ಕಾರು ಸರ್ವಿಸ್ ಸೆಂಟರ್  
ರಾಜ್ಯ

ವಿಜಯಪುರ: ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ಅವಘಡ, 20ಕ್ಕೂ ಹೆಚ್ಚು ವಾಹನ ಭಸ್ಮ; Video

ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ.

ವಿಜಯಪುರ: ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಸುಮಾರು 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಹನುಮಂತ ಕನಮಡಿ ಅವರಿಗೆ ಸೇರಿದ ಈ ಸರ್ವೀಸ್ ಸೆಂಟರ್‌ನಲ್ಲಿ ರಿಪೇರಿ ಮತ್ತು ಸರ್ವಿಸ್‌ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪನಿಗಳ ಕಾರುಗಳು ಬೆಂಕಿಗಾಹುತಿಯಾಗಿವೆ.

ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಸುಟ್ಟುಹೋದ ಕಾರುಗಳ ಒಟ್ಟು ಮೌಲ್ಯ ಒಂದು ಕೋಟಿ ರೂಪಾಯಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ದುರ್ಘಟನೆಯಲ್ಲಿ ಸರ್ವೀಸ್ ಸೆಂಟರ್‌ನಲ್ಲಿ ಯಾರೂ ಇಲ್ಲದಿರುವ ಕಾರಣ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಸುತ್ತಮುತ್ತ ವ್ಯಾಪಿಸದಂತೆ ಹರಸಾಹಸ ಪಟ್ಟು ನಿಯಂತ್ರಣಕ್ಕೆ ತಂದರು. ಘಟನಾ ಸ್ಥಳಕ್ಕೆ ಗೋಲಗುಂಬಜ್ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆಯಾಗಿದ್ರೂ ಪ್ರೆಸ್ ಮೀಟ್ ನಲ್ಲಿ ಪೊಲೀಸರ 'ಲಲ್ಲೆ': Video ವೈರಲ್, ಜನಾಕ್ರೋಶ!

ಅಕ್ರಮ ಸಂಬಂಧಕ್ಕೆ ಮೂವರು ಬಲಿ: ಪತ್ನಿ ಕೊಂದು ಪತಿ ಆತ್ಮಹತ್ಯೆ; ಮಹಿಳೆಯ ಪ್ರಿಯಕರನೂ ಸಾವಿಗೆ ಶರಣು!

SCROLL FOR NEXT