ಬಂಧಿತರಿಂದ ವಶಕ್ಕೆ ಪಡೆದ ಮೊಬೈಲ್ ಗಳು 
ರಾಜ್ಯ

ಮಂಗಳೂರು: ಬೃಹತ್ ಅಂತಾರಾಷ್ಟ್ರೀಯ ಹೂಡಿಕೆ ವಂಚನೆ ಜಾಲ ಪತ್ತೆ, 11 ಮಂದಿ ಬಂಧನ!

ವಶಪಡಿಸಿಕೊಂಡ ಸಾಧನಗಳ ಡಿಜಿಟಲ್ ಫೋರೆನ್ಸಿಕ್ ಪರೀಕ್ಷೆಯಲ್ಲಿ 624 ಬ್ಯಾಂಕ್ ಖಾತೆಗಳ ವಿವರಗಳನ್ನು ಬಹಿರಂಗಪಡಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.

ಮಂಗಳೂರು: ಹೂಡಿಕೆ ಹೆಸರಿನಲ್ಲಿ ನೇಪಾಳದಿಂದ ಭಾರತೀಯ ನಾಗರಿಕರನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂ. ದೋಚುತ್ತಿದ್ದ ವಂಚಕ ಜಾಲದ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಸೋಶಿಯಲ್ ಮೀಡಿಯಾ ಮೂಲಕ ಆನ್ ಲೈನ್ ನಲ್ಲಿ ಹೂಡಿಕೆ ಹಗರಣ ನಡೆಸುತ್ತಿದ್ದ ಬೃಹತ್ ಜಾಲದಲ್ಲಿ ಭಾರತೀಯರು ಇದ್ದಾರೆ ಇದಲ್ಲದೇ ಐವರು ತಲೆಮರೆಸಿಕೊಂಡಿದ್ದು, ವಿದೇಶಿ ಸಹಚರ ಕುರಿತು ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ ಎಂದರು.

ವಶಪಡಿಸಿಕೊಂಡ ಸಾಧನಗಳ ಡಿಜಿಟಲ್ ಫೋರೆನ್ಸಿಕ್ ಪರೀಕ್ಷೆಯಲ್ಲಿ 624 ಬ್ಯಾಂಕ್ ಖಾತೆಗಳ ವಿವರಗಳನ್ನು ಬಹಿರಂಗಪಡಿಸಿದೆ ಎಂದು ತಿಳಿಸಿದರು.

ಈ ಖಾತೆಗಳಿಗೆ ಸಂಬಂಧಿಸಿದ 4,580 ಕ್ಕೂ ಹೆಚ್ಚು ದೂರುಗಳನ್ನು ರಾಷ್ಟ್ರೀಯ ಸೈಬರ್ ಅಪರಾಧ ವರದಿ ಪೋರ್ಟಲ್‌ನಲ್ಲಿ ದಾಖಲಿಸಲಾಗಿದೆ. ಒಂದು ಖಾತೆಯೊಂದರಲ್ಲೇ 167 ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಒಂದು ದೂರಿಗೆ ಸಂಬಂಧಿಸಿದಂತೆ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮೂಲಕ ಒಬ್ಬ ವ್ಯಕ್ತಿಗೆ ರೂ.1.38 ಕೋಟಿ ವಂಚಿಸಲಾಗಿದೆ. ವಂಚಕರು ಖಾತೆದಾರರನ್ನು ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್ ಮೂಲಕ ನೇಮಕ ಮಾಡಿಕೊಂಡಿದ್ದು, ಕಮಿಷನ್‌ ಮತ್ತು ಉದ್ಯೋಗ ಭರವಸೆ ನೀಡಿ, ಹಣವನ್ನು ಕ್ರಿಪ್ಟೋಕರೆನ್ಸಿಯನ್ನಾಗಿ ವಿದೇಶಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಜಿಟಲ್ ಶೋಷಣೆ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಭಾರತೀಯ ಯುವಕರಿಗೆ ಉದ್ಯೋಗದ ಆಮಿಷವೊಡ್ಡಿ ಸೈಬರ್ ವಂಚನೆ ಕಾರ್ಯಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಬಂಧಿತರಿಂದ ಲ್ಯಾಪ್ ಟಾಪ್, 21 ಮೊಬೈಲ್ ಫೋನ್ ಗಳು, 20 ಸಿಮ್ ಕಾರ್ಡ್ ಗಳು ಹಾಗೂ ಹಲವು ಡೆಬಿಟ್, ಕ್ರೆಡಿಟ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

'ಜೀವ ಬಾಯಿಗೆ ಬಂದಿತ್ತು': ಆಗಸದಲ್ಲೇ ಗಿರಕಿ ಹೊಡೆದ ಡಿಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ, ಕೆಲಕಾಲ ಆತಂಕ! ಆಗಿದ್ದೇನು?

SCROLL FOR NEXT