ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಕುಮಾರಸ್ವಾಮಿ 
ರಾಜ್ಯ

HDK, ಕೋಲಾರ ಸಂಸದರಿಂದ ಆಂಧ್ರಪ್ರದೇಶ CM ಭೇಟಿ: ಕೃಷ್ಣಾ ನದಿ ನೀರು ಹಂಚಿಕೆ ಕುರಿತು ಮಾತುಕತೆ

ಈ ಮೂರು ಜಿಲ್ಲೆಗಳಲ್ಲಿ ತೀವ್ರ ಕುಡಿಯುವ ನೀರಿನ ಕೊರತೆ ಎದುರಾಗಿದ್ದು, ಕೃಷ್ಣಾ ನದಿ ನೀರನ್ನು ಹಂಚಿಕೆ ಮಾಡಿದರೆ, ಜನರಿಗೆ ನೆರವಾಗುತ್ತದೆ.

ಕೋಲಾರ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಕೋಲಾರ ಲೋಕಸಭಾ ಸದಸ್ಯ ಮಲ್ಲೇಶ್ ಬಾಬು ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಮಂಗಳವಾರ ಭೇಟಿಯಾಗಿದ್ದು, ಕೃಷ್ಣಾ ನದಿ ನೀರು ಹಂಚಿಕೆ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಂಸತ್ ಭವನದ ಕಚೇರಿಯಲ್ಲಿ ಚಂದ್ರಬಾಬು ನಾಯ್ಡು ಅವರೊಂದಿಗೆ ಕುಮಾರಸ್ವಾಮಿ ಹಾಗೂ ಮಲ್ಲೇಶ್ ಬಾಬು ಅವರು ಮಾತುಕತೆ ನಡೆಸಿ. ಕೃಷ್ಣಾ ನದಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಗಳಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದರು.

ಈ ಮೂರು ಜಿಲ್ಲೆಗಳಲ್ಲಿ ತೀವ್ರ ಕುಡಿಯುವ ನೀರಿನ ಕೊರತೆ ಎದುರಾಗಿದ್ದು, ಕೃಷ್ಣಾ ನದಿ ನೀರನ್ನು ಹಂಚಿಕೆ ಮಾಡಿದರೆ, ಜನರಿಗೆ ನೆರವಾಗುತ್ತದೆ ಎಂದು ಮಲ್ಲೇಶ್ ಬಾಬು ಅವರು ನಾಯ್ಡು ಅವರಿಗೆ ವಿವರಿಸಿದರು.

ಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಹಂಚಿಕೆ ಮಾಡಿದರೆ ದೊಡ್ಡ ವರವಾಗಲಿದೆ ಎಂದು ತಿಳಿಸಿದರು.

ಈ ಭಾಗದಲ್ಲಿ ಭೂಗರ್ಭ ಜಲಮಟ್ಟ ಭಾರೀ ಪ್ರಮಾಣದಲ್ಲಿ ಕುಸಿದಿದ್ದು, 1500 ಅಡಿ ಆಳಕ್ಕೆ ಬೋರ್‌ವೆಲ್ ತೋಡಿದರೂ ನೀರು ಸಿಗದ ಪರಿಸ್ಥಿತಿ ಇದೆ. ಸಿಕ್ಕ ನೀರು ಕೂಡ ಕುಡಿಯಲು ಯೋಗ್ಯವಾಗಿಲ್ಲ. ಕೃಷ್ಣಾ ನದಿ ಈ ಜಿಲ್ಲೆಗಳ ಸಮೀಪದಿಂದ ಹರಿಯುವುದರಿಂದ, ಅದರ ನೀರನ್ನು ಹಂಚಿಕೆ ಮಾಡಿದರೆ ದಶಕಗಳಿಂದ ನೀರಿನ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಪರಿಹಾರ ದೊರೆಯಲಿದೆ ಎಂದು ಕುಮಾರಸ್ವಾಮಿಯವರು ಹೇಳಿದರು.

ಈ ಮನವಿಗೆ ಪ್ರತಿಕ್ರಿಯಿಸಿದ ಚಂದ್ರಬಾಬು ನಾಯ್ಡು, ವಿಷಯವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಹಾಗೂ ಸಮಸ್ಯೆಯ ಬಗ್ಗೆ ತಮಗೂ ಮಾಹಿತಿ ಇರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು‌ ಅರ್ಜಿ ವಜಾ

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ದೊರೆ ಕೆಕೆ ಮಿಶ್ರಾ ಪುತ್ರನ ಬಂಧನ

'ಆ ದಿನದ ಒಪ್ಪಂದ ಮರೆತು ಬಿಟ್ರಾ'? ನಿಮ್ಮ ಸಮ್ಮುಖದಲ್ಲೇ ಮಾತಾಗಿತ್ತು ಅಲ್ವಾ? ಆಗುತ್ತೋ ಇಲ್ವೋ ಕ್ಲಿಯರ್​ ಮಾಡಿ; ಡಿಕೆ ಬ್ರದರ್ಸ್ ದುಂಬಾಲು!

ಜಾರ್ಖಂಡ್: ಶಾಲೆಯಲ್ಲಿ ಸರಸ್ವತಿ ಪೂಜೆಗೆ ಹಣ ನೀಡದ ವಿದ್ಯಾರ್ಥಿಗಳಿಗೆ 100 ಸಿಟ್ ಅಪ್ಸ್ ಶಿಕ್ಷೆ, ಊಟ ನಿರಾಕರಣೆ!

ಬಾಂಗ್ಲಾದೇಶ ಐತಿಹಾಸಿಕ ಸಂಸತ್ ಚುನಾವಣೆ: ಮತದಾನ ಪ್ರಗತಿಯಲ್ಲಿ, 50 ಲಕ್ಷ ಯುವ ಮತದಾರರು-Video

SCROLL FOR NEXT