ಬಾಲಕನ ರಕ್ಷಣೆ ಮಾಡಿರುವ ಸ್ಥಳೀಯರು. 
ರಾಜ್ಯ

GBA ನಿರ್ಲಕ್ಷ್ಯಕ್ಕೆ ಚರಂಡಿಗೆ ಬಿದ್ದ ಬಾಲಕ; ಸಾರ್ವನಿಕರ ಆಕ್ರೋಶ; Video

ಶಾಲೆಯ ಎದುರು ಜಿಬಿಎ ಚರಂಡಿ ಕಾಮಗಾರಿ ನಡೆಸುತ್ತಿದ್ದು, ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವ ಚರಂಡಿಗೆ ಬಿದ್ದಿರುವ ಘಟನೆ ಸರ್ವಜ್ಞನಗರದ ಗೋವಿಂದಪುರದಲ್ಲಿ ಶುಕ್ರವಾರ ನಡೆದಿದೆ.

ಶಾಲೆಯ ಎದುರು ಜಿಬಿಎ ಚರಂಡಿ ಕಾಮಗಾರಿ ನಡೆಸುತ್ತಿದ್ದು, ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಚರಂಡಿ ತೆರೆದೇ ಇದ್ದರು, ಬ್ಯಾರಿಕೇಡ್‌ ಆಗಲೀ, ಎಚ್ಚರಿಕೆ ಫಲಕವನ್ನಾಗಲೀ ಹಾಕಿಲ್ಲ. ಇದರಿಂದ ಸಂಚಾರಕ್ಕೆ ಈ ರಸ್ತೆ ಸಂಪೂರ್ಣವಾಗಿ ಅಸುರಕ್ಷಿತವಾಗಿದ್ದು, ಶಾಲೆಗೆ ಹೋಗಲು ವಿದ್ಯಾರ್ಥಿಗಳು ರಸ್ತೆಯ ಅಂಚಿನಲ್ಲಿ ನಡೆದು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಶುಕ್ರವಾರ ಇದೇ ರಸ್ತೆಯಲ್ಲಿ ನಡೆದು ಶಾಲೆಗೆ ಹೋಗುತ್ತಿದ್ದ ಬಾಲಕ ಚರಂಡಿಗೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಘಟನೆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರಿಂದ ಆಕ್ರೋಶಗಳು ವ್ಯಕ್ತವಾಗುತ್ತಿವ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