ಕಾಂಗ್ರೆಸ್ ಶಾಸಕ ಸತೀಶ್ ಸೈಲ್ 
ರಾಜ್ಯ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್​ಗೆ ಜಾಮೀನು

ವೈದ್ಯಕೀಯ ಕಾರಣ ನೀಡಿ ಸತೀಶ್ ಸೈಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೇಳಿದೆ.

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ವೈದ್ಯಕೀಯ ಕಾರಣ ನೀಡಿ ಸತೀಶ್ ಸೈಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ. ಲಿವರ್ ಕಸಿ ಕುರಿತು ಎರಡು ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು‌ ಎಂಬ ನಿರ್ದೇಶನ ನೀಡಿ, ಜಾಮೀನು ಮಂಜೂರು ಮಾಡಿದೆ.

ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ ಬೀರಬಾರದು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತೊಂದರೆ ಉಂಟು ಮಾಡಬಾರದು. ಐದು ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಒಂದು ಭದ್ರತಾ ಖಾತರಿ ಒದಗಿಸಬೇಕು ಎಂದು ಹೈಕೋರ್ಟ್‌ ಷರತ್ತು ವಿಧಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಕದ್ದು, ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸಿಐಅರ್ ದಾಖಲಿಸಿಕೊಂಡಿದ್ದ ಇಡಿ ಸಹ ತನಿಖೆ ಆರಂಭಿಸಿತ್ತು. ಇದೇ ಆಗಸ್ಟ್‌ 13 ಮತ್ತು 14ರಂದು ಸತೀಶ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ರೂ.13 ಕೋಟಿಯಷ್ಟು ನಗದು ಮತ್ತು ಚಿನ್ನಾಭರಣ ವಶಕ್ಕೆ ಪಡೆದಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸೆಪ್ಟೆಂಬರ್ 10 ರಂದು ವಿಚಾರಣೆಗೆ ಹಾಜರಾಗಿದ್ದ ಸತೀಶ್‌ ಸೈಲ್ ಅವರನ್ನು ಇಡಿ ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!

‘CEC ಜ್ಞಾನೇಶ್ ಕುಮಾರ್ ದೇಶದ್ರೋಹಿ’: ಮುಂಬೈನಲ್ಲಿ ಭುಗಿಲೆದ್ದ Cockroach Janata Party ಪ್ರತಿಭಟನೆ, ರಾಜೀನಾಮೆಗೆ ಬಿಗಿಪಟ್ಟು..!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!

Pakನ ಹೊಸ ನಾಟಕ: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಹತ್ಯೆಗೀಡಾದ SSG ಉಗ್ರ ಜೀವಂತವಾಗಿದ್ದಾನೆ ಎಂದ ಪಾಕ್ ಸೇನೆ

ಬೆಳಗಾವಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ ನಿರ್ಮಾಣ- ಸಿಎಂ ಡಿಕೆ ಶಿವಕುಮಾರ್ ಘೋಷಣೆ!