ಸಾಧುಕೋಕಿಲಾ ಮತ್ತು ಮಂಡ್ಯರಮೇಶ್ 
ರಾಜ್ಯ

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಂಡ್ಯ ರಮೇಶ್ - ಸಾಧು ಕೋಕಿಲಾಗೆ ಬಿಗ್‌ ರಿಲೀಫ್; ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

2017ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸಾಕ್ಷ್ಯಧಾರ ಕೊರತೆ ಹಿನ್ನೆಲೆ ರದ್ದು ಮಾಡಿ ಹೈಕೋರ್ಟ್‌ ಆದೇಶ ನೀಡಿದೆ. ಆ ಮೂಲಕ ಕನ್ನಡದ ಹಿರಿಯ ನಟರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಬೆಂಗಳೂರು: ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಹೈಕೋರ್ಟ್‌ ರಿಲೀಫ್‌ ನೀಡಿದೆ.

2017ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸಾಕ್ಷ್ಯಧಾರ ಕೊರತೆ ಹಿನ್ನೆಲೆ ರದ್ದು ಮಾಡಿ ಹೈಕೋರ್ಟ್‌ ಆದೇಶ ನೀಡಿದೆ. ಆ ಮೂಲಕ ಕನ್ನಡದ ಹಿರಿಯ ನಟರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

2017ರಲ್ಲಿ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್‌ ಅವರು ಮೈಸೂರಿನ ಪಾರ್ಲರ್‌ವೊಂದರಲ್ಲಿ ಮಸಾಜ್‌ ಮಾಡಿಸಿಕೊಂಡಿದ್ದರು. ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಇಬ್ಬರು ನಟರು ತನಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆಂದು ಆರೋಪವನ್ನು ಮಾಡಿ, ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.

ಆ ಸಮಯದಲ್ಲಿ ಪ್ರಕರಣ ಸಂಬಂಧ ಇಬ್ಬರು ನಟರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿತ್ತು. 20179ರಲ್ಲಿ ಹೈಕೋರ್ಟ್‌ ಪ್ರಕರಣದ ವಿಚಾರಣೆಗೆ ತಡೆ ನೀಡಿತ್ತು. ಇದೀಗ ಸಾಕ್ಷಾಧಾರಗಳ ಕೊರತೆಯ ಹಿನ್ನೆಲೆ ಪ್ರಕರಣವನ್ನು ರದ್ದು ಮಾಡಲಾಗಿದೆ.

ಎಫ್‌ಐಆರ್‌ನಲ್ಲಿ ಹೆಸರಿಲ್ಲ, ಹಾಗೂ ಆರೋಪಕ್ಕೆ ಸಾಕ್ಷ್ಯಗಳಿಲ್ಲವೆಂದು ಮಂಡ್ಯ ರಮೇಶ್ ಮತ್ತು ಸಾಧು ಕೋಕಿಲ ಪರವಾಗಿ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ವಾದ ಮಂಡಿಸಿದ್ದರು. ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel