ರಾಜ್ಯ

News Wrap 10-02-26 | ಶಾಸಕರೇ.. ಬಾಯಿ ಮುಚ್ಚಿಕೊಂಡಿರಿ: ಡಿಕೆಶಿ; DCM ಇಲ್ಲದಿದ್ದರೂ ಬಜೆಟ್ ಸಿದ್ದತಾ ಸಭೆ ನಡೆಸುತ್ತೇವೆ: ಸಿಎಂ; ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ವಜಾ!

ಶಾಸಕರೇ ಬಾಯಿ ಮುಚ್ಚಿಕೊಂಡಿರೀ: ಡಿಕೆಶಿ

ಅಸ್ಸಾಂ ವಿಧಾನಸಭಾ ಚುನಾವಣೆ ತಯಾರಿ ಸಂಬಂಧ AICC ಸಭೆಯಲ್ಲಿ ಭಾಗವಹಿಸಲು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ಬಜೆಟ್ ಕುರಿತು ಸಭೆ ನಡೆಸಲಾಗುವುದು ಎಂದರು. ಬಜೆಟ್ ಸಿದ್ದತಾ ಸಭೆಗೆ ಗೈರಾಗಿ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟತೆ ನೀಡಿದ್ದಾರೆ. ಇನ್ನು ದೆಹಲಿಗೆ ತೆರಳುವ ಮುನ್ನ ಮಾತನಾಡಿದ್ದ ಡಿಕೆ ಶಿವಕುಮಾರ್ ಅವರು, ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಹೈಕಮಾಂಡ್ ಆದೇಶಗಳನ್ನು ನಾವು ಪಾಲನೆ ಮಾಡಬೇಕು. ನನ್ನ ಪರ, ವಿರುದ್ಧ ಹೇಳಿಕೆಗಳನ್ನು ಶಾಸಕರು, ಮಂತ್ರಿಗಳು, ಯಾರೇ ನೀಡುತ್ತಿರಬಹುದು. ಈ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆಗಳೇ ಹೊರತು ಪಕ್ಷಕ್ಕೆ ಒಳ್ಳೆಯದನ್ನು ಮಾಡುವ ಹೇಳಿಕೆಗಳಲ್ಲ ಎಂದು ಹೇಳಿದರು.

ಬಿಕ್ಲು ಶಿವ ಕೊಲೆ ಪ್ರಕರಣ: BJP ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರು, ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಈ ಹಿಂದೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಜಾಮೀನು ನೀಡಲು ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿತ್ತು. ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್ಗೆ ಬಂಧನದ ಭೀತಿ ಎದುರಾಗಿದೆ. ಸದ್ಯ, ಬಸವರಾಜ್ ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ 'ಲುಕ್‌ಔಟ್‌' ನೋಟಿಸ್‌ ಜಾರಿಯಲ್ಲಿದೆ. ರಾಜ್ಯದ ಸಿಐಡಿ ಪೊಲೀಸರು ಹೊರ ರಾಜ್ಯಗಳ ಪೊಲೀಸರ ಜತೆಗೂ ಸಂಪರ್ಕ ಸಾಧಿಸಿದ್ದು, ಅವರ ಬಂಧನಕ್ಕಾಗಿ ತಂಡಗಳನ್ನು ರಚಿಸಿದ್ದಾರೆ. ಯಾವುದೇ ಕ್ಷಣದಲ್ಲೂ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ.

ಸಚಿವ ಭೈರತಿ ಸುರೇಶ್ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ, 1.50 ಲಕ್ಷ ರೂ, ಕಳವು

ಸಚಿವ ಭೈರತಿ ಸುರೇಶ್ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ, 1.50 ಲಕ್ಷ ರೂ, ಕಳವು

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ನವೀನ್ ಎಂಬಾತ ಕೈಚೀಲವನ್ನು ಕಚೇರಿಯಲ್ಲೇ ಮರೆತುಬಿಟ್ಟು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರ ಕೈಚೀಲವನ್ನು ತೆಗೆದುಕೊಂಡು ಹೋಗಿರುವುದು ಪತ್ತೆಯಾಗಿತ್ತು.

