ಕಳ್ಳತನಕ್ಕೆ ಬಂದು ಮನೆಯಲ್ಲಿಯೇ ಮಲಗಿದ ಖತರ್ನಾಕ್ ಕಳ್ಳ 
ರಾಜ್ಯ

ಕಳ್ಳತನಕ್ಕೆ ಬಂದು ಮನೆಯಲ್ಲಿ ಕಂಬಳಿ ಹೊದ್ದು ಮಲಗಿದ ಖತರ್ನಾಕ್ ಕಳ್ಳ!

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಹಳೇ RTO ಕಚೇರಿ ಬಳಿಯ ಪ್ರೇಮನಾಥ ಎಂಬುವರ ಮನೆಯಲ್ಲಿ ಕಳ್ಳತನ ನಡೆಸಲೆಂದು ಇಬ್ಬರು ಖದೀಮರು ತೆರಳಿದ್ದರು.

ಚಿಕ್ಕಬಳ್ಳಾಪುರ: ಕಳ್ಳತನಕ್ಕೆ ಹೋಗಿದ್ದ ಕಳ್ಳನೋರ್ವ ಮದ್ಯದ ಮತ್ತಿನಲ್ಲಿ ಮನೆಯಲ್ಲೇ ಕಂಬಳಿ ಹೊದ್ದು ಮಲಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ವರದಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಹಳೇ RTO ಕಚೇರಿ ಬಳಿಯ ಪ್ರೇಮನಾಥ ಎಂಬುವರ ಮನೆಯಲ್ಲಿ ಕಳ್ಳತನ ನಡೆಸಲೆಂದು ಇಬ್ಬರು ಖದೀಮರು ತೆರಳಿದ್ದರು. ಮನೆಯ ಮೇಲಿನ ರೇಕ್ ಕತ್ತರಿಸಿ ಒಳಗೆ ನುಗ್ಗಿದ್ದರು. ಬಳಿಕ ಮನೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು, ನಗದು ದೋಚಿದ್ದಾರೆ.

ಈ ವೇಳೆ ಓರ್ವ ಕಳ್ಳ ಪರಾರಿಯಾಗಿದ್ದು, ಆದರೆ ಮತ್ತೊಬ್ಬ ಕಳ್ಳ ಮನೆಯಲ್ಲಿ ನಿದ್ದೆಗೆ ಜಾರಿದ್ದಾನೆ. ಇತ್ತ ಮನೆಗೆ ಕಳ್ಳರು ನುಗ್ಗಿರುವ ಅನುಮಾನದಿಂದ ಮಾಲೀಕ ಪ್ರೇಮನಾಥನಿಗೆ ಕರೆ ಮಾಡಿ ನೆರೆ ಮನೆಯವರು ವಿಷಯ ತಿಳಿಸಿದ್ದಾರೆ. ಕೆಲಸದ ನಿಮಿತ್ತ ಹೈದರಾಬಾದ್ ಗೆ ತೆರಳಿದ್ದ ಅವರು, ರಾತ್ರೋ ರಾತ್ರಿ ಮನೆಗೆ ಹಿಂದಿರುಗಿದ್ದಾರೆ.

ಮನೆಗೆ ಪ್ರೇಮನಾಥ ವಾಪಸ್ ಆಗಿ ಬಾಗಿಲು ತೆಗೆದು ಒಳ ಪ್ರವೇಶಿಸುತ್ತಲೇ ಅಚ್ಚರಿ ಎದುರಾಗಿದೆ. ಕಳ್ಳತನಕ್ಕೆಂದು ಬಂದಾತ ಮನೆಯಲ್ಲೇ ಮಲಗಿದ್ದನ್ನು ನೋಡಿದ ಅವರು, ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ವ್ಯಕ್ತಿ ಗೌರಿಬಿದನೂರಿನ ನದಿದಡ ವಾರ್ಡ್​ನ ದೇವರಾಜು ಎಂಬುದು ಗೊತ್ತಾಗಿದ್ದು, ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!