ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ 
ರಾಜ್ಯ

ಕಲಬುರಗಿ: ಧುರಂಧರ್ ಸ್ಟೈಲ್‌ನಲ್ಲಿ ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ; ವಿಡಿಯೋ ವೈರಲ್

ಮತೀನ್ ಪಟೇಲ್ ಅವರು ಮದುವೆ ಕಾರ್ಯಕ್ರಮದಲ್ಲಿ ಪಿಸ್ತೂಲ್ ಪ್ರದರ್ಶಿಸುತ್ತಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕವಾಗಿ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುವುದು ಅಪರಾಧ ಎಂದಿದ್ದಾರೆ.

ಕಲಬುರಗಿ: ಕಲಬುರಗಿ ಜಿಲ್ಲೆಯ ಆಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಆಪ್ತ, ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ಅವರು ಮದುವೆ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ಬ್ಲಾಕ್‌ಬಸ್ಟರ್ ಸಿನಿಮಾ 'ಧುರಂಧರ್' ಹಾಡಿಗೆ ಕೈಯಲ್ಲಿ ಗನ್ ಹಿಡಿದು ಡ್ಯಾನ್ಸ್ ಮಾಡಿದ್ದು, ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮತೀನ್ ಪಟೇಲ್ ಅವರು ಮದುವೆ ಕಾರ್ಯಕ್ರಮದಲ್ಲಿ ಪಿಸ್ತೂಲ್ ಪ್ರದರ್ಶಿಸುತ್ತಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕವಾಗಿ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುವುದು ಅಪರಾಧ ಎಂದಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಎಸ್ ಡಿ ಅವರು, "ಒಬ್ಬ ವ್ಯಕ್ತಿ ಗನ್ ಪ್ರದರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿರುವ ವ್ಯಕ್ತಿ ನಮಗೆ ಗೊತ್ತು. ವಿಡಿಯೋವನ್ನು ಎಲ್ಲಿ ಮಾಡಲಾಗಿದೆ ಮತ್ತು ಅದು ಯಾವ ಪೊಲೀಸ್ ಠಾಣೆಯ ಅಡಿಯಲ್ಲಿ ಬರುತ್ತದೆ ಎಂಬುದನ್ನು ಪತ್ತೆ ಮಾಡಲು ನಾನು ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ಹೇಳಿದ್ದಾರೆ.

ಯಾವ ಗನ್ ಪ್ರದರ್ಶಿಸಲಾಗಿದೆ ಮತ್ತು ಅದು ಅಸಲಿಯೇ ಅಥವಾ ನಕಲಿಯೇ ಎಂಬ ಬಗ್ಗೆ ಹಾಗೂ ಅದಕ್ಕೆ ಪರವಾನಿಗೆ ಇದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

"ಒಂದು ವೇಳೆ ಅದು ಪರವಾನಗಿ ಪಡೆದ ಗನ್ ಆಗಿದ್ದರೆ, ಷರತ್ತುಗಳನ್ನು ಉಲ್ಲಂಘಿಸಲಾಗಿದೆಯೇ ಎಂದು ನಾವು ಪರಿಶೀಲಿಸುತ್ತೇವೆ" ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದು ಕಾನೂನುಬಾಹಿರವೆಂದು ಕಂಡುಬಂದರೆ, ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶರಣಪ್ಪ ತಿಳಿಸಿದ್ದಾರೆ.

ವಿಡಿಯೋದಲ್ಲಿ, ಮತೀನ್ ತನ್ನ ಕಪ್ಪು SUV ಯಲ್ಲಿ ಎಂಟ್ರಿ ನೀಡುತ್ತಾನೆ ಮತ್ತು ಕಾರ್‌ನಿಂದ ಇಳಿಯುವಾಗ ಅವರ ಸಿಬ್ಬಂದಿಗಳು ಗನ್ ಹಿಡಿದು ಸ್ವಾಗತಿಸುವ ವಿಡಿಯೋ ಕೂಡಾ ರೆಕಾರ್ಡ್ ಆಗಿದೆ.

ಮದುವೆ ಕಾರ್ಯಕ್ರಮದಲ್ಲಿ ಸಂಗೀತದ ನಡುವೆಯೇ ಗನ್ ಹಿಡಿದು ವೇದಿಕೆಯ ಮೇಲೆ ಕುಣಿದಿರುವುದು ಹಾಗೂ ಕೆಲವರು ಅವರೊಂದಿಗೆ ಫೋಟೋ ಮತ್ತು ವೀಡಿಯೊಗಳನ್ನು ತೆಗೆದುಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿಯನ್ನೇ ಪದಚ್ಯುತಿಗೊಳಿಸುವ ಸಮಯ ಬಂದಿದೆ: ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಕಿಡಿ

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಜಾಮೀನು‌ ಅರ್ಜಿ ವಜಾ, ಬಂಧನ ಭೀತಿ

ಖಯಾಮತ್ ಬರುವುದಿಲ್ಲ, ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ: ಯುಪಿ ಸಿಎಂ ಯೋಗಿ

ಕಳ್ಳತನಕ್ಕೆ ಬಂದು ಮನೆಯಲ್ಲಿ ಕಂಬಳಿ ಹೊದ್ದು ಮಲಗಿದ ಖತರ್ನಾಕ್ ಕಳ್ಳ!

ಬಾಂಗ್ಲಾದೇಶ ಚುನಾವಣೆಗೆ 3 ದಿನ ಬಾಕಿ: ಹಿಂದೂ ಉದ್ಯಮಿ ಭೀಕರ ಹತ್ಯೆ!

SCROLL FOR NEXT