ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ತಾಯಿಯ ಖಾಸಗಿ ಫೋಟೋ ತೆಗೆದು ಲವರ್ ಗೆ ಕಳುಹಿಸಿದ ಮಗಳು! ದೂರು ದಾಖಲು

ಮಗಳ ಫೋನ್ ನನ್ನು ತಾಯಿ ಪರಿಶೀಲಿಸಿದಾಗ ಮತ್ತೋರ್ವ ಮಹಿಳೆ ಜೊತೆಗೆ ತನ್ನ ಖಾಸಗಿ ಫೋಟೋಗಳಿರುವುದು ಗೊತ್ತಾಗಿದೆ.

ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23 ವರ್ಷದ ಮಗಳ ವಿರುದ್ಧವೇ ಪೊಲೀಸರು ದೂರು ದಾಖಲಿಸಿದ್ದಾರೆ. ತನ್ನ ಒಪ್ಪಿಗೆಯಿಲ್ಲದೆ ಖಾಸಗಿ ಫೋಟೋಗಳನ್ನು ಶೇರ್ ಮಾಡಲಾಗಿದೆ ಎಂದು ತಾಯಿ ಆರೋಪಿಸಿದ್ದಾರೆ.

ವಿದ್ಯಾಭ್ಯಾಸಕ್ಕೆ ಅಗತ್ಯವಾಗಿದೆ ಎಂದು ಹೇಳಿ ಮಗಳು ಈ ಹಿಂದೆ ಪೋಷಕರಿಂದ ಮೊಬೈಲ್ ಪಡೆದಿದ್ದಳು ಎನ್ನಲಾಗಿದೆ. ಸುಮಾರು ಒಂದು ತಿಂಗಳಿನಿಂದ ಆಕೆ ಅಪರಿಚಿತ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದನ್ನು ಕುಟುಂಬ ಪತ್ತೆ ಮಾಡಿದೆ.

ಮಗಳ ಫೋನ್ ನನ್ನು ತಾಯಿ ಪರಿಶೀಲಿಸಿದಾಗ ಮತ್ತೋರ್ವ ಮಹಿಳೆ ಜೊತೆಗೆ ತನ್ನ ಖಾಸಗಿ ಫೋಟೋಗಳಿರುವುದು ಗೊತ್ತಾಗಿದೆ. ತನ್ನ ಒಪ್ಪಿಗೆ ಇಲ್ಲದೆ ಈ ಪೋಟೋಗಳನ್ನು ತೆಗೆದಿರುವುದಲ್ಲದೇ ಅದನ್ನು ತನ್ನ ಪ್ರಿಯಕರೊಂದಿಗೆ ಹಂಚಿಕೊಂಡಿದ್ದಾಳೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಕೆಲವು ವಾರಗಳ ಹಿಂದೆ ಅದೇ ವ್ಯಕ್ತಿಯನ್ನು ಮದುವೆಯಾಗಿರುವುದಾಗಿ ಮಗಳು ಹೇಳಿದ್ದಳು ಎನ್ನಲಾಗಿದೆ. ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಗಳು ಮತ್ತು ಆಕೆಯ ಪತಿ ಇಬ್ಬರ ಫೋನ್ ಗಳನ್ನು ವಶಕ್ಕೆ ಪಡೆದು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ.

ಎಲ್ಲ ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದು, ಫೊರೆನ್ಸಿಕ್ ವರದಿ ಬಂದ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

SCROLL FOR NEXT