIR ದಾಖಲಿಸಿದ CBI

EV ವಾಹನ ಚಾರ್ಜಿಂಗ್‌ಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಕುಮಾರಸ್ವಾಮಿ ಅನುಮೋದನೆ; ರಾಜ್ಯಕ್ಕೆ ಸಿಕ್ಕಿದ್ದೆಷ್ಟು?

SCROLL FOR NEXT