ಕೆನಡಾದಲ್ಲಿ ಹತ್ಯೆಗೀಡಾದ ಚಂದನ್ ಕುಮಾರ್ ಮೃತದೇಹ ಭಾರತಕ್ಕೆ ತರಲು ಪ್ರಯತ್ನ: ಪರಮೇಶ್ವರ್

ಕೆನಡಾದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಲಿಯಾದ ನೆಲಮಂಗಲ ಮೂಲದ ಚಂದನ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಆದಷ್ಟು ಬೇಗ ಭಾರತಕ್ಕೆ ತರಲು ರಾಜ್ಯ ಪೊಲೀಸ್ ಇಲಾಖೆಯ ಮೂಲಕ ವಿದೇಶಾಂಗ ಸಚಿವಾಲಯದ ಸಹಕಾರ ಕೋರಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ನೆಲಮಂಗದಲ್ಲಿರುವ ಚಂದನ್ ಕುಮಾರ್ ಅವರ ಮನೆಗೆ ಭೇಟಿ ನೀಡಿದ ಪರಮೇಶ್ವರ್ ಅವರು, ಪೋಷಕರಿಗೆ ಸಾಂತ್ವನ ಹೇಳಿದರು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾಗ ಚಂದನ್ ಕುಮಾರ್ ಹತ್ಯೆಯಾಗಿರುವುದು ನೋವಿನ ವಿಚಾರ. ಇದು ಅತ್ಯಂತ ದುರ್ಘಟನೆ. ಈ ಬಗ್ಗೆ ರಾಜ್ಯ ಸರ್ಕಾರ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು, ಮೃತದೇಹವನ್ನು ವಾಪಸ್ ತರಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ. ಆರೋಪಿಗಳ ವಿರುದ್ಧ ಕೆನಡಾ ಸರ್ಕಾರ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸೇನೆಯ ಗ್ರೂಪ್ ಸಿ ನೇಮಕಾತಿಯಲ್ಲಿ ಅಕ್ರಮ: 18 ಪರೀಕ್ಷಾರ್ಥಿಗಳ ಬಂಧನ

ಭಾರತೀಯ ಸೇನೆಯ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ ಮತ್ತು ಅಕ್ರಮದಲ್ಲಿ ತೊಡಗಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಫೆಬ್ರವರಿ 8ರಂದು ನಡೆದ ಸಿವಿಲ್ ಡಿಫೆನ್ಸ್ ಎಂಪ್ಲಾಯಿ ರೆಕ್ರೂಟ್‌ಮೆಂಟ್‌ನ ಗ್ರೂಪ್ ಸಿ ವಿಭಾಗದ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ನೇರ ನೇಮಕಾತಿ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ನಕಲು ಮಾಡಿದ ಆರೋಪದ ಮೇಲೆ ಪರೀಕ್ಷಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. 515 ಸೇನಾ ನೆಲೆ ಕಾರ್ಯಾಗಾರದ ಕಮಾಂಡೆಂಟ್ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ಕರ್ನಲ್ ಹಾಗೂ ಭದ್ರತಾ ಅಧಿಕಾರಿ ಎಸ್ ಎಸ್ ಜ್ಯೋತಿರ್ಲಿಂಗಂ ಅವರು ನೀಡಿದ ಎಫ್‌ಐಆರ್ ಆಧರಿಸಿ ಪರೀಕ್ಷಾರ್ಥಿಗಳನ್ನು ಬಂಧಿಸಲಾಗಿದ್ದು ತೀವ್ರ ವಿಚಾರಣೆ ನಡೆಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನನ್ನ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ: ಪ್ರಕಾಶಕರ ಬೆಂಬಲಕ್ಕೆ ನಿಂತ ಮಾಜಿ ಸೇನಾ ಮುಖ್ಯಸ್ಥ ನರವಾಣೆ

ರಾಹುಲ್ ಗಾಂಧಿಯನ್ನೇ ಪದಚ್ಯುತಿಗೊಳಿಸುವ ಸಮಯ ಬಂದಿದೆ: ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಕಿಡಿ

ಟಿ20 ವಿಶ್ವಕಪ್ 2026: ಕೇವಲ 10 ಎಸೆತಗಳಲ್ಲಿ 5 ವಿಕೆಟ್ ಪತನ, USAಗೆ 191 ರನ್ ಗುರಿ ನೀಡಿದ ಪಾಕಿಸ್ತಾನ!

ಟಿ20 ವಿಶ್ವಕಪ್ 2026: ಇಂಡೋ-ಪಾಕ್ ಪಂದ್ಯದಲ್ಲಿ ಜಯ್ ಶಾ, ಮೊಹ್ಸಿನ್ ನಖ್ವಿ ಮುಖಾಮುಖಿ? ಮಾಹಿತಿ ಇಲ್ಲ ಎಂದ ಶ್ರೀಲಂಕಾ

ಜಾಗತಿಕ ಭ್ರಷ್ಟಾಚಾರ ಸೂಚ್ಯಂಕ: ಭಾರತಕ್ಕೆ ಎಷ್ಟನೇ ಸ್ಥಾನ? ಅತ್ಯಂತ ಭ್ರಷ್ಟ ದೇಶ ಯಾವುದು?

SCROLL FOR NEXT