ಅಪಘಾತದಲ್ಲಿ ಲಾರಿ ಮರಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿರುವುದು  
ರಾಜ್ಯ

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು, 15 ಮಂದಿ ಗಾಯ

ಗಜೇಂದ್ರಗಡದ ನಿವಾಸಿಗಳು ರೋಣ ಕಡೆಗೆ ತೆರಳುತ್ತಿದ್ದಾಗ ಸಂಭವಿಸಿದ ಈ ದುರ್ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಇಂದು ಗುರುವಾರ ಬೆಳಗ್ಗೆ ಕ್ರೂಸರ್ ಮತ್ತು ಕ್ಯಾಂಟರ್ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಜೇಂದ್ರಗಡದ ನಿವಾಸಿಗಳು ರೋಣ ಕಡೆಗೆ ತೆರಳುತ್ತಿದ್ದಾಗ ಸಂಭವಿಸಿದ ಈ ದುರ್ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರನ್ನು ಗಜೇಂದ್ರಗಢ ಪಟ್ಟಣದ ಶಿವಾಜಿಪೇಟೆಯ ನಿವಾಸಿಗಳಾದ ಮರಿಯಂ ಹುನಗುಂದ(55ವ), ಅನ್ನಪೂರ್ಣ ಚಂಗಳಿ(45ವ) ಮತ್ತು ಸುಜಾತ ಹೊಸಮನಿ(30ವ) ಎಂದು ಗುರುತಿಸಲಾಗಿದೆ.

ಅಪಘಾತ ಸ್ಥಳಕ್ಕೆ ಗದಗ ಎಸ್ಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರು ಜನ ಕಾರ್ಮಿಕರಿಗೆ ಕೈ, ಕಾಲು ಮುರಿತವಾಗಿದ್ದು, ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಗಾಯಾಳುಗಳ ಸ್ಥಿತಿ ಕಂಡು ಸಂಬಂಧಿಕರು ಕಣ್ಣೀರು ಹಾಕುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!