ರಾಜ್ಯ

ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!

ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ, ಮುಸ್ಲಿಂ ಯುವಕ ಸೈಯದ್ ಇಮ್ತಿಯಾಜ್ ಹಿಂದೂ ಯುತಿಯನ್ನು ಪ್ರೀತಿಸಿ ಮದುವೆ ನಾಟಕವಾಡಿ ಇಸ್ಲಾಂಗೆ ಮತಾಂತರ ಮಾಡಿ ಮಗುವನ್ನೂ ಕೈಗೆ ಕೊಟ್ಟು ಈಗ ಎಸ್ಕೇಪ್ ಆಗಿದ್ದಾನೆ.

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ, ಮುಸ್ಲಿಂ ಯುವಕ ಸೈಯದ್ ಇಮ್ತಿಯಾಜ್ ಹಿಂದೂ ಯುತಿಯನ್ನು ಪ್ರೀತಿಸಿ ಮದುವೆ ನಾಟಕವಾಡಿ ಇಸ್ಲಾಂಗೆ ಮತಾಂತರ ಮಾಡಿ ಮಗುವನ್ನೂ ಕೈಗೆ ಕೊಟ್ಟು ಈಗ ಎಸ್ಕೇಪ್ ಆಗಿದ್ದಾನೆ.

ಕೋಲ್ಕತ್ತಾ ಮೂಲದ ಬ್ರಾಹ್ಮಣ ಯುವತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿಕೊಂಡಿದ್ದ ಸೈಯದ್ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದನು. ನಂತರ ಯುವತಿಯನ್ನು ಇಸ್ಲಾಂಗೆ ಮತಾಂತರ ಮಾಡಿ, ಜೈನಬ್ ಎಂದು ಹೆಸರನ್ನು ಬದಲಿಸಿದ್ದನು. 2025ರ ಜು.18ರಂದು ಇಬ್ಬರೂ ರಿಜಿಸ್ಟರ್ ಮದುವೆಯಾಗಿದ್ದರು.

ಇದಾದ ಬಳಿಕ ಇಬ್ಬರು ಕೋಲ್ಕತ್ತಾಗೆ ತೆರಳಿ ನೆಲೆಸಿದ್ದರು. ಅಲ್ಲಿ ಜೈನೆಬ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು. ಮಗುವಾಗುತ್ತಿದ್ದಂತೆ ಪತ್ನಿ ಹಾಗೂ ಮಗುವನ್ನು ಬಿಟ್ಟು ಸೈಯದ್ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಮೋಸ ಹೋಗಿರುವ ಯುವತಿ ಮಗುವಿನೊಂದಿಗೆ ಬೆಂಗಳೂರಿಗೆ ಬಂದು ಪತಿಯನ್ನು ಹುಡುಕಿಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದು, ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನನ್ನ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ: ಪ್ರಕಾಶಕರ ಬೆಂಬಲಕ್ಕೆ ನಿಂತ ಮಾಜಿ ಸೇನಾ ಮುಖ್ಯಸ್ಥ ನರವಾಣೆ

ರಾಹುಲ್ ಗಾಂಧಿಯನ್ನೇ ಪದಚ್ಯುತಿಗೊಳಿಸುವ ಸಮಯ ಬಂದಿದೆ: ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಕಿಡಿ

ಟಿ20 ವಿಶ್ವಕಪ್ 2026: ಕೇವಲ 10 ಎಸೆತಗಳಲ್ಲಿ 5 ವಿಕೆಟ್ ಪತನ, USAಗೆ 191 ರನ್ ಗುರಿ ನೀಡಿದ ಪಾಕಿಸ್ತಾನ!

ಟಿ20 ವಿಶ್ವಕಪ್ 2026: ಇಂಡೋ-ಪಾಕ್ ಪಂದ್ಯದಲ್ಲಿ ಜಯ್ ಶಾ, ಮೊಹ್ಸಿನ್ ನಖ್ವಿ ಮುಖಾಮುಖಿ? ಮಾಹಿತಿ ಇಲ್ಲ ಎಂದ ಶ್ರೀಲಂಕಾ

ಜಾಗತಿಕ ಭ್ರಷ್ಟಾಚಾರ ಸೂಚ್ಯಂಕ: ಭಾರತಕ್ಕೆ ಎಷ್ಟನೇ ಸ್ಥಾನ? ಅತ್ಯಂತ ಭ್ರಷ್ಟ ದೇಶ ಯಾವುದು?

SCROLL FOR NEXT