ಪೊಲೀಸ್ (ಸಾಂಕೇತಿಕ ಚಿತ್ರ) online desk
ರಾಜ್ಯ

ಮಂಡ್ಯ: ಮದುವೆ ಮನೆಯಲ್ಲೀಗ ಶೋಕ; ನೆರೆಮನೆಯವರ ಕಿರುಕುಳಕ್ಕೆ ಬೇಸತ್ತು ತಾಯಿ, ಮಗಳು ಆತ್ಮಹತ್ಯೆ!

ಸಂತ್ರಸ್ತರನ್ನು 46 ವರ್ಷದ ಶಕುಂತಲಾ ದೇವಿ ಮತ್ತು ಅವರ 19 ವರ್ಷದ ಮಗಳು ಪ್ರಿಯಾಂಕಾ ಎಂದು ಗುರುತಿಸಲಾಗಿದೆ.

ಮಂಡ್ಯ: ನೆರೆಮನೆಯವರ ಕಿರುಕುಳಕ್ಕೆ ಬೇಸತ್ತು ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ದಳವಾಯಿ ಕೋಡಿಹಳ್ಳಿ ಎಂಬ ಗ್ರಾಮದಲ್ಲಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಸಂತ್ರಸ್ತರನ್ನು 46 ವರ್ಷದ ಶಕುಂತಲಾ ದೇವಿ ಮತ್ತು ಅವರ 19 ವರ್ಷದ ಮಗಳು ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಪ್ರಿಯಾಂಕಾ ಅವರ ಮದುವೆ ನಿಶ್ಚಯವಾಗಿತ್ತು. ಅದಕ್ಕಾಗಿ ಕುಟುಂಬ ಸಿದ್ಧತೆಯಲ್ಲಿ ತೊಡಗಿತ್ತು ಎನ್ನಲಾಗಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ತಾಯಿ ಮತ್ತು ಮಗಳು ನೆರೆಹೊರೆಯವರಿಂದ ಬೆದರಿಕೆ ಮತ್ತು ಕಿರುಕುಳವನ್ನು ಎದುರಿಸಿದ್ದಾರೆ. ಮದುವೆ ಸಿದ್ಧತೆ ಮುಂದುವರೆದಂತೆ ಭಯ ಮತ್ತು ಸಂಕಟದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ದುರಂತ ಸಾವಿನ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!