ಬಿ ಕೆ ಹರಿಪ್ರಸಾದ್  
ರಾಜ್ಯ

ನಾನು ಗಾಂಧಿ-ಅಂಬೇಡ್ಕರ್-ನೆಹರೂ ಅನುಯಾಯಿ ಆದ್ರೆ, ಸುರೇಶ್​ ಕುಮಾರ್ ಗಾಂಧಿ ಕೊಲೆಗಾರರ ಅನುಯಾಯಿ ಆದ್ರು: ಬಿ.ಕೆ ಹರಿಪ್ರಸಾದ್

ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ಸುರೇಶ್ ಕುಮಾರ್ ಅವರು ನಾನು ಮತ್ತು ಹರಿಪ್ರಸಾದ್ ಒಂದೇ ಕಾಲೇಜಲ್ಲಿ ಕಲಿತವರು, ಈಗ ಅದನ್ನು ನೆನಪಿಸಿಕೊಳ್ಳೋಕೆ ಬೇಸರವಾಗುತ್ತದೆ ಎಂದಿದ್ದರು.

ಬೆಂಗಳೂರು: ಜ್ಯೋತಿಷಿ ಕರುಣಾಕರ್ ಭಟ್ ಬಂಧನ ವಿಚಾರದಲ್ಲಿ ಕಾಂಗ್ರೆಸ್ ನಾಯಕ ವಿಧಾನ ಪರಿಷತ್ ಸದಸ್ಯಬಿ ಕೆ ಹರಿಪ್ರಸಾದ್ ಮತ್ತು ಮಾಜಿ ಸಚಿವ ಹಾಗೂ ಶಾಸಕರಾದ ಬಿಜೆಪಿಯ ಸುರೇಶ್ ಕುಮಾರ್ ನಡುವಿನ ವಾಗ್ದಾಳಿ ನಿಂತಿಲ್ಲ.

ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ಸುರೇಶ್ ಕುಮಾರ್ ಅವರು ನಾನು ಮತ್ತು ಹರಿಪ್ರಸಾದ್ ಒಂದೇ ಕಾಲೇಜಲ್ಲಿ ಕಲಿತವರು, ಈಗ ಅದನ್ನು ನೆನಪಿಸಿಕೊಳ್ಳೋಕೆ ಬೇಸರವಾಗುತ್ತದೆ ಎಂದಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿಕೆ ಹರಿಪ್ರಸಾದ್, ನಾನು ಮತ್ತು ಸುರೇಶ್​ ಕುಮಾರ್ ಒಂದೇ ಕಾಲೇಜಲ್ಲಿ ಕಲಿತವರು ಎಂಬುದನ್ನು ಸುರೇಶ್ ಕುಮಾರ್ ಅವರೇ ನೆನಪಿಸಿದ್ದಾರೆ.

ಎಂಇಎಸ್​ ಮತ್ತು ರೇಣುಕಾಚಾರ್ಯ ಕಾನೂನು ಕಾಲೇಜಲ್ಲಿ ಕಲಿತ ನಾನು ಗಾಂಧಿ-ಅಂಬೇಡ್ಕರ್-ನೆಹರೂ ಅವರ ಅನುಯಾಯಿ ಆದ್ರೆ, ಸುರೇಶ್​ ಕುಮಾರ್ ಅವರು ಗಾಂಧಿ ಕೊಲೆಗಾರರ ಅನುಯಾಯಿ ಆದ್ರು. ಈಗಲಾದರೂ ಬದಲಾಗಿದ್ದಾರಾ ಎಂದರೆ, ಇನ್ನೂ ಕೊಲೆಗಾರರ ಜೊತೆಯೇ ಗುರುತಿಸಿಕೊಳ್ಳಲು ಬಯಸುತ್ತಿದ್ದಾರೆ ಎಂದಿದ್ದಾರೆ.

‘ಜನಪ್ರತಿನಿಧಿಗಳ ಜೊತೆ ನಿತ್ಯ ನೂರಾರು ಜನ ಫೋಟೋ ತೆಗೆಸಿಕೊಳ್ಳುತ್ತಾರೆ. ಅವರೆಲ್ಲರೂ ನೈತಿಕ ಹೊಣೆ ಹೊತ್ತುಕೊಳ್ಳೋದಿಕ್ಕೆ ಆಗುತ್ತಾ?’ ಎಂದು ಮಾಜಿ ಕಾನೂನು ಸಚಿವ ಸುರೇಶ್​ಕುಮಾರ್ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. ಸುರೇಶ್​ಕುಮಾರ್ ಅವರು ಇಂತಹ ನುಣುಚಿಕೊಳ್ಳುವಿಕೆಯ ಜಾಣತನ ತೋರಬಾರದು. ಕೊಲೆಗಾರ ಜೋತಿಷಿ ಕಮಲಾಕರ ಭಟ್ಟನು ಸುರೇಶ್​ ಕುಮಾರ್ ಜೊತೆ ಫೋಟೋ ತೆಗೆಸಿಕೊಂಡಿಲ್ಲ.

ಸುರೇಶ್​ ಕುಮಾರ್ ಅವರೇ ಕಾರಿನಿಂದ ಇಳಿದು ಕಮಲಾಕರ ಭಟ್ ಎಂಬ ಮಹಾನುಭಾವನ ಕಾರಿನ ಬಳಿ ಹೋಗಿ ತನ್ನ ಸಹಾಯಕನ ಮೂಲಕ ಫೋಟೋ ತೆಗೆಸಿಕೊಂಡಿದ್ದಾರೆ. ಸುರೇಶ್​ ಕುಮಾರ್ ಅವರು ಫೋಟೋ ತೆಗೆಸಿಕೊಳ್ಳುವಾಗ ಸ್ವಯಂಘೋಷಿತ ಮಹಾನುಭಾವ ಜೋತಿಷಿ ಸೌಜನ್ಯಕ್ಕಾದರೂ ಕಾರಿನಿಂದ ಇಳಿಯುವುದಿಲ್ಲ.

