ತುಮಕೂರು ಅಪಘಾತ 
ರಾಜ್ಯ

ತುಮಕೂರಿನಲ್ಲಿ ಸರಣಿ ಅಪಘಾತ: ಇಬ್ಬರ ದುರ್ಮರಣ, Dysp ಸೇರಿ 9 ಮಂದಿಗೆ ಗಾಯ

ಘಟನೆಯಲ್ಲಿ ಡಿವೈಎಸ್ಪಿ ರಾಮಕೃಷ್ಣಪ್ಪ ಸೇರಿ 9 ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು: ತುಮಕೂರು–ಕುಣಿಗಲ್ ರಾಜ್ಯ ಹೆದ್ದಾರಿಯ ಬಾಣಾವರ ಗೇಟ್ ಸಮೀಪದ ನಾಗವಳ್ಳಿ ಗ್ರಾಮ ಬಳಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಡಿವೈಎಸ್ಪಿ ಸೇರಿ ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಯಾದವನಗರದ ರಿಯಲ್ ಎಸ್ಟೇಟ್ ಉದ್ಯಮಿ ಸುರೇಶ್ (55) ಹಾಗೂ ಅಶೋಕನಗರದ ಗುತ್ತಿಗೆದಾರ ಮುರಳಿ (60) ಎಂದು ಗುರ್ತಿಸಲಾಗಿದೆ.

ಘಟನೆಯಲ್ಲಿ ಡಿವೈಎಸ್ಪಿ ರಾಮಕೃಷ್ಣಪ್ಪ ಸೇರಿ 9 ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗಮಂಗಲ ತಾಲೂಕು ಆದಿಚುಂಚನಗಿರಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಚಿತ್ತದುರ್ಗದಿಂದ ಮೈಸೂರು ಕಡೆ ತೆರಳುತ್ತಿದ್ದ ಕಾರೊಂದು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ, ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಹೆಬ್ಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!