ಹೆಬ್ಬಾಳ- ಸರ್ಜಾಪುರ ಮೆಟ್ರೋ (ಸಾಂಕೇತಿಕ ಚಿತ್ರ) online desk
ರಾಜ್ಯ

ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್!

ಈ ಮೆಟ್ರೋ ಕಾರಿಡಾರ್‌ಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಅನುಮೋದನೆ ಸ್ಥಗಿತಗೊಳಿಸಿ, ಯೋಜನೆಯನ್ನು ಮರುಪರಿಶೀಲನೆಗೆ ಕಳುಹಿಸಿದೆ.

ಬೆಂಗಳೂರು: ಹೆಬ್ಬಾಳ- ಸರ್ಜಾಪುರ ಮೆಟ್ರೋ ಯೋಜನೆಗೆ ಸಂಬಂಧಿಸಿದ ಡಿಪಿಆರ್ ಅನುಮೋದನೆಗೆ ಕೇಂದ್ರ ಸರ್ಕಾರ ನಿರಾಕರಿಸಿದೆ.

ಮೆಟ್ರೋ ದರ ಏರಿಕ ವಿಷಯವಾಗಿ ಕೇಂದ್ರ- ರಾಜ್ಯ ಸರ್ಕಾರಗಳು ಈಗಾಗಲೇ ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವುದರ ನಡುವೆ ಈ ಸುದ್ದಿ ಹೊರಬಿದ್ದಿದೆ. ಹೆಬ್ಬಾಳ-ಸರ್ಜಾಪುರ ಮೆಟ್ರೋ (ರೆಡ್ ಲೈನ್) ಹಾಗೂ ಡಬ್ಬಲ್ ಡೆಕ್ಕರ್ ಫ್ಲೈಓವರ್ ಯೋಜನೆಗೆ ರಾಜ್ಯ ಸರ್ಕಾರ ಡಿಪಿಆರ್ ಸಲ್ಲಿಸಿತ್ತು. ಡಬಲ್ ಡೆಕ್ಕರ್ ವ್ಯವಸ್ಥೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ವ್ಯಕ್ತಪಡಿಸಿದೆ.

ಈ ಮೆಟ್ರೋ ಕಾರಿಡಾರ್‌ಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಅನುಮೋದನೆ ಸ್ಥಗಿತಗೊಳಿಸಿ, ಯೋಜನೆಯನ್ನು ಮರುಪರಿಶೀಲನೆಗೆ ಕಳುಹಿಸಿದೆ. ಈ ಬಗ್ಗೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಮಾಹಿತಿ ನೀಡಿದ್ದಾರೆ.

₹28,405 ಕೋಟಿ ಡಿಪಿಆರ್‌

ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ ಸಂಬಂಧಿಸಿದಂತೆ ₹28,405 ಕೋಟಿ ವೆಚ್ಚದ ವಿವರವಾದ ಯೋಜನಾ ವರದಿ (ಡಿಪಿಆರ್) ಅನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿತ್ತು. ಆದರೆ ಯೋಜನಾ ವೆಚ್ಚ ಹೆಚ್ಚಾಗಿದೆ ಮತ್ತು ಡಬಲ್ ಡೆಕ್ಕರ್ ಸಂಯೋಜನೆಯಿಂದ ಯೋಜನೆಯ ಉದ್ದೇಶಕ್ಕೆ ಧಕ್ಕೆ ಉಂಟಾಗಬಹುದು ಎಂಬ ಕಾರಣ ಕಾರಣ ನೀಡಿ ಕೇಂದ್ರ ಸರ್ಕಾರ ಮರುಪರಿಶೀಲನೆಗೆ ವಾಪಸ್ ಕಳುಹಿಸಿ, ಯೋಜನೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಿ ಹೊಸ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದೆ.

ರಾಜ್ಯ ಸರ್ಕಾರದ ಪ್ರಸ್ತಾವನೆಯಂತೆ: ಹೆಬ್ಬಾಳ–ಸರ್ಜಾಪುರ ಮೆಟ್ರೋ ಮಾರ್ಗದ ಉದ್ದ 37 ಕಿಲೋಮೀಟರ್ ಆಗಿದ್ದು ಒಟ್ಟು 28 ಮೆಟ್ರೋ ನಿಲ್ದಾಣಗಳಿದ್ದವು. ಈ ಮಾರ್ಗ ಕಾರ್ಯರೂಪಕ್ಕೆ ಬಂದರೆ ಐಟಿ ಕಾರಿಡಾರ್‌, ಟೆಕ್ ಪಾರ್ಕ್‌ಗಳು ಮತ್ತು ವಸತಿ ಪ್ರದೇಶಗಳಿಗೆ ಭಾರೀ ಅನುಕೂಲವಾಗಲಿದೆ ಎಂಬ ನಿರೀಕ್ಷೆ ಇತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!