ಭೈರತಿ ಬಸವರಾಜ್  
ರಾಜ್ಯ

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಜಾಮೀನು‌ ಅರ್ಜಿ ವಜಾ, ಬಂಧನ ಭೀತಿ

ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ, ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಮಂಗಳವಾರ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ, ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಈ ಹಿಂದೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಜಾಮೀನು ನೀಡಲು ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿತ್ತು. ಬಳಿಕ ಅವರು ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ, ಹೈಕೋರ್ಟ್‌ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಯಾವುದೇ ಸಂದರ್ಭದಲ್ಲೂ ಬಂಧಿಸಬಹುದು.

ಭೈರತಿ ಬಸವರಾಜ್ ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್‌ಔಟ್‌’ ನೋಟಿಸ್‌ ಸಹ ಜಾರಿ ಮಾಡಲಾಗಿದೆ.

ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ, LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ

ಹೊಸ ವಿತ್ತೀಯ ವರ್ಷದಲ್ಲಿ ಆಗಿರುವ ಬದಲಾವಣೆಗಳೇನು ಗೊತ್ತಾ? (ಹಣಕ್ಲಾಸು)

'13 ರೂ. ಮೌಲ್ಯದ ಚೀಲಗಳನ್ನು 52 ರೂ.ಗೆ ಖರೀದಿ’: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್, ತನಿಖೆಗೆ ಅನುಮತಿ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ, ಲಕ್ಷಾಂತರ ಭಕ್ತರು ಸಾಕ್ಷಿ

SCROLL FOR NEXT