ಚಾರ್ಮಾಡಿ ಘಾಟ್ ನಲ್ಲಿ ಬೆಂಕಿ 
ರಾಜ್ಯ

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಕಾಳ್ಗಿಚ್ಚು: ಎಕರೆಗಟ್ಟಲೆ ಹುಲ್ಲುಗಾವಲು ಭಸ್ಮ; ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ

ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರಿ ಹಾನಿಯಾಗುವ ಸಾಧ್ಯತೆಯಿದೆ. ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿದೆ.

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿಕಾಣಿಸಿಕೊಂಡಿದೆ. ಇದರಿಂದಾಗಿ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ.

ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಗೆ ಸೇರಿರುವ ಪ್ರದೇಶದೊಳಗೆ ಸಂಭವಿಸಿರುವ ಈ ಅಗ್ನಿ ಅವಘಡದಲ್ಲಿ, ಹತ್ತಾರು ಎಕರೆ ಹುಲ್ಲುಗಾವಲು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಎರಡು ಗಂಟೆಗೂ ಹೆಚ್ಚು ಕಾಲ ಬೆಂಕಿಯ ಜ್ವಾಲೆ ಧಗಧಗಿಸುತ್ತಿತ್ತು.

ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರಿ ಹಾನಿಯಾಗುವ ಸಾಧ್ಯತೆಯಿದೆ. ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿದೆ.

ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.

ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ತೀವ್ರ ಪ್ರಯತ್ನಗಳು ಮುಂದುವರಿದಿವೆ. ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಚಾರ್ಮಾಡಿ ಘಾಟಿಯ ರಸ್ತೆ ಉದ್ದಕ್ಕೂ ಬೆಂಕಿ ರೇಖೆಗಳನ್ನು ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ತಗ್ಗಿದ ಅಪರಾಧ ಪ್ರಮಾಣ: ಗಡಿಗಳ ಮೂಲಕ ಅಕ್ರಮ ಬಾಂಗ್ಲಾದೇಶಿಗಳ ಪ್ರವೇಶ; ಗಡಿ ಕಾಪಾಡುವ ಜವಾಬ್ದಾರಿ ಯಾರದ್ದು?

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

ಅಮೆರಿಕ, ಭಾರತ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ, ಪರಸ್ಪರ ಸುಂಕ ಕಡಿತ: ಟ್ರಂಪ್ ಘೋಷಣೆ

"ಕಾದು ನೋಡಿ....": ಟ್ರಂಪ್ ಪ್ರಧಾನಿ ಮೋದಿ ಜೊತೆ ಮಾತನಾಡಿದ್ದಾರೆ- ಕುತೂಹಲ ಮೂಡಿಸಿದ ಅಮೆರಿಕ ರಾಯಭಾರಿ ಹೇಳಿಕೆ

ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಪ್ರಾಣ ಬಿಟ್ಟಾಗ ಸಂವೇದನೆಯನ್ನೂ ICU ನಲ್ಲಿಟ್ಟಿದ್ರಾ? ಬಿಜೆಪಿಗೆ ಸಿದ್ದರಾಮಯ್ಯ ತರಾಟೆ!

SCROLL FOR NEXT