ಆದರೂ ಯಾವುದೇ ಮುಜುಗರ ಪಡದ ಸುರೇಶ್​ ಕುಮಾರ್ ಅವರು ತಮ್ಮ ಎಲ್ಲಾ ಆತ್ಮಗೌರವವನ್ನು ಬದಿಗಿಟ್ಟು ಕಮಲಾಕರ ಭಟ್​ ಎಂಬ ಜೋತಿಷಿಯೊಂದಿಗೆ ಫೋಟೋ ತೆಗೆದುಕೊಂಡು ಅವರ ಸಾಮಾಜಿಕ ಜಾಲತಾಣದಲ್ಲಿ ಜೋತಿಷಿಯನ್ನೂ, ಆತನ ಕೆಲಸವನ್ನೂ ಹೊಗಳಿ ಫೋಸ್ಟ್​ ಮಾಡಿದ್ದಾರೆ. ಮಾಜಿ ಸಚಿವರಾಗಿರುವ ಸುರೇಶ್​ ಕುಮಾರ್ ಅವರು ನೀಡಿದ ಪ್ರಚಾರವನ್ನೇ ಬಳಸಿಕೊಂಡು ಆ ಜೋತಿಷಿ ಎಷ್ಟು ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗ ಪಡಿಸಿರಬಹುದು? ಎಷ್ಟು ಮನೆಹಾಳು ಮಾಡಿರಬಹುದು ಎಂಬುದು ಚರ್ಚೆಯ ವಿಷಯವಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸುರೇಶ್​ ಕುಮಾರ್ ಅವರ ಕೊಳೆತ ಮನಸ್ಥಿತಿ ಹೇಗಿದೆಯೆಂದರೆ, ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನನ್ನ ಅಂಗಿಯನ್ನು ಹರಿದಾಗ ನಿರಂತರ ಮೂರು ದಿನ ಪುಂಡು ಪೋಕರಿಗಳ ರೀತಿಯಲ್ಲಿ ಸುರೇಶ್​ ಕುಮಾರ್ ಅವರು ನನ್ನನ್ನು ಟ್ರೋಲ್ ಮಾಡಿದ್ದರು.

ನನ್ನ ಹೆಸರಿನ ಮೇಲೆಯೇ ಅವರು ವ್ಯಂಗ್ಯಗಳನ್ನು ಮಾಡಿದ್ದರು. ನನ್ನ ವಿರುದ್ಧ ಮಾನಹಾನಿಕರವಾಗಿ ಬರೆದ ಟ್ರೋಲರ್​​ಗಳ ಎಲ್ಲಾ ಪೋಸ್ಟ್​ ಗಳನ್ನು ಶೇರ್ ಮಾಡಿ ಬೆಂಬಲಿಸಿದ್ದ ಕೊಳೆತ ಮನಸ್ಥಿತಿಯ ಸುರೇಶ್​ ಕುಮಾರ್ ಅವರಿಗೆ ಇದೀಗ ಕೊಲೆಗಾರನ ಸಖ್ಯದ ಬಗ್ಗೆ ಪ್ರಶ್ನೆ ಕೇಳಿದಾಗ ದಿಗ್ಭ್ರಾಂತರಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸುರೇಶ್​ ಕುಮಾರ್ ಇನ್ನಾದರೂ ಸಜ್ಜನ ಶಾಸಕ ಎಂಬ ಸ್ವಯಂ ಭ್ರಮೆಗಳಿಂದ ಹೊರ ಬಂದು ಸಂವಿಧಾನಬದ್ಧ, ವೈಚಾರಿಕವಾದ ಮಾನವೀಯ ಬದುಕು ಸಾಗಿಸಲಿ ಎಂದು ವ್ಯಂಗ್ಯಭರಿತವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯ ಅಂಗೀಕಾರ; ವಿಪಕ್ಷಗಳ ತೀವ್ರ ಗದ್ದಲ, ಮಧ್ಯಾಹ್ನ 3 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ

Thank you, Pakistan: ಭಾರತದ ವಿರುದ್ಧ ಬಾಂಗ್ಲಾದೇಶದ ಹಗೆತನ ಬಟ್ಟ ಬಯಲು!

ಭಾರತೀಯ ವಾಯುಪಡೆಗೆ ಹಸ್ತಾಂತರಿಸಲು 5 ತೇಜಸ್ ಜೆಟ್‌ಗಳು ಸಿದ್ಧ: HAL

ಗಂಡ-ಹೆಂಡತಿ ಜಗಳ: ಒಂದು ಮಾಡಲು ಹೋದ ಹಿಂದೂ ವ್ಯಕ್ತಿ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ!

ನಮ್ಮ ರಾಜಕೀಯ ಶಕ್ತಿಯನ್ನು HDKಗೆ ಧಾರೆ ಎರೆದಿದ್ದೇವೆ: ನಾವು ಬಾಯ್ಬಿಟ್ರೆ ಬ್ಲಾಸ್ಟ್ ಆಗುತ್ತೆ, ಅಭ್ಯರ್ಥಿ ಘೋಷಣೆ ಮಾಡಲು ನಿಖಿಲ್ ಗೆ ಏನು ಅಧಿಕಾರವಿದೆ?

SCROLL FOR NEXT