ಸಾಂದರ್ಭಿಕ ಚಿತ್ರ online desk
ರಾಜ್ಯ

ಬೆಂಗಳೂರು: ಇಟಲಿ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ, ಪ್ರಕರಣ ದಾಖಲು

ಜನವರಿ 29ರಂದು ಬಂದಿದ್ದ ಬೆದರಿಕೆ ಮೇಲ್ ತಡವಾಗಿ ಬೆಳಕಿಗೆ ಬಂದಿದೆ. 5 ಆರ್‌ಡಿಎಕ್ಸ್ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಒಡ್ಡಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಸದ್ದು ಮಾಡುತ್ತಿದೆ. ಹಲಸೂರು ಬಳಿ ಇರುವ ಇಟಲಿ ರಾಯಭಾರಿ ಕಚೇರಿಗೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ.

ಜನವರಿ 29ರಂದು ಬಂದಿದ್ದ ಬೆದರಿಕೆ ಮೇಲ್ ತಡವಾಗಿ ಬೆಳಕಿಗೆ ಬಂದಿದೆ. 5 ಆರ್‌ಡಿಎಕ್ಸ್ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಒಡ್ಡಿದ್ದಾರೆ.

ಜನವರಿ 29ರಂದು ಬೆಳಿಗ್ಗೆ ಸುಮಾರು 5.25 ಗಂಟೆಗೆ, gaina_ramesh@outlook.com ಎಂಬ ಇಮೇಲ್ ವಿಳಾಸದಿಂದ ರಾಯಭಾರಿ ಕಚೇರಿಯ ಅಧಿಕೃತ ಇಮೇಲ್ ಐಡಿಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ. ಇಮೇಲ್‌ನಲ್ಲಿ ರಾಯಭಾರಿ ಕಚೇರಿಯ ಆವರಣದಲ್ಲಿ ಐದು RDX ಬಾಂಬ್‌ಗಳನ್ನು ಅಳವಡಿಸಲಾಗಿದೆ ಎಂದು ಹೇಳಲಾಗಿದ್ದು, ಬೆಳಿಗ್ಗೆ 10 ಗಂಟೆಯೊಳಗೆ ರಾಜತಾಂತ್ರಿಕರನ್ನು ಸ್ಥಳಾಂತರಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಇಮೇಲ್ ಬಂದ ತಕ್ಷಣ ಕಚೇರಿಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಲಸೂರು ಪೊಲೀಸರು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯಗೊಳಿಸುವ ದಳ, ಶ್ವಾನ ದಳದೊಂದಿಗೆ ರಾಯಭಾರಿ ಕಚೇರಿಯ ಆವರಣ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದದ್ದು, ಈ ವೇಳೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ಇಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಎಂಬುವವರು ಹಲಸೂರು ಪೊಲೀಸರಿಗೆ ದೂರು ನೀಡಿದ್ದಾರೆ. ಹಲಸೂರು ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪೊಲೀಸರು ಐಟಿ ಕಾಯ್ದೆ–2000ರ ಸೆಕ್ಷನ್ 66(F) ಅಡಿಯಲ್ಲಿ ಸೈಬರ್ ಭಯೋತ್ಪಾದನೆ ಪ್ರಕರಣ ದಾಖಲಿಸಿಕೊಂಡಿದ್ದು, ಇಮೇಲ್ ಕಳುಹಿಸಿದ ವ್ಯಕ್ತಿ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT